ಬಿ.ಜಿ.ಕೆರೆ ಬಸವರಾಜ
ಅಧಿಕಾರಿಗಳ ಹೊಣೆಗೇಡಿತನದಿಂದ ಸ್ವಚ್ಛತಾ ಸಿಬ್ಬಂದಿ ಕೊರತೆಯಿಂದ ಬಳಲುತ್ತಿರುವ ತಾಲೂಕಿನ ಬಿಜಿಕೆರೆ
ಗ್ರಾಪಂ ಯಲ್ಲಿ ಸ್ವತಃ ಗ್ರಾಮ ಪಂಚಾಯಿತಿ ಅಧ್ಯಕ್ಷರೇ ಚರಂಡಿ ಸ್ವಚ್ಛತೆಗೆ ಮುಂದಾಗಿರುವುದು ಆಡಳಿತ ವ್ಯವಸ್ಥೆಯನ್ನು ಅಣಕಿಸುವಂತಾಗಿದೆ.ಔದು ತಾಲೂಕಿನ ಎ ಗ್ರೇಡ್ ಪಂಚಾಯಿತಿಗಳಲ್ಲಿ ಒಂದಾಗಿರುವ ಬಿಜಿಕೆರೆ ಗ್ರಾಮ ಪಂಚಾಯತಿಯಲ್ಲಿ ಖಾಯಂ ಸ್ವಚ್ಛತಾ ಸಿಬ್ಬಂದಿ ಇಲ್ಲದೆ ಆನೈರ್ಮಲ್ಯಕ್ಕೆ ಕಾರಣವಾಗಿರುವ ಗ್ರಾಮದಲ್ಲಿ ಪಂಚಾಯತಿ ಅಧ್ಯಕ್ಷ ಎಸ್.ಜಯಣ್ಣ ಚರಂಡಿ ಸ್ವಚ್ಛತೆಗೆ ಮುಂದಾಗಿದ್ದಾರೆ.
ಕಳೆದೆರಡು ವರ್ಷಗಳಿಂದ ಸ್ವಚ್ಛತಾ ಸಿಬ್ಬಂದಿ ಇಲ್ಲದೆ ಸಮಸ್ಯೆ ಬಿಗಡಾಯಿಸಿದೆ. ಚರಂಡಿಗಳು ಸೊರುಗುತ್ತಿವೆ. ರಸ್ತೆಗಳಲ್ಲಿ ಕಸ ತಾಂಡವಾಡುತ್ತಿದೆ. ಹೀಗಿದ್ದರೂ, ನೇಮಕಾತಿ ಮಾಡಿಕೊಳ್ಳಬೇಕಾದ ಮೇಲಾಧಿಕಾರಿಗಳು ಮೌನ ವಹಿಸಿರುವುದು ಇನ್ನಷ್ಟು ಸಮಸ್ಯೆ ಬಿಗುಡಾಯಿಸಲು ಕಾರಣವಾಗಿದೆ.
ಇಡೀ ಗ್ರಾಮ ಸೊಳ್ಳೆಗಳ ಆವಾಸ ಸ್ಥಾನವಾಗಿದೆ. ಇದರಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಚರಂಡಿಗಿಳಿದು ಸ್ವಚ್ಛತೆಗೆ ಮುಂದಾಗಿರುವುದು ಆಡಳಿತ ವ್ಯವಸ್ಥೆಯನ್ನೇ ಪ್ರಶ್ನಿಸುವಂತಾಗಿದೆ.
ಕಂಪ್ಯೂಟರ್ ಆಪರೇಟರ್, ಖಾಯಂ ಪಿಡಿಒ ಇಲ್ಲದಾಗಿದೆ. ಕಂಪ್ಯೂಟರ್ ಕೆಲಸ ನಿರ್ವಹಣೆಗೆ ಅನ್ಯರನ್ನು ಬಳಸಿಕೊಳ್ಳುವಂತ ಸ್ಥಿತಿ ಎದುರಾಗಿದೆ. ಇದರಿಂದಾಗಿ ಪಂಚಾಯಿತಿ ಆಡಳಿತ ವ್ಯವಸ್ಥೆ ನಿರ್ವಹಣೆ ಸುಗಮವಾಗಿ ಸಾಗುತ್ತಿಲ್ಲ ಎನ್ನುವ ಅಸಮದಾನ ವ್ಯಾಪಕವಾಗಿದೆ. ಇನ್ನಾದರೂ ಸಂಬಂದಿಸಿದ ಇಲಾಖೆ ತಾಲೂಕಿನ ಅತಿ ದೊಡ್ಡ ಗ್ರಾಮಗಳಲ್ಲಿ ಒಂದಾಗಿರುವ ಬಿ.ಜಿ.ಕೆರೆ ಗ್ರಾಪಂಯಲ್ಲಿ ಸ್ವಚ್ಛತಾ ಸಿಬ್ಬಂದಿ ನೇಮಕ ಮಾಡಿಕೊಳ್ಳುಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.