ಭದ್ರಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದಿಂದ ಸರ್ಕಾರಿ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜು.೧೯ರ ಭಾನುವಾರ ಪತ್ರಿಕಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಬೆಳಿಗ್ಗೆ ೮.೩೦ರಿಂದ ಶಿಬಿರ ಆರಂಭವಾಗಲಿದ್ದು, ವಿವಿಧ ಧರ್ಮ ಗುರುಗಳು ರಕ್ತದಾನ ನೆರವೇರಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿರುವ ಪತ್ರಿಕಾ ದಿನಾಚರಣೆಯನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸುವರು. ಸಂಸದ ಬಿ.ವೈ ರಾಘವೇಂದ್ರ, ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ, ವಿದಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಬಿಜೆಪಿ ಮುಖಂಡರು, ನ್ಯಾಯವಾದಿ ಮಂಗೋಟೆ ರುದ್ರೇಶ್, ಸಂಘದ ಜಿಲ್ಲಾಧ್ಯಕ್ಷ ಎಚ್.ಯು ವೈದ್ಯನಾಥ, ರಾಜ್ಯಸಮಿತಿ ಸದಸ್ಯರಾದ ಕೆ.ವಿ ಶಿವಕುಮಾರ್, ಎನ್. ರವಿಕುಮಾರ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಲಯನ್ಸ್ ಕ್ಲಬ್ ಅಧ್ಯಕ್ಷ ಡಿ. ಶಂಕರಮೂರ್ತಿ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ರಕ್ತದಾನ ಶಿಬಿರದ ಸಮಾರೋಪ ಸಮಾರಂಭದಲ್ಲಿ ನಗರಸಭೆ ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮಾ ಬದರಿನಾರಾಯಣ, ಪೌರಾಯುಕ್ತ ಕೆ.ಎನ್ ಹೇಮಂತ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಟಿಪ್ಪು ಸುಲ್ತಾನ್, ಅನುಪಮ ಚನ್ನೇಶ್, ಚನ್ನಪ್ಪ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ತಹಸೀಲ್ದಾರ್ ಪ್ರದೀಪ್ ದೇವಗಿರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ವಿವಿಧ ರಾಜಕೀಯ ಪಕ್ಷಗಳ ಪ್ರಮುಖರಾದ ಎಸ್. ಕುಮಾರ್, ಆರ್. ಕರುಣಾಮೂರ್ತಿ, ಜಿ. ಧರ್ಮಪ್ರಸಾದ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.ರಕ್ತದಾನ ಶಿಬಿರದ ಪೂರ್ವಭಾವಿಯಾಗಿ ಜು.೧೮ರ ಶನಿವಾರ ಬೆಳಿಗ್ಗೆ ೭.೩೦ಕ್ಕೆ ಬೃಹತ್ ರಕ್ತದಾನ ಶಿಬಿರ ಕುರಿತು ಜಾಗೃತಿ ಮೂಡಿಸಲು ಲಯನ್ಸ್ ಕ್ಲಬ್ ವತಿಯಿಂದ ನಗರದ ರಂಗಪ್ಪ ವೃತ್ತದಿಂದ ಹುತ್ತಾಕಾಲೋನಿ ನಮ್ಮ ಭದ್ರಾವತಿ ವೃತ್ತದವರೆಗೂ ಮ್ಯಾರಥಾನ್ ಓಟ ಆಯೋಜಿಸಲಾಗಿದೆ ಎಂದರು.
ಪ್ರಮುಖರಾದ ಎಸ್.ಆರ್ ಜಗದೀಶ್, ಡಿ. ಶಂಕರಮೂರ್ತಿ, ಚನ್ನಪ್ಪ, ನಿರಂಜನ್, ಬಿ. ಗುರು, ಲಕ್ಷ್ಮೀಕಾಂತ್, ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಗುರುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಕುರಿತು ಮಾಹಿತಿ ನೀಡಲಾಯಿತು.