ಬಸವಕಲ್ಯಾಣ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬಸವಕಲ್ಯಾಣ ತಾಲೂಕು ಘಟಕದಿಂದ ಪತ್ರಿಕಾ ದಿನಾಚರಣೆ ಹಾಗೂ ಶಂಕರಪ್ರಸಾದ ದುಬೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಗರದ ತ್ರಿಪುರಾಂತ ಯಾತ್ರಿ ನಿವಾಸದಲ್ಲಿ ಭಾನುವಾರ ಮಧ್ಯಾಹ್ನ 3ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸದಸ್ಯ ಎಂ.ಜಿ.ಮುಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ನಗರಸಭೆ ಅಧ್ಯಕ್ಷ ಎಂಡಿ ಸಗೀರೋದ್ದಿನ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿ ಸಿಂಗ್ ಠಾಕೂರ, ಜಿಲ್ಲಾಧ್ಯಕ್ಷ ಡಿ.ಕೆ.ಗಣಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ರಾಜ್ಯ ಪ್ರತಿನಿಧಿ ಬಸವರಾಜ ಕಾಮಶೆಟ್ಟಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ದಿಲೀಪಕುಮಾರ ಉತ್ತಮ, ನಿವೃತ್ತ ಅಭಿಯಂತರ ಚಂದ್ರಶೇಖರ್ ದುಬೆ ಭಾಗವಹಿಸುವರು ಎಂದು ಸಂಘದ ತಾಲೂಕು ಅಧ್ಯಕ್ಷ ಮಾರ್ಥಂಡ ಜೋಶಿ, ಪ್ರಧಾನ ಕಾರ್ಯದರ್ಶಿ ಉದಯಕುಮಾರ ಮುಳೆ ತಿಳಿಸಿದ್ದಾರೆ.
ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಪದಾಧಿಕಾರಿಗಳು ಸೇರಿದಂತೆ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.