ಉತ್ತಮ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ

KannadaprabhaNewsNetwork | Published : Jan 7, 2024 1:30 AM

ಸಾರಾಂಶ

ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಸ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳಲ್ಲಿ ಚನ್ನಗಿರಿ ತಾಲೂಕು ದಾವಣಗೆರೆ ಪ್ರಥಮ ಸ್ಥಾನದಲ್ಲಿರಬೇಕು ಎನ್ನುವುದು ನನ್ನ ಆಶಯ. ಉತ್ತಮ ಫಲಿತಾಂಶ ಬರುವಂತೆ ಉಪನ್ಯಾಸಕರು-ಶಿಕ್ಷಕರುಗಳು ವಿದ್ಯಾರ್ಥಿಗಳನ್ನು ತಯಾರಿ ಮಾಡಬೇಕು. ಏನಾದರೂ ತೊಂದರೆಗಳಿದ್ದರೆ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಬಗೆಹರಿಸಲಾಗುವುದು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಉದ್ಘಾಟಿಸಿ ಶಾಸಕ ಬಸವರಾಜ ಶಿವಗಂಗಾಕನ್ನಡಪ್ರಭ ವಾರ್ತೆ ಚನ್ನಗಿರಿ

ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಸ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳಲ್ಲಿ ಚನ್ನಗಿರಿ ತಾಲೂಕು ದಾವಣಗೆರೆ ಪ್ರಥಮ ಸ್ಥಾನದಲ್ಲಿರಬೇಕು ಎನ್ನುವುದು ನನ್ನ ಆಶಯ. ಉತ್ತಮ ಫಲಿತಾಂಶ ಬರುವಂತೆ ಉಪನ್ಯಾಸಕರು-ಶಿಕ್ಷಕರುಗಳು ವಿದ್ಯಾರ್ಥಿಗಳನ್ನು ತಯಾರಿ ಮಾಡಬೇಕು. ಏನಾದರೂ ತೊಂದರೆಗಳಿದ್ದರೆ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಬಗೆಹರಿಸಲಾಗುವುದು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.

ಅವರು ಶನಿವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ, 2023-24ನೇ ಸಾಲಿನ ಕ್ರೀಡಾ ಸಾಂಸ್ಕೃತಿಕ, ಎನ್‌ಸಿಸಿ, ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಚನ್ನಗಿರಿ ತಾಲೂಕು ಉತ್ತಮ ಸಾಧನೆ ಮಾಡಬೇಕು ಎನ್ನುವುದು ನನ್ನ ಗುರಿ. ಪ್ರಸ್ತುತ ಸಮಾಜಕ್ಕೆ ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯದ ಸೇವೆ ಅವಶ್ಯಕವಾಗಿದ್ದು, ಇದನ್ನು ಕ್ಷೇತ್ರದ ಪ್ರತಿಯೊಬ್ಬರಿಗೆ ಸಮರ್ಪಕವಾಗಿ ತಲುಪಿಸಲು ಪ್ರಯತ್ನಿಸುತ್ತೇನೆ ಎಂದರು.ಕ್ಷೇತ್ರದಾದ್ಯಂತ ಎಲ್ಲಾ ಸರ್ಕಾರಿ ಶಾಲೆ-ಕಾಲೇಜುಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲಾಗಿದೆ. ಅವಶ್ಯಕತೆ ಇರುವ ಶಾಲೆಗಳಲ್ಲಿ ಕಟ್ಟಡಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಚನ್ನಗಿರಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ 150 ಬೆಡ್‌ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.ಚನ್ನಗಿರಿ ವಿಧಾನಸಭಾ ಕ್ಷೇತ್ರದ ಜನರು ನನ್ನ ಮೇಲೆ ಅಪಾರ ಭರವಸೆಯನ್ನಿಟ್ಟು ಅಧಿಕ ಮತಗಳನ್ನು ನೀಡಿ ಶಾಸಕನನ್ನಾಗಿ ಮಾಡಿದ್ದಾರೆ. ಜನರ ನಂಬಿಕೆಗೆ ಮೋಸ ಮಾಡಲ್ಲ. ಐದು ವರ್ಷಗಳ ಅಧಿಕಾರದ ಅವಧಿಯಲ್ಲಿ ಹೆಚ್ಚಿನ ಶ್ರಮ ವಹಿಸಿ, ಕ್ಷೇತ್ರದ ಅಭಿವೃದ್ಧಿ ಪಡಿಸಲಾಗುವುದು ಎಂದರು.ನಾವು ಮಾಡಿಸುವ ರಸ್ತೆಗಳು, ಕಟ್ಟಡಗಳು, ಇನ್ನಿತರೆ ಅಭಿವೃದ್ಧಿ ಕೆಲಸಗಳು ಮುಂದೆ ನಶಿಸಿ ಹೋಗುತ್ತವೆ. ಆದರೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ, ಅವರ ಜೀವಿತದ ಕೊನೆಯ ವರೆಗೂ ಅವರ ಜೊತೆಯಲ್ಲಿರುತ್ತದೆ ಅದ್ದರಿಂದ ಶಿಕ್ಷಣ ಕ್ಷೇತ್ರಕ್ಕೆ ನನ್ನ ಮೊದಲ ಆದ್ಯತೆ ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಆರ್.ಸಿದ್ದೇಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಆರ್.ಮಂಜುನಾಥ್, ವಕೀಲ ಶಾಂತವೀರಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಎಚ್.ಬಿ.ರುದ್ರಯ್ಯ, ನಟರಾಜ್, ಭೌವ್ಯ, ವೆಂಕಟೇಶ್, ರಾಮಚಂದ್ರಪ್ರಜಾಪತ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

Share this article