ಕನ್ನಡಪ್ರಭ ವಾರ್ತೆ ಬೆಟ್ಟದಪುರ
ಇತ್ತೀಚೆಗೆ ಮಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ತರಬೇತಿ ಕೇಂದ್ರದಲ್ಲಿ ನಡೆದ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಿರಿಯಾಪಟ್ಟಣ ಐಕಾನ್ಸ್ ಸಂಸ್ಥೆಗೆ ಗೋಲ್ಡ್ ಅವಾರ್ಡ್ ಸ್ವೀಕರಿಸಿ ಸಂತೋಷದ ಕ್ಷಣವನ್ನು ಹಂಚಿಕೊಂಡರು.
ಯಾವುದೇ ವೈಯಕ್ತಿಕ ಲಾಭದ ನಿರೀಕ್ಷೆ ಇಲ್ಲದೆ ಸೇವೆ ಸಲ್ಲಿಸುವುದು ನಮ್ಮ ಧ್ಯೇಯವಾಗಿದೆ. ಜನರ ಕಷ್ಟಗಳನ್ನು ಅರ್ಥ ಮಾಡಿಕೊಂಡು, ಅವರ ನೋವಿಗೆ ಸ್ಪಂದಿಸುವ ಮಾನವೀಯ ಗುಣವನ್ನು ರೋಟರಿ ಕಲಿಸಿಕೊಡುತ್ತದೆ ಎಂದು ಅವರು ಹೇಳಿದರು.ಜಿಲ್ಲಾ ಗವರ್ನರ್ ವಿಕ್ರಂ ದತ್ತ, ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಡಿಗಾರ್, ಸಹಾಯಕ ಗವರ್ನರ್ ಆನಂದ್, ವಲಯ 6ರ ನಿಯೋಜಿತ ವಲಯ ಸೇನಾನಿ ಕೆ. ರಮೇಶ್, ನಿಯೋಜಿತ ಅಧ್ಯಕ್ಷ ಎಂ.ಬಿ. ಸಂಪತ್, ಸಂಸ್ಥೆಯ ಕಾರ್ಯದರ್ಶಿ ಬಿ.ಎಸ್. ಪ್ರಸನ್ನಕುಮಾರ್, ಪದಾಧಿಕಾರಿ ಧನಂಜಯ ಭಾಗವಹಿಸಿದ್ದರು.