ಬಾಗಲಕೋಟೆ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೌಶಲ ಅಭಿವೃದ್ಧಿಯ ಮಹತ್ವವನ್ನು ಅರಿಯಬೇಕಿದೆ. ತಮ್ಮ ಶೈಕ್ಷಣಿಕ ಮತ್ತು ವೃತ್ತಿ ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಕೌಶಲ್ಯಾಧಾರಿತ ಕಲಿಕೆಯನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಬಾಗಲಕೋಟೆಯ ಟಿ.ಟಿ.ಸಿ ಹಾಗೂ ಪಿ.ಎನ್.ಜಿಯ ಕ್ಯಾಂಪಸ್ ಅಂಬಾಸಿಡರ್ ಪೂರ್ಣಿಮಾ ಮನ್ನುರಮಠ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ಆರ್.ಮೂಗನೂರಮಠ ಮಾತನಾಡಿ. ಇಂದಿನ ವೇಗದ ಜಗತ್ತಿನಲ್ಲಿ ಕೆಲಸದ ಸ್ಥಳದಲ್ಲಿ ಅಂಕಗಳಿಗಿಂತ ಕೌಶಲಗಳ ಜ್ಞಾನದ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ, ಅವರು ತಮ್ಮ ಸೃಜನಶೀಲ ಸಾಮರ್ಥ್ಯವನ್ನು ಅರ್ಥಸಿಕೊಳ್ಳುತ್ತಾರೆ. ಮಾತಾನಾಡುವ ಹಾಗೂ ಬರೆವಣಿಗೆಯಲ್ಲಿ ಕೌಶಲ ಇರಬೇಕು. ಭಾಷೆಯ ಪ್ರಭಾವದ ಹಿಂದಿನ ಧ್ವನಿ ಮೇಲೆ ಹಿಡಿತವಿರಬೇಕು. ಇನ್ನೊಬ್ಬರೊಂದಿಗೆ ಹೇಗೆ ವರ್ತಿಸಬೇಕು ಎಂಬುದು ತಿಳಿದುಕೊಳ್ಳುವುದು ಆವಶ್ಯಕವಾಗಿದ್ದು, ಮೃದು ಕೌಶಲವು ನಮ್ಮ ನೈಜತೆಯನ್ನು ಸೂಚಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಎಸ್.ವಿ.ಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಘಟಕದ ಸಂಯೋಜಕರಾದ ಡಾ.ಎ.ಯು. ರಾಠೋಡ, ಮಾದರಿ ವಿದ್ಯಾರ್ಥಿ ವಿದ್ಯಾರ್ಥಿನಿಗಳಾದ ವಿಜಯ ಲಮಾಣಿ, ಐಶ್ವರ್ಯ ಕೊಡೆಕಲ್ಲ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.