ಬೀಳಗಿಯಲ್ಲಿ ಶೀಘ್ರದಲ್ಲೇ ಪತ್ರಿಕಾ ಭವನ ಸಾಕಾರ: ಶಾಸಕ ಜೆ.ಟಿ. ಪಾಟೀಲ

KannadaprabhaNewsNetwork |  
Published : Jul 21, 2025, 12:00 AM IST
 ಬೀಳಗಿ ಪಟ್ಟಣದಲ್ಲಿ  ಭಾನುವಾರ ನಡೆದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

ಡಿ.ಎಂ. ಸಾಹುಕಾರ ಸ್ವಾಗತಿಸಿದರು. ಶಿಕ್ಷಕರಾದ ಬಸವರಾಜ ನಾಯಕ, ಸೋಮಲಿಂಗ ಬೇಡರ ನಿರೂಪಿಸಿದರು. ಹಲವಾರು ವರ್ಷಗಳಿಂದ ತಾಲೂಕಿನ ಪತ್ರಕರ್ತರು ಪತ್ರಿಕಾ ಭವನಕ್ಕಾಗಿ ಮನವಿ ಸಲ್ಲಿಸುತ್ತಿದ್ದು, ಶೀಘ್ರದಲ್ಲೇ ಪಪಂ ವ್ಯಾಪ್ತಿಯಲ್ಲಿ ನಿವೇಶನ ಮಂಜೂರು ಮಾಡಿಸಿ, ನಿವೇಶನ ಪತ್ರಕರ್ತರ ಸಂಘದ ಹೆಸರಿಗೆ ಆದ ದಿನವೇ ಶಾಸಕರು ಅನುದಾನದಡಿ ₹೧೦ ಲಕ್ಷ ಅನುದಾನದಲ್ಲಿ ಪತ್ರಿಕಾ ಭವನ ನಿರ್ಮಾಣ ಮಾಡಿಕೊಡುವುದಾಗಿ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ಹಲವಾರು ವರ್ಷಗಳಿಂದ ತಾಲೂಕಿನ ಪತ್ರಕರ್ತರು ಪತ್ರಿಕಾ ಭವನಕ್ಕಾಗಿ ಮನವಿ ಸಲ್ಲಿಸುತ್ತಿದ್ದು, ಶೀಘ್ರದಲ್ಲೇ ಪಪಂ ವ್ಯಾಪ್ತಿಯಲ್ಲಿ ನಿವೇಶನ ಮಂಜೂರು ಮಾಡಿಸಿ, ನಿವೇಶನ ಪತ್ರಕರ್ತರ ಸಂಘದ ಹೆಸರಿಗೆ ಆದ ದಿನವೇ ಶಾಸಕರು ಅನುದಾನದಡಿ ₹೧೦ ಲಕ್ಷ ಅನುದಾನದಲ್ಲಿ ಪತ್ರಿಕಾ ಭವನ ನಿರ್ಮಾಣ ಮಾಡಿಕೊಡುವುದಾಗಿ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ಭರವಸೆ ನೀಡಿದರು.

ಇಲ್ಲಿನ ತಾಪಂ ಶಾಸಕರ ಕಾರ್ಯಾಲಯದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು,

ಕಳೆದ ಬಾರಿ ಶಾಸಕನಾಗಿದ್ದಾಗ ಪತ್ರಿಕಾ ಕಾರ್ಯಾಲಯ ಮಾಡಿಕೊಟ್ಟಿದ್ದೆ. ನನ್ನ ಅವಧಿಯಲ್ಲಿ ಪತ್ರಕರ್ತರಿಗೆ ಸುದ್ದಿಗಾಗಿ ಬೇಕಿರುವ ಎಲ್ಲ ಸೌಲಭ್ಯಗಳನ್ನು ನೀಡುವ ಕೆಲಸ ಮಾಡುತ್ತಾ ಬಂದಿದ್ದೇನೆ. ಪತ್ರಿಕಾ ಭವನ ಬೇಡಿಕೆ ಇಟ್ಟಿದ್ದು, ಬರುವ ದಿನಗಳಲ್ಲಿ ಬೇಡಿಕೆ ಈಡೇರಿಸುತ್ತೇನೆ ಎಂದ ಶಾಸಕರು, ಸತ್ಯ ಸುದ್ದಿ ಪ್ರಕಟವಾಗುವುದು ಬಹುಪಾಲು ಮುದ್ರಣ ಮಾಧ್ಯಮದಲ್ಲಿಯೇ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಸತ್ಯಾಸತ್ಯತೆ ಪರಿಶೀಲಿಸಿ ವರದಿ ಮಾಡುವ ಪತ್ರಿಕೆಗಳ ಅಗತ್ಯ ಹೆಚ್ಚಾಗಿದೆ ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಡಾ.ಎಸ್.ಎಚ್. ತೆಕ್ಕೆನ್ನವರ ಮಾತನಾಡಿ, ಮನೆ ಮನಗಳಲ್ಲಿ ನಿತ್ಯ ಪತ್ರಿಕೆ ಓದುವ ಸಂಸ್ಕೃತಿ ಬೆಳೆಯಬೇಕು. ಸತ್ಯ ವರದಿಗಾರಿಕೆ, ಸಾಮಾಜಿಕ ಸಾಮರಸ್ಯ ಮತ್ತು ಪತ್ರಕರ್ತರ ಜವಾಬ್ದಾರಿ ಇಂದು ಬಹಳಷ್ಟಿದೆ. ಪತ್ರಿಕೆ ಮತ್ತು ಪತ್ರಕರ್ತರು ಇಲ್ಲದ ಈ ಸಮಾಜವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು.

ಸಿಪಿಐ ಹನುಮಂತ ಸಣಮನಿ ಮಾತನಾಡಿದರು. ಕಿರಣ ಬಾಳಾಗೋಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಾಗರಾಳ ದಿಗಂಬರೇಶ್ವರ ಮಠದ ಶೇಷಪ್ಪಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಹಸೀಲ್ದಾರ ವಿನೋದ ಹತ್ತಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಆದಾಪುರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನಮಂತ ಕಾಖಂಡಕಿ, ಪತ್ರಕರ್ತರಾದ ಸುಭಾಷ ರಾಠೋಡ, ಚನಬಸು ಚಲವಾದಿ,ಕಾಶಿನಾಥ್ ಸೋಮನಕಟ್ಟಿ, ಕಿರಣ್ ನಾಯ್ಕರ , ಬಸು ಭಾವಿ.ಭೀಮು ಯಡಹಳ್ಳಿ,ರಿಯಾಜ್ ಅತ್ತಾರ, ಸೇರಿದಂತೆ ಇತರರು ಇದ್ದರು.

ಮೊಬೈಲ್‌ನಲ್ಲಿ ಎಲ್ಲ ಸುದ್ದಿಗಳು ಸಿಗುವ ಸ್ಪರ್ಧಾತ್ಮತೆಯ ಇಂದಿನ ದಿನಗಳಲ್ಲಿ, ನಿತ್ಯ ಪತ್ರಿಕೆ ಓದದಿದ್ದರೆ ಸುದ್ದಿ ತಿಳಿಯಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜೊತೆಗೆ ಪತ್ರಿಕಾ ರಂಗವೂ ಒಂದಾಗಿದ್ದು, ರಚನಾತ್ಮಕ ಟೀಕೆ, ಟಿಪ್ಪಣಿಗಳ ಮೂಲಕ ಆಡಳಿತ ವರ್ಗವನ್ನು ಎಚ್ಚರಿಸಿ ಸರಿದಾರಿಗೆ ತರುವ ಕೆಲಸವನ್ನು ಪತ್ರಿಕಾರಂಗ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ.

- ಜೆ.ಟಿ. ಪಾಟೀಲ ಶಾಸಕರು ಬೀಳಗಿ

PREV

Latest Stories

ಸಂಕಷ್ಟಗಳಿವೆ ಆದರೆ ಸೇವಾ ಸಂತೃಪ್ತಿ ನಮಗಿದೆ: ದಶರಥ ಸಾವೂರ
ರೈತರನ್ನು ಸ್ಮರಿಸುವ, ನೋವಿಗೆ ಸ್ಪಂದಿಸುವ ಕಾರ್ಯವಾಗಲಿ
ಮಳೆಯ ರಭಸಕ್ಕೆ ಮನೆಗಳಿಗೆ ನುಗ್ಗಿದ ನೀರು: ಪರಿಶೀಲನೆ