ಮಾನವ ಸರಪಳಿ ಯಶಸ್ವಿಗೊಳಿಸಲು ಸಿದ್ಧತೆ

KannadaprabhaNewsNetwork |  
Published : Sep 15, 2024, 01:55 AM IST
ಬೈಲಹೊಂಗಲ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಗ್ರೇಡ್ 2 ತಹಸೀಲ್ದಾರ ಬಿ.ಜಿ.ಕುಲಕರ್ಣಿ ಮಾತನಾಡಿದರು. | Kannada Prabha

ಸಾರಾಂಶ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ತಾಲೂಕು ವ್ಯಾಪ್ತಿಯ ಸುಮಾರು15 ಕಿ.ಮೀ.ರಸ್ತೆಯಲ್ಲಿ 15 ಸಾವಿರ ಜನ ಸೇರುತ್ತಿದ್ದು, ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಗ್ರೇಡ್ 2 ತಹಸೀಲ್ದಾರ ಬಿ.ಜಿ. ಕುಲಕರ್ಣಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ತಾಲೂಕು ವ್ಯಾಪ್ತಿಯ ಸುಮಾರು15 ಕಿ.ಮೀ.ರಸ್ತೆಯಲ್ಲಿ 15 ಸಾವಿರ ಜನ ಸೇರುತ್ತಿದ್ದು, ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಗ್ರೇಡ್ 2 ತಹಸೀಲ್ದಾರ ಬಿ.ಜಿ. ಕುಲಕರ್ಣಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಕನ್ನಡಪರ ಮತ್ತು ವಿವಿಧ ಸಂಘಟನೆಗಳು, ಗ್ರಾಪಂ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಲು ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ, ಉಪಹಾರ ವ್ಯವಸ್ಥೆ, ಆರೋಗ್ಯ, ವಾಹನಗಳ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆಯ ಸಹಕಾರ ಕೋರಲಾಗಿದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಶಿರಸ್ತೇದಾರ ಜೆ.ವಿ. ನಿಡೋಣಿ, ಸಿಬ್ಬಂದಿ ಲಕ್ಷ್ಮೀ ಕೂಗನವರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಳಿಂಗ ಸರ್ಪ ರಕ್ಷಣೆ
ಸಂವಿಧಾನ ದಿನಾಚರಣೆ: ವಿವಿಧ ಸ್ಪರ್ಧೆ ಆಯೋಜನೆ