ಜಿಲ್ಲೆ ಶ್ರೀಮಂತ ಇತಿಹಾಸವನ್ನು ಭವಿಷ್ಯಕ್ಕೆ ಉಳಿಸಿ: ಸಂಸದ ಬಿ.ವೈ. ರಾಘವೇಂದ್ರ‌

KannadaprabhaNewsNetwork |  
Published : Oct 05, 2025, 01:00 AM IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕಚೇರಿ‌ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸಿ ರಕ್ಷಿಸುವ ಉದ್ದೇಶದಿಂದ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.‌ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಗುರುತಿಸಲಾದ ಎಲ್ಲಾ ಪುರಾತತ್ವ ತಾಣಗಳನ್ನು ಶಾಶ್ವತವಾಗಿ ಸಂರಕ್ಷಿಸುವ ಮೂಲಕ ಶಿವಮೊಗ್ಗದ ಶ್ರೀಮಂತ ಇತಿಹಾಸವನ್ನು ಭವಿಷ್ಯದ ಪೀಳಿಗೆಗೆ ಉಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುತಿಸಲಾದ ಎಲ್ಲಾ ಪುರಾತತ್ವ ತಾಣಗಳನ್ನು ಶಾಶ್ವತವಾಗಿ ಸಂರಕ್ಷಿಸುವ ಮೂಲಕ ಶಿವಮೊಗ್ಗದ ಶ್ರೀಮಂತ ಇತಿಹಾಸವನ್ನು ಭವಿಷ್ಯದ ಪೀಳಿಗೆಗೆ ಉಳಿಸುವಂತೆ ಸಂಸದ ಬಿ.ವೈ. ರಾಘವೇಂದ್ರ‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ‌ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸಿ ರಕ್ಷಿಸುವ ಉದ್ದೇಶದಿಂದ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿ, ಕಾರ್ಯಗಳನ್ನು ವೈಜ್ಞಾನಿಕವಾಗಿ ನಡೆಸುವ ಬಗ್ಗೆ ಹಾಗೂ ಸ್ಮಾರಕ, ಬಸದಿ, ದೇವಾಲಯಗಳ ಅಭಿವೃದ್ಧಿ ಕುರಿತು ಚರ್ಚಿಸಿ, ಉತ್ಖನನದಿಂದ ದೊರೆಯುವ ಐತಿಹಾಸಿಕ ಕಲಾಕೃತಿಗಳನ್ನು ಮತ್ತು ಪುರಾತನ ಅವಶೇಷಗಳನ್ನು ವಿಶ್ಲೇಷಿಸುವ ಮತ್ತು ಅವುಗಳ ಮಹತ್ವವನ್ನು ದಾಖಲಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.

ಹಾಲಿ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಕೇಂದ್ರ ಸರ್ಕಾರದ ಹಂತದಲ್ಲಿ ಬಾಕಿ ಇರುವ ಪ್ರಸ್ತಾವನೆಗಳ ವಿವರಗಳ ಮಾಹಿತಿಯನ್ನು ಪಡೆದ ಸಂಸದರು ಜಿಲ್ಲೆಯ ಸ್ಮಾರಕ, ದೇವಾಲಯ ಮತ್ತು ಬಸದಿಗಳ ಅಭಿವೃದ್ಧಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಉನ್ನತ ದರ್ಜೆಯ ಪುರಾತತ್ವಶಾಸ್ತ್ರಜ್ಞರಾದ ಸುಜೀತ್ ನಯನ್, ಹಿರಿಯ ಸಂರಕ್ಷಣಾ ಸಹಾಯಕರಾದ ಗೌತಮ್ ಮತ್ತು ರಾಜ್ಯ ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಹಾಗೂ ಇನ್ನಿತರೆ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ