ಶಾಂತಿ, ನೆಮ್ಮದಿ, ಆರೋಗ್ಯ ಕೊಡುವ ಶಕ್ತಿ ಯೋಗಕ್ಕಿದೆ

KannadaprabhaNewsNetwork |  
Published : Jun 22, 2025, 11:47 PM IST
23 | Kannada Prabha

ಸಾರಾಂಶ

ಯುವ ಜನಾಂಗವು ಇಂದು ಮೊಬೈಲ್, ಟಿವಿ, ಗ್ಯಾಜೆಟ್ ಸೇರಿದಂತೆ ವಿವಿಧ ಆಧುನಿಕ ಮಾಧ್ಯಮಗಳಲ್ಲಿ ಬೆರೆತು ತಮ್ಮ ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುತ್ತಿದೆ.

ಕನ್ನಡಪ್ರಭ ವಾರ್ತೆ ಮೈಸೂರುಆಧುನಿಕ ಜೀವನ ಶೈಲಿಯಿಂದ ನಾವು ಕಳೆದುಕೊಳ್ಳುತ್ತಿರುವ ಶಾಂತಿ, ನೆಮ್ಮದಿ, ಸಂತೋಷ ಮತ್ತು ಆರೋಗ್ಯವನ್ನು ಕೊಡುವ ಮಹಾ ಶಕ್ತಿ ಯೋಗಕ್ಕಿದೆ ಎಂದು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದ ತಿಳಿಸಿದರು.ನಗರದ ಹೊರ ವಲಯದಲ್ಲಿರುವ ಪಯಣ ಕಾರ್ ಮ್ಯೂಸಿಯಂ ಆವರಣದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಯುಷ್ ಮಂತ್ರಾಲಯದ ಸಹಯೋಗದೊಂದಿಗೆ ಶನಿವಾರ ಏರ್ಪಡಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗದ ದಿನಾಚರಣೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.ಯುವ ಜನಾಂಗವು ಇಂದು ಮೊಬೈಲ್, ಟಿವಿ, ಗ್ಯಾಜೆಟ್ ಸೇರಿದಂತೆ ವಿವಿಧ ಆಧುನಿಕ ಮಾಧ್ಯಮಗಳಲ್ಲಿ ಬೆರೆತು ತಮ್ಮ ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುತ್ತಿದೆ. ಮನುಷ್ಯ ತನ್ನ ಜೀವನವನ್ನು ನಿರಂತರವಾಗಿ ಆನಂದಮಯವಾಗಿ ಶಾಂತಿಯುತವಾಗಿ ಕಳೆಯಬೇಕಾದಲ್ಲಿ ಯೋಗದ ಮೊರೆ ಹೋಗಬೇಕು. ದಿನನಿತ್ಯ ನಾವು ಬೆಳಗ್ಗೆ ಮತ್ತು ಸಂಜೆ ಕೇವಲ ಅರ್ಧ ಗಂಟೆ ಕ್ರಮಬದ್ಧವಾಗಿ ಯೋಗಾಸನ ಮಾಡಿದರೆ ನಮ್ಮ ದೇಹದಲ್ಲಿ ಬದಲಾವಣೆ ಕಾಣಬಹುದು. ದಿನೇ ದಿನೇ ನಮ್ಮ ದೈಹಿಕ ಆರೋಗ್ಯದ ಜೊತೆ ಮಾನಸಿಕ ಶಾಂತಿಯನ್ನು ಪಡೆಯಬಹುದು ಎಂದು ಹೇಳಿದರು.ಹಿರಿಯ ಪತ್ರಕರ್ತ ಕೆ. ಶಿವಕುಮಾರ್ ಮಾತನಾಡಿ, ಮೈಸೂರು ಯೋಗಕ್ಕೆ ಪ್ರಸಿದ್ಧಿಯಾದ ನಗರವಾಗಿದೆ, ಮುಮ್ಮಡಿ ಕೃಷ್ಣರಾಜ ಒಡೆಯರ್ ಕಾಲದಿಂದಲೂ ಯೋಗಕ್ಕೆ ಮೈಸೂರಿನ ಕೊಡುಗೆ ಅಪಾರವಾಗಿದೆ. ಪ್ರಧಾನಿ ಮೋದಿ ಅವರು ಯೋಗಕ್ಕೆ ಪ್ರೋತ್ಸಾಹ ನೀಡುವ ಮೂಲಕ ಅಂತಾರಾಷ್ಟ್ರೀಯ ಮಾನ್ಯತೆ ದೊರಕಿದೆ. ದೇಶ, ಭಾಷೆ ಪ್ರಾಂತ್ಯ ಮೀರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂದು ಯೋಗ ಬೆಳದಿದೆ ಎಂದರು.ಯೋಗ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜುಗಳು ಮತ್ತು ಗ್ರಾಪಂಗಳ 3 ಸಾವಿರಕ್ಕೂ ಹೆಚ್ಚು ಯೋಗ ಪಟುಗಳು ಭಾಗವಹಿಸಿದ್ದರು. ಯೋಗಪಟು ಚಿನ್ಮಯಿ ಅವರಿಗೆ ಯೋಗರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಾ. ಮಹಾರುದ್ರಸ್ವಾಮಿ ಅವರ ಪ್ರಿನ್ಸಿಪಲ್ ಆಫ್ ಯೋಗ ಪುಸ್ತಕವನ್ನು ಗಣ್ಯರು ಬಿಡುಗಡೆಗೊಳಿಸಿದರು.ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ವರ್ಚ್ಯೂವೆಲ್ ಆಗಿ ಮಾತನಾಡಿ ಶುಭ ಕೋರಿದರು.ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತ ಎ. ದೇವರಾಜು, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ.ಬಿ. ಶಶಿಕಾಂತ್ ಜೈನ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ, ಕ್ಷೇಮವನದ ಮುಖ್ಯಸ್ಥ ಡಾ. ನರೇಂದ್ರ ಕೆ. ಶೆಟ್ಟಿ ಮೊದಲಾದವರು ಇದ್ದರು.-----------------eom/mys/shekar/

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ