ಡಿ.17ರಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

KannadaprabhaNewsNetwork |  
Published : Dec 09, 2025, 12:45 AM IST
8ಕೆಎಂಎನ್ ಡಿ18 | Kannada Prabha

ಸಾರಾಂಶ

ಮಳವಳ್ಳಿ ಪಟ್ಟಣದಲ್ಲಿ ನಡೆಯುತ್ತಿರುವ ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳರವರ 1066ನೇ ಜಯಂತಿ ಮಹೋತ್ಸವಕ್ಕೆ ಡಿ.17ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಟ್ಟಣದಲ್ಲಿ ನಡೆಯುತ್ತಿರುವ ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳರವರ 1066ನೇ ಜಯಂತಿ ಮಹೋತ್ಸವಕ್ಕೆ ಡಿ.17ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ವೇದಿಕೆ ಹಾಗೂ ಇತರೆ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಟ್ಟಣದ ಹೊರ ಭಾಗದ ಮಾರೇಹಳ್ಳಿ ಬಳಿ ನಿರ್ಮಿಸುತ್ತಿರುವ ಹೆಲಿಪ್ಯಾಡ್‌ಗೆ ತೆರಳಿ ಗ್ರೀನ್ ರೂಂ ನಿರ್ಮಾಣ, ವಿದ್ಯುತ್ ಕಂಬಗಳ ತೆರವು, ಜಾಗ ಸಮತಟ್ಟಾಗಿಸುವುದು, ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳನ್ನು ತೆರಳುವ ಮಾರ್ಗ, ಮೂಲ ಸೌಲಭ್ಯಗಳ ಅಳವಡಿಕೆ ಕುರಿತು ತೆಗೆದುಕೊಂಡಿರುವ ಕ್ರಮಗಳ ಚರ್ಚೆ ನಡೆಸಿದರು.

ನಂತರ ಪ್ರವಾಸಿ ಮಂದಿರ, ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಆಡಳಿತಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ದಿನದ 24 ಗಂಟೆಗಳಲ್ಲಿಯೂ ಆರೋಗ್ಯ ಸಿಬ್ಬಂದಿ ಲಭ್ಯವಾಗಿರಬೇಕು. ತುರ್ತು ಚಿಕಿತ್ಸೆಗೆ ಬೇಕಾದ ಆಗತ್ಯ ಕ್ರಮ ಕೈಗೊಳ್ಳಬೇಕೆಂದು ಡಾ. ಸಂಜಯ್ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ಅವರಿಗೆ ಸೂಚನೆ ನೀಡಿದರು.

ಡಿ.17ರಿಂದ 22ರವರಗೆ ನಡೆಯಲಿರುವ ಜಯಂತಿಗೆ ರಾಷ್ಟ್ರಪತಿಗಳು, ಮುಖ್ಯಮಂತ್ರಿ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು ಆಗಮಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಗಣ್ಯ ವ್ಯಕ್ತಿಗಳ ವಾಸ್ತವ್ಯಕ್ಕೆ ತಾಲೂಕು ವ್ಯಾಪ್ತಿಯ ಎಲ್ಲಾ ಲಾಡ್ಜ್, ಕಲ್ಯಾಣ ಮಂಟಪಗಳ, ರೆಸಾರ್ಟ್ಸ್ ಗಳ, ರೂಮುಗಳನ್ನು ಕಾಯ್ದಿರಿಸುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರದಂತೆ ಫ್ಲೆಕ್ಸ್ ಬ್ಯಾನರ್ ಅಳವಡಿಕೆ, ಸೂಕ್ತ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ಕುರಿತು ಎಚ್ಚರಿಕೆ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸುತ್ತೂರು ಜಯಂತಿ ನಡೆಯುವ ವೇದಿಕೆ ಬಳಿ ಪರಿಶೀಲನೆ ನಡೆಸಿ ವೇದಿಕೆ ಅಳತೆ, ಗಣ್ಯರ ಆಗಮನದ ಮುಖ್ಯದ್ವಾರ, ಪಾರ್ಕಿಂಗ್, ಊಟದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.

ಇದೇ ವೇಳೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ , ಎಸಿ ಶಿವಮೂರ್ತಿ ತಹಸೀಲ್ದಾರ್ ಲೋಕೇಶ್, ಪುರಸಭೆ ಮುಖ್ಯ ಅಧಿಕಾರಿ ನಾಗರತ್ನ, ಲೋಕೋಪಯೋಗಿ ಎಂಜಿನಿಯರ್ ಸೋಮಶೇಖರ್, ಸಿಸ್ಕ್ ಕಾರ್ಯಪಾಲಕ ಎಂಜಿನಿಯರ್ ಪ್ರೇಮ್ ಕುಮಾರ್, ಗ್ರಾಮಾಂತರ ವೃತ್ತ ನಿರೀಕ್ಷಕ ಶ್ರೀಧರ್, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಜಯಂತಿ ಮಹೋತ್ಸವದ ವಿದ್ಯಾ ಪೀಠದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಯೋಗಕ್ಕೆ ಸಲ್ಲಿಕೆಯಾದ ಅರ್ಜಿಗಳು ಜಿಲ್ಲಾ, ತಾಲೂಕುಗಳಿಗೆ ವಿಂಗಡಣೆ: ಡಾ.ಎಲ್.ಮೂರ್ತಿ
ಕಾಫಿ ಕುಡಿಯುತ್ತಾ ಜನರ ಸಮಸ್ಯೆ ಆಲಿಸಿದ ಮಂಜು