ಪ್ರಿಯಾಂಕಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆ

KannadaprabhaNewsNetwork |  
Published : Apr 22, 2024, 02:00 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ    | Kannada Prabha

ಸಾರಾಂಶ

ಭಾರತದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಏ.23ರಂದು ಆಗಮಿಸುತ್ತಿದ್ದು, ಅವರ ಭಾಷಣ ಕೇಳುವ ಕುತೂಹಲ ಸಹಜವಾಗಿ ಜನರಲ್ಲಿ ಹೆಚ್ಚು ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಚಿತ್ರದುರ್ಗ: ಭಾರತದ ಭವಿಷ್ಯದ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಏ.23ರಂದು ಆಗಮಿಸುತ್ತಿದ್ದು, ಅವರ ಭಾಷಣ ಕೇಳುವ ಕುತೂಹಲ ಸಹಜವಾಗಿ ಜನರಲ್ಲಿ ಹೆಚ್ಚು ಇದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಕಾರ್ಯಕ್ರಮದ ಸಿದ್ಧತಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಅಂದು ಮಧ್ಯಾಹ್ನ 2.30 ಗಂಟೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಆಯೋಜಿಸಿರುವ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ನಡೆಸಲು ಸಿದ್ಧತೆ ಭರದಿಂದ ಸಾಗುತ್ತಿದೆ. 25 ಸಾವಿರ ಆಸನಗಳನ್ನು ಹಾಕಿಸಲಾಗಿದೆ ಎಂದರು.

ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪಕ್ಷ ಘೋಷಣೆ ಮಾಡಿದಾಗ ಸಾಧ್ಯವೇ ಇಲ್ಲ ಇದು ಸುಳ್ಳು ಎಂದು ವಿರೋಧ ಪಕ್ಷ ಅಪ್ರಚಾರ ನಡೆಸಿದರು. ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆ ಯೋಜನೆಗಳನ್ನು ಜಾರಿಗೊಳಿಸಿದ ಬಳಿಕ ರಾಜ್ಯ ದಿವಾಳಿ ಆಗಲಿದೆ ಎಂದು ಬಿಜೆಪಿಗರು ಆರೋಪಿಸಿದರು. ಆದರೆ, ಯೋಜನೆಗಳು ಸುಗಮವಾಗಿ ಅನುಷ್ಠಾನಗೊಂಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಭರದಿಂದ ಸಾಗುತ್ತಿವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದ ಶೈಲಿಗೆ ಬಿಜೆಪಿಯವರು ಬೆಚ್ಚಿದ್ದಾರೆ. ಆರೋಪ ಮಾಡಲು ಏನೂ ಇಲ್ಲದೆ ಕಾಂಗ್ರೆಸ್ ಅಧಿಕಾರದಲ್ಲಿ ಬರಗಾಲ ಎಂಬ ಅವೈಜ್ಞಾನಿಕ, ಮೂಢನಂಬಿಕೆ ಮಾತುಗಳನ್ನು ಆಡುತ್ತಿದ್ದಾರೆ. ಈ ಹೇಳಿಕೆ ಮಧ್ಯೆಯೇ ರಾಜ್ಯದಲ್ಲಿ ಮಳೆ ಆಗುತ್ತಿದೆ. ವಿಜ್ಞಾನದ ತಿಳಿವಳಿಕೆ ಇಲ್ಲದವರು, ಸಾಮಾನ್ಯ ವ್ಯಕ್ತಿಗೆ ಇರುವಷ್ಟು ಜ್ಞಾನ ಇಲ್ಲದ ಬಿಜೆಪಿಯವರು ಪ್ರಕೃತಿ ಸಹಜ ಮುನಿಸನ್ನು ಕಾಂಗ್ರೆಸ್ ಮೇಲೆ ಆರೋಪಿಸುವ ಮೂಲಕ ನಗೆಪಾಟಿಲು ಆಗುತ್ತಿದ್ದಾರೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‍ಪೀರ್, ಮುಖಂಡರಾದ ಪ್ರಕಾಶ ರಾಮನಾಯ್ಕ, ಎನ್.ಡಿ.ಕುಮಾರ್, ಓ.ಶಂಕರ್, ಬಿ.ಪಿ.ಪ್ರಕಾಶಮೂರ್ತಿ, ಡಿ.ಎನ್.ಮೈಲಾರಪ್ಪ, ವಕೀಲ ಶರಣಪ್ಪ, ರವಿಕುಮಾರ್ ಇತರರಿದ್ದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''