ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ನ. 28ರಂದು ಬೆಳಗ್ಗೆ 10 ಗಂಟೆಗೆ ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರ 88ನೇ ಜನ್ಮದಿನೋತ್ಸವ ಪ್ರಯಕ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಧಾರವಾಡ:
ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ನ. 28ರಂದು ಬೆಳಗ್ಗೆ 10 ಗಂಟೆಗೆ ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಡಾ. ಎಂ.ಎಂ. ಕಲಬುರ್ಗಿ ಅವರ 88ನೇ ಜನ್ಮದಿನೋತ್ಸವ ಪ್ರಯಕ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪ್ರತಿಷ್ಠಾನ ಪ್ರಕಟಣೆ ನೀಡಿದ್ದು ಚಿತ್ರದುರ್ಗದ ಹಿರಿಯ ಸಂಶೋಧಕ ಡಾ. ಲಕ್ಷ್ಮಣ ತೆಲಗಾವಿ ಅವರಿಗೆ 2026ನೇ ಸಾಲಿನ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಸಂಶೋಧನ ಪ್ರಶಸ್ತಿ ಮತ್ತು ಯಾದಗಿರಿ ಜಿಲ್ಲೆಯ ಕೆಂಭಾವಿಯ ಸಂಗೀತ ಕಲಾವಿದ ಬಸವರಾಜ ಜೆ. ಪೂಜಾರಿ (ಭಂಟನೂರ) ಅವರಿಗೆ ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ವಚನ ಸಂಗೀತ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕನ್ನಡ ಸಂಶೋಧನ ಮಾರ್ಗ ಸಂಪುಟ-3 ಗ್ರಂಥ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಚನ್ನಪ್ಪ ಕಟ್ಟಿ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡುವರು. ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಅಧ್ಯಕ್ಷತೆ ವಹಿಸಲಿದ್ದು ವಿಶ್ರಾಂತ ಪ್ರಾಧ್ಯಾಪಕ ಡಾ. ವಿ.ಎಸ್. ಮಾಳಿ ಅವರು ಕನ್ನಡ ಸಂಶೋಧನ ಮಾರ್ಗ ಸಂಪುಟ-3 ಗ್ರಂಥ ಬಿಡುಗಡೆ ಮಾಡುವರು. ಪ್ರತಿಷ್ಠಾನದ ಸದಸ್ಯರಾದ ಪ್ರಿ. ಶಶಿಧರ ತೋಡಕರ ಅವರು ಅಭಿನಂದನಾ ನುಡಿಗಳನ್ನಾಡುವರು. ಉಮಾದೇವಿ ಎಂ. ಕಲಬುರ್ಗಿ ಅವರು ಹಾಗೂ ಪ್ರತಿಷ್ಠಾನದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.