ಲೋಕಸಭಾ ಚುನಾವಣೆಗೆ ಸಿದ್ಧತೆ: ತುಷಾರ್‌

KannadaprabhaNewsNetwork |  
Published : Apr 05, 2024, 01:46 AM ISTUpdated : Apr 05, 2024, 08:36 AM IST
BBMP | Kannada Prabha

ಸಾರಾಂಶ

ಬೆಂಗಳೂರಿನ ಮೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ, ವಿವಿಧ ಸಮಿತಿಗಳ ರಚನೆ, ಮತದಾರರಲ್ಲಿ ಜಾಗೃತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚುನಾವಣಾ ಆಯೋಗ ನೇಮಿಸಿದ ಸಾಮಾನ್ಯ ವೀಕ್ಷಕರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ವಿವರಣೆ ನೀಡಿದರು.

 ಬೆಂಗಳೂರು :  ಬೆಂಗಳೂರಿನ ಮೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆ, ವಿವಿಧ ಸಮಿತಿಗಳ ರಚನೆ, ಮತದಾರರಲ್ಲಿ ಜಾಗೃತಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚುನಾವಣಾ ಆಯೋಗ ನೇಮಿಸಿದ ಸಾಮಾನ್ಯ ವೀಕ್ಷಕರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ವಿವರಣೆ ನೀಡಿದರು.

ನಗರದಲ್ಲಿ ನಡೆದ ಸಭೆಯಲ್ಲಿ ಸಾಮಾನ್ಯ ವೀಕ್ಷಕರಿಗೆ ಈ ವಿಷಯ ತಿಳಿಸಿದ ಅವರು, ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳ ಪೈಕಿ 24 ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಿಗೆ ಬರಲಿವೆ. ಉಳಿದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಒಂದು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ವಿಧಾನಸಭಾ ಕ್ಷೇತ್ರಗಳು ಹಂಚಿಕೆಯಾಗಿವೆ ಎಂದು ಮಾಹಿತಿ ನೀಡಿದರು.

ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಮೇಲ್ವಿಚಾರಣೆ ಕುರಿತಂತೆ ಮಾದರಿ ನೀತಿ ಸಂಹಿತೆ ಸೆಲ್, ಚುನಾವಣಾ ವೆಚ್ಚಗಳ ನಿರ್ವಹಣಾ ಸೆಲ್, ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ, ನಿಯಂತ್ರಣ ಕೊಠಡಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿಕೊಂಡು ಆ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಿಂದ ಸ್ವೀಪ್ ಚಟುವಟಿಕೆಗಳನ್ನು ನಡೆಸಿ ನಾಗರಿಕರಲ್ಲಿ ಮತದಾನ ಮಾಡುವ ಕುರಿತು ಹಾಗೂ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಅರಿವು ಮೂಡಿಸಲು ಕೆಲಸ ಮಾಡಲಾಗುತ್ತಿದೆ ಎಂದರು.

ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿಯಲ್ಲಿ ದೃಶ್ಯ ಮಾಧ್ಯಮ, ಸಾಮಾಜಿಕ ಜಾಲತಾಣ, ರೇಡಿಯೋ ಹಾಗೂ ಮುದ್ರಣ ಮಾಧ್ಯಮಗಳ ಮೇಲೆ ನಿಗಾ ಹಾಗೂ ಮೇಲ್ವಿಚಾರಣೆ ಮಾಡಲಾಗುತ್ತದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ನೀಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಎಂಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಚುನಾವಣಾಧಿಕಾರಿಗಳಾದ ಡಾ। ಕೆ.ಹರೀಶ್ ಕುಮಾರ್, ಕೆ.ಎ.ದಯಾನಂದ, ವಿನೋತ್ ಪ್ರಿಯಾ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ