‘ಮಂಗಳೂರ ಸಮಾಚಾರ’ ಕೊಡುಗೆ ಚಾರಿತ್ರಿಕ: ಎಂ.ಎ‌. ಗಫೂರ್

KannadaprabhaNewsNetwork |  
Published : Jul 04, 2026, 02:45 AM IST
ಮಂಗಳೂರಲ್ಲಿ ಪತ್ರಿಕಾ ದಿನಾಚರಣೆ- ಮೊಗ್ಲಿಂಗ್ ಸ್ಮರಣೆ | Kannada Prabha

ಸಾರಾಂಶ

ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರ ಸಮಾಚಾರ’ ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕವಾದದ್ದು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

ಮಂಗಳೂರು: ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರ ಸಮಾಚಾರ’ ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕವಾದದ್ದು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ಬುಧವಾರ ಡಾ.‌ಹರ್ಮನ್ ಮೊಗ್ಲಿಂಗ್ ಪ್ರತಿಮೆಗೆ ಹಾರಾರ್ಪಣೆ ಮಾಡಿ ಅವರು ಮಾತನಾಡಿದರು.

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಮೊಗ್ಲಿಂಗ್ ಅವರು ಜೈಮಿನಿ ಭಾರತ, ಬಸವ ಪುರಾಣ, ದಾಸ ಸಾಹಿತ್ಯವನ್ನು ಸಂಪಾದಿಸಿ ಪ್ರಕಟಿಸುವ ಮೂಲಕ ಮಾಧ್ಯಮ ಕ್ಷೇತ್ರದ ಜೊತೆಗೆ ಕನ್ನಡ ಸಾಹಿತ್ಯ ಲೋಕಕ್ಕೆ ಅಪೂರ್ವ ಕೊಡುಗೆಗಳನ್ನು ನೀಡಿದವರು ಎಂದು ಹೇಳಿದರು.ಥಿಯೋಲಾಜಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ವಾಟ್ಸನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ಕೆಜೆಯು ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಮುಖ್ಯ ಅತಿಥಿಗಳಾಗಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಕೆಜೆಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿಪ್ರಕಾಶ್ ಪುಣಚ, ಕೋಶಾಧಿಕಾರಿ ಕೆನ್ಯೂಟ್ ಪಿಂಟೊ , ಪತ್ರಕರ್ತರಾದ ಭಾಸ್ಕರ ರೈ ಕಟ್ಟ, ಡೊನಾಲ್ಡ್‌ ಪಿರೇರಾ, ಎಡ್ವರ್ಡ್ ಲೋಬೊ, ಶಾರುಖ್, ಹಮೀದ್ ವಿಟ್ಲ , ಥಿಯೋಲೋಜಿಕಲ್ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿಗಳು ಇದ್ದರು.

ಕೆಜೆಯು ಜಿಲ್ಲಾಧ್ಯಕ್ಷ‌ ಈಶ್ವರ ವಾರಣಾಶಿ ಸ್ವಾಗತಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಬಿ-ಜಿ ರ‍್ಯಾಮ್ ಜಿ ಸೌಲಭ್ಯ ಅರ್ಹ ಕುಟುಂಬ ಪಡೆದುಕೊಳ್ಳಲಿ: ಮೇತ್ರಿ
ಪ್ರಪಂಚದಲ್ಲಿಯೇ ಭಾರತೀಯರ ಇಂಗ್ಲಿಷ್‌ ಭಾಷೆ ಪರಿಶುದ್ಧ: ಡಾ.ದೀಪಕ ಶಿಂಧೆ