ಜಾನಪದ ಕಲೆಗಳನ್ನು ಉಳಿಸಿ-ಬೆಳೆಸಿ

KannadaprabhaNewsNetwork |  
Published : Sep 15, 2025, 01:00 AM IST
13ಕೆಆರ್ ಎಂಎನ್ 2.ಜೆಪಿಜಿರಾಮನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಯುವ ಸೌರಭ-2025ರ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಪುಟ್ಟಸ್ವಾಮಿ ಗೌಡ ಅವರಿಗೆ 5 ಸಾವಿರ ರು.ಗಳ ದನಸಹಾಯ ಮಾಡಿ, ಪ್ರೋತ್ಸಾಹಿಸಲಾಯಿತು. | Kannada Prabha

ಸಾರಾಂಶ

ರಾಮನಗರ: ನಮ್ಮ ನಾಡಿನ ಜನಪದ ಪ್ರಕಾರಗಳನ್ನು ಪರಿಚಯಿಸಲು ಯುವ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನಪದ ಕಲಾತಂಡಗಳಿಂದ, ಜನಪದ ಪ್ರಕಾರಗಳಿಂದ, ವಾದ್ಯಗಳಿಂದ ನಾಡಿನ ಸಂಸ್ಕೃತಿಯನ್ನು ಉಳಿಸಲು ಸರ್ಕಾರದ ವತಿಯಿಂದ ಯುವ ಸೌರಭದಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಟರಾಜು ಗಾಣಕಲ್ ಹೇಳಿದರು.

ರಾಮನಗರ: ನಮ್ಮ ನಾಡಿನ ಜನಪದ ಪ್ರಕಾರಗಳನ್ನು ಪರಿಚಯಿಸಲು ಯುವ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನಪದ ಕಲಾತಂಡಗಳಿಂದ, ಜನಪದ ಪ್ರಕಾರಗಳಿಂದ, ವಾದ್ಯಗಳಿಂದ ನಾಡಿನ ಸಂಸ್ಕೃತಿಯನ್ನು ಉಳಿಸಲು ಸರ್ಕಾರದ ವತಿಯಿಂದ ಯುವ ಸೌರಭದಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಟರಾಜು ಗಾಣಕಲ್ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಯುವ ಸೌರಭ-2025ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಪೀಳಿಗೆಯ ವಿದ್ಯಾರ್ಥಿಗಳು ನಮ್ಮ ಜನಪದ ಕಲೆಗಳನ್ನು ಮರೆತು ಹೋಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲಿಯೇ ಕಳೆಯುತ್ತಿದ್ದಾರೆ. ವಿದ್ಯಾರ್ಥಿಗಳು ಈ ಭೂಮಿಗೆ, ತಮ್ಮ ಪೋಷಕರಿಗೆ ಹಾಗೂ ಗುರುಗಳಿಗೆ ಗೌರವ ನೀಡಬೇಕು. ವಿದ್ಯಾರ್ಥಿಗಳು ಜನಪದ ಕಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಹಸೀಲ್ದಾರ್ ತೇಜಸ್ವಿನಿ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಓಂಕಾರ ಮೂರ್ತಿ, ಕನ್ನಡ ರಾಜ್ಯೋತ್ಸವ ಪುರಸ್ಕೃತರಾದ ಪುಟ್ಟಸ್ವಾಮಿ ಗೌಡ, ರಾಮನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕರಾದ ಶಿವಸ್ವಾಮಿ ಉಪಸ್ಥಿತರಿದ್ದರು.

13ಕೆಆರ್ ಎಂಎನ್ 2.ಜೆಪಿಜಿ

ರಾಮನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಯುವ ಸೌರಭ-2025ರ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಪುಟ್ಟಸ್ವಾಮಿ ಗೌಡ ಅವರಿಗೆ 5 ಸಾವಿರ ರು. ದನಸಹಾಯ ಮಾಡಿ ಪ್ರೋತ್ಸಾಹಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ