ಧಾರವಾಡ:
ರಂಗಾಯಣದ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಸಾಂಸ್ಕೃತಿಕ ಲೋಕ ಆರ್ಟ್ ಮತ್ತು ಕಲ್ಚರಲ್ ಅಕಾಡೆಮಿಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಾನಪದ ಉತ್ಸವದ ಅಧ್ಯಕ್ಷತೆ ವಹಿಸಿದ್ದ ಅವರು, ಜಾನಪದ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಹಾಗೂ ವಿವಿಧ ಕಲಾ ಪ್ರಕಾರಗಳು ನಮ್ಮ ಗ್ರಾಮೀಣ ಬದುಕಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿವೆ. ಆಧುನಿಕತೆಯ ಭರಾಟೆಯಲ್ಲಿ ಅನೇಕ ಜಾನಪದ ಕಲಾ ಪ್ರಕಾರಗಳು ಮರೆಯಾಗುವ ಆತಂಕವಿದೆ. ಇಂತಹ ಸಂದರ್ಭದಲ್ಲಿ ಜಾನಪದ ಉತ್ಸವಗಳ ಮೂಲಕ ಕಲಾವಿದರಿಗೆ ವೇದಿಕೆ ಕಲ್ಪಿಸುವ ಜತೆಗೆ ಯುವಜನಾಂಗದಲ್ಲಿ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅರಿವು ಮೂಡಿಸುವುದು ಅತ್ಯಂತ ಅಗತ್ಯ ಎಂದರು.
ಡಿವೈಎಸ್‌ಪಿ ಗಿರೀಶ್ ಬೋಜಣ್ಣವರ ಮಾತನಾಡಿ, ಜಾನಪದ ಕಲೆಗಳು ಕೇವಲ ಮನರಂಜನೆಯ ಸಾಧನಗಳಲ್ಲ. ಅವು ನಮ್ಮ ಪೂರ್ವಜರ ಜೀವನಶೈಲಿ, ಸಂಸ್ಕೃತಿ, ಆಚಾರ-ವಿಚಾರ ಮತ್ತು ಸಾಮಾಜಿಕ ಬದುಕಿನ ಪ್ರತಿಬಿಂಬವಾಗಿವೆ. ಇಂತಹ ಕಾರ್ಯಕ್ರಮಗಳ ಮೂಲಕ ಯುವಜನಾಂಗಕ್ಕೆ ನಮ್ಮ ಸಾಂಸ್ಕೃತಿಕ ಪರಂಪರೆಯ ಪರಿಚಯ ಮಾಡಿಕೊಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದರು.ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಮಂಜುನಾಥ ಹಗೇದಾರ, ಕರ್ನಾಟಕ ರಕ್ಷಣಾ ವೇದಿಕೆ ಸಂಚಾಲಕ ರುದ್ರೇಶ ಹಳವದ, ಶಿಕ್ಷಕ ಸಂತೋಷ ಪೂರ್ವಿಮಠ, ಸುವರ್ಣ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಜಯಂತಿಲಾಲ್ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಯಕಯೋಗಿ ಪ್ರಶಸ್ತಿಯನ್ನು ಅನಿಲ ಸಾಮೇಲಕರ, ಉಮೇಶ ಮೇಟಿ, ಅಶೋಕ ಬಿ. ಅವರಿಗೆ ನೀಡಿ ಗೌರವಿಸಲಾಯಿತು.