ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಶಾಂತಿ ಕಾಲೇಜು ಮುಂಭಾಗದ 33 ಎಕರೆ ಪ್ರದೇಶದದಲ್ಲಿ ನಿರ್ಮಾಣಗೊಳ್ಳುತ್ತಿರುವ ವೇದಿಕೆ ಹಾಗೂ ಪೂರ್ವಸಿದ್ಧತೆಯನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹಾಗೂ ಆಲಮಟ್ಟಿ ಶ್ರೀಗಳೊಂದಿಗೆ ಪರಿಶೀಲಿಸಿ ಮಾತನಾಡಿದರು.
ಸಮಾರಂಭದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಸಾನ್ನಿಧ್ಯ ವಹಿಸಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅಧ್ಯಕ್ಷತೆ ವಹಿಸುವರು. ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಶಾಸಕ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದರು.ಒಗ್ಗಟ್ಟಿನಿಂದ ಶ್ರಮಿಸಿ ಸಿಎಸ್ಪಿ:
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಪಟ್ಟಣದಲ್ಲಿ ಡಿ.15ರಿಂದ 21ರವೆರೆಗೆ ನಡೆಯುವ ಸುತ್ತೂರು ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯುತ್ಸವದ ಯಶಸ್ವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.ತಾಲೂಕಿನ ಎಲ್ಲರೂ ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಸ್ವಯಂ ಸೇವಕರಂತೆ ಕೆಲಸ ಮಾಡಬೇಕು. ಪ್ರಸಾದ ವ್ಯವಸ್ಥೆ, ವಸ್ತು ಪ್ರದರ್ಶನ, ಸ್ವಾಗತ ಮಂಟಪವು ಉತ್ತಮ ರೀತಿಯಲ್ಲಿ ಇರಬೇಕು ಎಂದು ಜವಾಬ್ದಾರಿ ಹೊತ್ತ ಅಧಿಕಾರಿಗಳು ಸಲಹೆ ನೀಡಿದರು.
ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜಯಂತ್ಯುತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸುತ್ತಿದ್ದು, 6 ದಿನಗಳು ಬಹಳ ವಿಜೃಂಭಣೆಯಿಂದ ನಡೆಯಲಿದೆ. ಗುರು ಭಕ್ತಿಯಿಂದ ಸೇವೆ ಮಾಡುವ ಮೂಲಕ ಸಡಗರ ಸಂಭ್ರಮದಿಂದ ಹಬ್ಬದಂತೆ ಜಯಂತಿಯನ್ನು ಯಶಸ್ವಿಗೊಳಿಸಲು ಮುಂದಾಗೋಣ ಎಂದರು.ಮಾಜಿ ಶಾಸಕ ಕೆ.ಅನ್ನದಾನಿ ಮಾತನಾಡಿದರು. ವಿವಿಧ ಮುಖಂಡರು ಹಾಗೂ ಆಚರಣಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.
ಡಿ.15ರಿಂದ 21ರವರೆಗೆ ಬ್ಯಾನರ್-ಬಂಟಿಂಗ್ಸ್ ನಿಷೇಧಮಳವಳ್ಳಿ: ಡಿ.15ರಿಂದ 21ರವರೆಗೆ ಪಟ್ಟಣದ ವ್ಯಾಪ್ತಿಯ ವಿದ್ಯುತ್ ಕಂಬಗಳು ಹಾಗೂ ರಸ್ತೆ ವಿಭಜಕಗಳಲ್ಲಿ ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಯಾವುದೇ ರೀತಿಯ ಭಾವಚಿತ್ರಗಳು, ಸ್ಟಿಕ್ಕರ್ ಸೇರಿದಂತೆ ಬ್ಯಾನರ್ ಗಳನ್ನು ಹಾಕುವುದು ಹಾಗೂ ಆಂಟಿಸುವಂತಿಲ್ಲ. ಈ ಆದೇಶ ಉಲ್ಲಂಘನೆಯು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಹಾಗೂ ಪಟ್ಟಣ ಪೊಲೀಸ್ ಠಾಣೆಯ ಪ್ರಭಾರ ಸಿಪಿಐ ಬಿ.ಎಸ್.ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.