ಸ್ವಚ್ಛ, ಹಸಿರು ಸುಂದರ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಟಿ.ಜಿ. ಪ್ರೇಮಕುಮಾರ್

KannadaprabhaNewsNetwork |  
Published : Oct 28, 2026, 02:30 AM IST
ಸ್ವಚ್ಛ, ಹಸಿರು ಸುಂದರ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ - ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್ | Kannada Prabha

ಸಾರಾಂಶ

ಸ್ವಚ್ಛ, ಹಸಿರು ಸುಂದರ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ಹೇಳಿದರು.

ಸೋಮವಾರಪೇಟೆ ; ಸ್ವಚ್ಛ, ಹಸಿರು ಸುಂದರ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ಹೇಳಿದರು.

ತಾಲೂಕಿನ ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಏಳು ದಿನಗಳ ಕಾಲ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರದಲ್ಲಿ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ತಡೆಗಟ್ಟುವುದು ಎಂಬ ವಿಷಯದ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.ನಾವು ಮುಂದಿನ ಪೀಳಿಗೆಗಾಗಿ ಮಾಲಿನ್ಯ ತಡೆಗಟ್ಟಿ ಶುದ್ಧ ಹಾಗೂ ಸುರಕ್ಷಿತ ವಾತಾವರಣವನ್ನು ಒದಗಿಸುವ ಮೂಲಕ ಉತ್ತಮ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು. ಮನುಷ್ಯನು ಇಂದು ತನ್ನ ಆಸೆ ಮತ್ತು ಪ್ರಗತಿಗಾಗಿ ಪರಿಸರದ ಮೇಲೆ ಹಸ್ತಕ್ಷೇಪ ಮಾಡುತ್ತಿರುವುದರಿಂದ ಪರಿಸರ ಕಲುಷಿತಗೊಳ್ಳುತ್ತಿದೆ. ಎಲ್ಲರೂ ಪರಿಸರ ಮತ್ತು ಭೂಮಿಯ ಮೇಲಿನ ಮಾಲಿನ್ಯವನ್ನು ತಡೆಗಟ್ಟಬೇಕು ಎಂದು ಹೇಳಿದರು.

ಪ್ರಕೃತಿಯು ನಮಗೆ ಅನಿವಾರ್ಯತೆ, ಅದು ನಮ್ಮ ಆಸ್ತಿಯಲ್ಲ. ಪ್ರಕೃತಿಯನ್ನು ನಾವು ರಕ್ಷಿಸಿದರೆ ಮಾತ್ರ ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ಸಂರಕ್ಷಣೆಗಾಗಿ ಸಣ್ಣ ಸಣ್ಣ ಹೆಜ್ಜೆಯಿಟ್ಟರೆ ನಾವು ದೊಡ್ಡ ಬದಲಾವಣೆಯನ್ನು ತರಲು ಸಾಧ್ಯ ಎಂದರು.

ನಾವು ನಮ್ಮ ದಿನನಿತ್ಯ ಮಾಲಿನ್ಯಕಾರಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ ಪರಿಸರ ಸ್ನೇಹಿ ವಸ್ತುಗಳಾದ ಬಟ್ಟೆ, ಕಾಗದ ಅಥವಾ ಸೆಣಬಿನ ಕೈ ಚೀಲಗಳನ್ನು ಬಳಸುವ ಮೂಲಕ ಮಾಲಿನ್ಯ ತಡೆಗಟ್ಟಲು ಸಂಘಟಿತ ಪ್ರಯತ್ನ ಮಾಡುವುದು ಅಗತ್ಯ ಎಂದರು.

ವಾಯು ಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಿಂದ ಪರಿಸರದ ಮೇಲಾಗುತ್ತಿರುವ ಉಂಟಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ನಾವು ಜನಜಾಗೃತಿ ಮೂಡಿಸಬೇಕು. ನಾವು ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಿದರೆ ಮಾತ್ರ ಮುಂದಿನ ಪೀಳಿಗೆಯು ನೆಮ್ಮದಿಯಿಂದ ಬದುಕಲು ಸಾಧ್ಯ ಎಂದರು.

ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎ.ಎಂ. ಭರತ್ ಕುಮಾರ್ ಮಾತನಾಡಿ,ಮಾನವನ ಚಟುವಟಿಕೆಗಳಿಂದ ಪ್ರಕೃತಿ ಹಾಗೂ ಜೀವವೈವಿಧ್ಯ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಎ.ನಾಚಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಪ್ರಫುಲ್ಲ, ಶಿಬಿರಾಧಿಕಾರಿ ಎನ್.ಎನ್.ಮನೋಹರ್ ಇದ್ದರು.

ಇದಕ್ಕೂ ಮುನ್ನ ಪರಿಸರ ಸಂರಕ್ಷಣೆ ಕುರಿತ ಭಿತ್ತಿಫಲಕಗಳನ್ನು ಹಿಡಿದು ಪರಿಸರ ಜಾಗೃತಿ ಮೂಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಕ್ಕೆ: ಆಶ್ಲೇಷ ಬಲಿ ಪೂಜೆ ‘ದಿಟ್ಟಂ’ ಬದಲಾವಣೆಗೆ ವಿರೋಧ
ಮಹಾತ್ಮರ ಜಯಂತಿಯಲ್ಲಿ ಜನಜಾಗೃತಿ: ಪ್ರಮೋದ್ ಕುಮಾರ್