ಸ್ಥಳೀಯ ಸಂಸ್ಥೆ ಚುನಾವಣೆಗೆ ಪೂರ್ವ ಸಿದ್ಧತೆ ಕೈಗೊಳ್ಳಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕರೆ

KannadaprabhaNewsNetwork |  
Published : Feb 08, 2026, 02:00 AM IST
7ಕೆಎಂಎನ್ ಡಿ21 | Kannada Prabha

ಸಾರಾಂಶ

ರೈತರಿಗಾಗಿ ನಾಲಾ ಆಧುನೀಕರಣ, ಏತ ನೀರಾವರಿ ಅಭಿವೃದ್ಧಿ, ತಾಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ನೀರು ಸೌಲಭ್ಯ ಸೇರಿದಂತೆ ಹಲವು ಯೋಜನೆ ತಂದಿದ್ದು, ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತಹಾಕಿ ಎಂದು ಧೈರ್ಯದಿಂದ ಕೇಳುವ ರೀತಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಗ್ರಾಮೀಣ ಜನರ ನೆಮ್ಮದಿಗೆ ವರದಾನವಾಗಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಹಾಗೂ ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕಾರ್ಯಕರ್ತರು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟು ಸ್ಥಳೀಯ ಸಂಸ್ಥೆ ಚುನಾವಣೆಗೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಕರೆ ನೀಡಿದರು.

ಪಟ್ಟಣದ ತಾಪಂ ಆವರಣದ ಶಾಸಕರ ಕಚೇರಿಯಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದೆ ಬರುವ ಗ್ರಾಪಂ, ತಾಪಂ, ಜಿಪಂ ಹಾಗೂ ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಿನಿಂದಲೇ ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದರು.

ತಾಲೂಕಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪದವಿ ಕಾಲೇಜು ಕಟ್ಟಡ ನಿರ್ಮಾಣ, ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ಸ್ಮಾರ್ಟ್ ಕ್ಲಾಸ್ ಶಿಕ್ಷಣ, ಎಂಜಿನಿಯರ್ ಕೊರ್ಸ್ ಗಳು ಆರಂಭ, ಸಾರ್ವಜನಿಕರು ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆದಾಟ ತಪ್ಪಿಸಲು ಎಲ್ಲಾ ಸರ್ಕಾರಿ ಕಚೇರಿಗಳು ಒಳಗೊಂಡ ಪ್ರಜಾಸೌಧ ನಿರ್ಮಾಣಕ್ಕೆ ಮುಂದಾಗಿದ್ದೇನೆ ಎಂದರು.

ರೈತರಿಗಾಗಿ ನಾಲಾ ಆಧುನೀಕರಣ, ಏತ ನೀರಾವರಿ ಅಭಿವೃದ್ಧಿ, ತಾಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ನೀರು ಸೌಲಭ್ಯ ಸೇರಿದಂತೆ ಹಲವು ಯೋಜನೆ ತಂದಿದ್ದು, ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತಹಾಕಿ ಎಂದು ಧೈರ್ಯದಿಂದ ಕೇಳುವ ರೀತಿಯಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದರು.

ವೈಯಕ್ತಿಕ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಸಂಘಟನೆಗೆ ಮುಖಂಡರು ಹಾಗೂ ಕಾರ್ಯಕರ್ತರು ಮುಂದಾಗಬೇಕು. ಪ್ರತಿಯೊಂದು ಗ್ರಾಮಕ್ಕೆ ತೆರಳಿ ಯುವ ಸಮೂಹವನ್ನು ಸಂಘಟಿಸಿ ಕಾಂಗ್ರೆಸ್ ಅನ್ನು ಸದೃಢ ಮಾಡಬೇಕು. ಬೂತ್ ಏಜೆಂಟ್‌ಗಳು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿರುವವರನ್ನು ಸೇರ್ಪಡೆಗೊಳಿಸಬೇಕು. ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿರಾಜು, ದೊಡ್ಡಯ್ಯ, ಮನ್ಮುಲ್ ನಿರ್ದೇಶಕರಾದ ಕೃಷ್ಣೇಗೌಡ, ಆರ್.ಎನ್ ವಿಶ್ವಾಸ್, ಜಿಪಂ ಮಾಜಿ ಸದಸ್ಯರಾದ ಚಂದ್ರಕುಮಾರ್, ಸುಷ್ಮಾರಾಜು, ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಅಧ್ಯಕ್ಷ ಮಾದೇಶ್, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಮುಖಂಡರಾದ ಅಮೃತ್‌ ಕಂಠೇಶ್, ಸಿದ್ದೇಗೌಡ, ಪುಟ್ಟಬಸವಯ್ಯ, ಬಂಕ್ ಮಹದೇವು, ವೇದಮೂರ್ತಿ, ಮಹೇಶ್ ಸೇರಿದಂತೆ ಕಿರುಗಾವಲು, ಕಸಬ, ಹಲಗೂರು, ಬಿಜಿಪುರ ಮಳವಳ್ಳಿ ಟೌನ್ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು