ಹವಾಮಾನ ಬದಲಾವಣೆ ಪ್ರತಿಕೂಲ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿ

KannadaprabhaNewsNetwork |  
Published : May 10, 2026, 03:00 AM IST
(ಫೋಟೊಬಿಕೆಟಿ1, ರಾಜ್ಯ ಹವಾಮಾನ ಬದಲಾವಣೆ ಕ್ರೀಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡ ಒಂದು ದಿನದ ತರಬೇತಿಗೆ ಜಿಲ್ಲಾಧಿಕಾರಿ ಸಂಗಪ್ಪ ಶುಕ್ರವಾರ ಚಾಲನೆ ನೀಡಿದರು.) | Kannada Prabha

ಸಾರಾಂಶ

ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮಗಳು ಹಾಗೂ ಜಿಲ್ಲಾ ನೈಸರ್ಗಿಕ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಇಲಾಖೆಗಳು ಹೇಗೆ ಚುರುಕಾಗಿ ಕಾರ್ಯವಹಿಸಬಹುದು ಎಂಬುದನ್ನು ತಿಳಿದುಕೊಳ್ಳಬೇಕು. ಈ ತರಬೇತಿಯ ಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹವಾಮಾನ ಬದಲಾವಣೆಯ ಪ್ರತಿಕೂಲ ಪರಿಣಾಮಗಳು ಹಾಗೂ ಜಿಲ್ಲಾ ನೈಸರ್ಗಿಕ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಇಲಾಖೆಗಳು ಹೇಗೆ ಚುರುಕಾಗಿ ಕಾರ್ಯವಹಿಸಬಹುದು ಎಂಬುದನ್ನು ತಿಳಿದುಕೊಳ್ಳಬೇಕು. ಈ ತರಬೇತಿಯ ಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲಾ ಪಂಚಾಯತಿ ಹಳೆಯ ಸಭಾಭವನದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಪಂಚಾಯತ ಸಹಯೋಗದಲ್ಲಿ ರಾಜ್ಯ ಹವಾಮಾನ ಬದಲಾವಣೆ ಕ್ರೀಯಾ ಯೋಜನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ

ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಈ ಯೋಜನೆಯಡಿಯಲ್ಲಿ ಹವಾಮಾನ ಬದಲಾವಣೆಯ ಕುರಿತ ಕಾರ್ಯ ಅಂಶಗಳನ್ನು ಆಧರಿಸಿ, ವಿವಿಧ ಇಲಾಖೆಗಳು 2025-2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳನ್ನು ಗುರಿಗಳೊಂದಿಗೆ ನಿಗದಿಪಡಿಸಿವೆ. ಈ ಸೂಚಕಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಪಾಲುದಾರ ಸಂಸ್ಥೆಗಳ ಸಾಮರ್ಥ್ಯ ವೃದ್ಧಿ ಅತ್ಯವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ, ಎಂಪ್ರಿ ಸಂಸ್ಥೆಯು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದರ ಸದುಪಯೋಗವನ್ನು ಅಧಿಕಾರಿಗಳು ಪಡೆದುಕೊಳ್ಳಲು ತಿಳಿಸಿದರು.

ಡಾ.ಪವಿತ್ರಾ ಪಿ. ನಾಯಕ್ ಅವರು ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು. ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ ಹಾಗೂ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಜಿಲ್ಲಾಸ್ಥರದ ದತ್ತಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಜಲ ಸಂಪನ್ಮೂಲ ವಲಯಕ್ಕೆ ಸಂಬಂಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಜಲ ಸಂಪನ್ಮೂಲ ತಜ್ಞರು ಡಾ. ಶಶಿಕುಮಾರ್ ಎನ್ ರವರು ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ್ ತೇಲಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಸಂಪನ್ಮೂಲ ವ್ಯಕ್ತಿಗಳಾಗಿ ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿಗಳಾದ ಡಾ. ಪವಿತ್ರಾ ಪಿ. ನಾಯಕ್, ಜಲ ಸಂಪನ್ಮೂಲ ತಜ್ಞರು ಡಾ.ಶಶಿಕುಮಾರ್, ಕನರ್ಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಎನ್ ಎನ್.ಆರ್.ಡಿ.ಎಂ.ಎಸ್ ಅಧಿಕಾರಿ ಚಂದ್ರಶೇಖರ್ ಗುಂಡ್ ಉಪಸ್ಥಿತರಿದ್ದರು. ತರಬೇತಿ ಕಾರ್ಯಕ್ರಮದಲ್ಲಿ 46 ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಸಂಸ್ಥೆಗಳ ಸದಸ್ಯರು ಹಾಗೂ ಇತರೆ ಪಾಲುದಾರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ ತೆಕ್ಕೆಗೆ ಬರಲಿವೆ ಇನ್ನಷ್ಟು ಸಮಾಜಗಳು
ಭಂಟನೂರ ಆರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟನೆ