ಕನ್ನಡ ಶಾಲೆ ಸಶಕ್ತವಾದರೆ ಮಾತ್ರ ಕನ್ನಡದ ಸಂರಕ್ಷಣೆ: ಡಾ. ಚಿನ್ನಪ್ಪ ಗೌಡ

KannadaprabhaNewsNetwork |  
Published : Nov 28, 2024, 12:32 AM IST
ಪ್ರೊ.ಚಿನ್ನಪ್ಪ ಗೌಡ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಸಮ್ಮೇಳನ ಕೇವಲ ಜಾತ್ರೆ, ಉತ್ಸವಕ್ಕೆ ಸೀಮಿತವಾಗಬಾರದು. ಈಗ ಸಮ್ಮೇಳನಕ್ಕಾಗಿ ವ್ಯಯವಾಗುತ್ತಿರುವ ಕೋಟ್ಯಂತರ ರು. ಹಣವನ್ನು ಆದಷ್ಟು ಮಿತಗೊಳಿಸಬೇಕು. ಆ ಮೊತ್ತವನ್ನು ಜಿಲ್ಲೆಯ ಅಥವಾ ತಾಲೂಕುಗಳ ಕನ್ನಡ ಶಾಲೆಗಳ ಬಲವರ್ಧನಗೆ ಬಳಸಬೇಕು ಎಂದು ಡಾ. ಚಿನ್ನಪ್ಪ ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಕನ್ನಡ ಭಾಷೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕನ್ನಡ ಶಾಲೆಗಳನ್ನು ಉಳಿಸುವುದು ಅತಿ ಅಗತ್ಯ. ರಾಜ್ಯದಲ್ಲಿ ಕನಿಷ್ಠ ಹಿರಿಯ ಪ್ರಾಥಮಿಕ ಹಂತದವರೆಗೆ ಕನ್ನಡ ಕಲಿಕೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಇತರ ಯಾವುದೇ ಭಾಷೆಗಳಿಗೆ ಕಡಿಮೆ ಇಲ್ಲದೆ ಸಶಕ್ತಗೊಳಿಸುವ ಕಾರ್ಯವಾಗಬೇಕು ಎಂದು ವಿಶ್ರಾಂತ ಕುಲಪತಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಕೆ. ಚಿನ್ನಪ್ಪ ಗೌಡ ಹೇಳಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಬುಧವಾರ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕನ್ನಡ ಭಾಷೆಯನ್ನು ಕಾನೂನಿನ ಮೂಲಕ ಉಳಿಸುವುದು ಸಾಧ್ಯವಿಲ್ಲ. ಬದಲಾಗಿ ಕನ್ನಡ ಮಾಧ್ಯಮ ಶಾಲೆಗಳು ಆಂಗ್ಲ ಮಾಧ್ಯಮ ಶಾಲೆಗಳಿಗಿಂತ ಗುಣಮಟ್ಟದಲ್ಲಿ ಕೊರತೆ ಆಗದಂತೆ ಗಮನ ಹರಿಸಬೇಕು. ಕನ್ನಡ ಶಾಲೆಯ ಮಕ್ಕಳು ಅವಕಾಶದಲ್ಲಿ ಹಿಂದುಳಿಯದಂತೆ, ಉದ್ಯೋಗದ ಕೊರತೆಯಾಗದಂತೆ ಆಡಳಿತ ವ್ಯವಸ್ಥೆ ನಿಗಾ ವಹಿಸಬೇಕು ಎಂದರು.

ಸಮ್ಮೇಳನ ಕೇವಲ ಜಾತ್ರೆ, ಉತ್ಸವಕ್ಕೆ ಸೀಮಿತವಾಗಬಾರದು. ಈಗ ಸಮ್ಮೇಳನಕ್ಕಾಗಿ ವ್ಯಯವಾಗುತ್ತಿರುವ ಕೋಟ್ಯಂತರ ರು. ಹಣವನ್ನು ಆದಷ್ಟು ಮಿತಗೊಳಿಸಬೇಕು. ಆ ಮೊತ್ತವನ್ನು ಜಿಲ್ಲೆಯ ಅಥವಾ ತಾಲೂಕುಗಳ ಕನ್ನಡ ಶಾಲೆಗಳ ಬಲವರ್ಧನಗೆ ಬಳಸಬೇಕು ಎಂದು ಹೇಳಿದರು.

ಭೂತ ಕಟ್ಟುತ್ತಿದ್ದ ಪಕ್ರು ಪರವ ಅವರನ್ನು ಬಾಲ್ಯದಲ್ಲಿ ವಿಸ್ಮಯದಿಂದ ನೋಡುತ್ತಿದ್ದೆ. ಭೂತಾರಾಧನೆಯ ಬಗ್ಗೆ ಆಸಕ್ತಿ ಬೆಳೆಯಲು ಇದು ಕಾರಣವಾಯಿತು ಎಂದು ಬಾಲ್ಯದ ದಿನಗಳನ್ನು ಸ್ಮರಿಸಿಕೊಂಡ ಪ್ರೊ.ಚಿನ್ನಪ್ಪ ಗೌಡ, ಯಾವುದೇ ಭಾಷೆ ಬೆಳೆಯಬೇಕಾದರೆ ಆ ಭಾಷೆಯ ಹಿರಿಮೆ, ಸಂಸ್ಕೃತಿ, ಇತಿಹಾಸದ ಕೃತಿಗಳು ಅಂತಾರಾಷ್ಟ್ರೀಯ ಮಟ್ಟದ ಭಾಷೆಗೆ ಅನುವಾದಗೊಳ್ಳುವುದು ಅಗತ್ಯ. ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಇದ್ದರು. ಪ್ರೆಸ್‌ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

.ಅಂಗಾಂಗಗಳ ದಾನ ಮಾಡಿಸಾರ್ಥಕತೆ ಮೆರೆದ ಕುಟುಂಬ
ಹೊಸ ವರ್ಷದ ಸಂಭ್ರಮಕ್ಕೆ ಪೊಲೀಸ್‌ ಭದ್ರತೆ