ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಪತ್ರಕರ್ತರ ಸಂಘ ಹಾಗೂ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾ ವಿತರಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
2018ರಲ್ಲಿ ಸರ್ಕಾರ ಬಜೆಟ್‌ನಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ ಸುಮಾರು ರು.10 ಕೋಟಿ ಘೋಷಣೆ ಮಾಡಿತ್ತು. ಆದರೆ, ಇದು ಇಲ್ಲಿಯವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ಸರ್ಕಾರ ಆದಷ್ಟು ಕೂಡಲೇ ಅನುದಾನವನ್ನು ನೀಡಿ ಪತ್ರಿಕಾ ವಿತರಕರಿಗೆ ನೆರವಾಗಬೇಕೆಂದು ಒತ್ತಾಯಿಸಿದರು.ಪತ್ರಿಕಾ ವಿತರಕರು ಮುಂಜಾನೆಯೇ ಗಾಳಿ, ಮಳೆ, ಚಳಿ ಎನ್ನದೆ ಪತ್ರಿಕಾ ವಿತರಣೆ ಮಾಡುತ್ತಾರೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ, ಮಳೆಗಾಲ ಸೇರಿದಂತೆ ವಿವಿಧ ಸಂಕಷ್ಟದ ಪರಿಸ್ಥಿತಿ ಎದುರಿಸಿ ತಮ್ಮ ಕೆಲಸದಲ್ಲಿ ನಿರತರಾಗುತ್ತಾರೆ. ಇವರಿಗೆ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಕೂಡ ಪತ್ರಿಕಾ ವಿತರಣೆ ಮಾಡುತ್ತಿದ್ದರು. ಇವರಂತೆ ಅನೇಕರು ಪತ್ರಿಕಾ ವಿತರಣೆ ಮಾಡುವ ಕೆಲಸದಲ್ಲಿ ತೊಡಗಿ ಇತರೆ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದರು. ಇತ್ತೀಚೆಗೆ ಮಹಿಳೆಯರು ಕೂಡ ಪತ್ರಿಕೆ ಹಂಚುವ ಕೆಲಸವನ್ನು ನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ. ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯನ್ನು ಪತ್ರಿಕಾ ವಿತರಕರಿಗೂ ನೀಡಬೇಕೆಂದು ಒತ್ತಾಯಿಸಿದರು.
ಶಕ್ತಿ ಪತ್ರಿಕೆಯ ಸಂಪಾದಕರಾದ ಜಿ. ಚಿದ್ವಿಲಾಸ್ ಮಾತನಾಡಿ, ಪತ್ರಿಕಾ ವಿತರಕರು ತೀವ್ರ ಮಳೆಗಾಲದಲ್ಲಿ ಕೂಡ ಪತ್ರಿಕೆ ವಿತರಣೆ ಮಾಡುವ ಮೂಲಕ ತಮ್ಮ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಪತ್ರಿಕಾ ವಿತರಕರು ಪತ್ರಿಕೆಗಳ ಆಧಾರ ಸ್ತಂಭ ಎಂದರು.
ಅಧ್ಯಕ್ಷತೆ ವಹಿಸಿದ್ದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್ ಮಾತನಾಡಿ, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಘಟಕದೊಂದಿಗೆ ಕೊಡಗು ಪತ್ರಕರ್ತರ ಸಂಘ ಕೈಜೋಡಿಸಿಕೊಂಡು ಇದೀಗ 3ನೇ ವರ್ಷದ ಪತ್ರಿಕಾ ವಿತರಕರ ದಿನವನ್ನು ಆಚರಿಸುತ್ತಿದ್ದೇವೆ ಎಂದರು.
ಸನ್ಮಾನಿತರ ಪರವಾಗಿ ಹಿರಿಯ ಪತ್ರಿಕಾ ವಿತರಕ ವಸಂತ್ ಮಾತನಾಡಿ, 50 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕೆಲಸ ಮಾಡುತ್ತಿದ್ದೇನೆ. ಇಂದಿಗೂ ಕೆಲಸ ಮಾಡುತ್ತಿದ್ದೇನೆ. ಪತ್ರಿಕಾ ವಿತರಣೆಯಲ್ಲಿ ಸಾಕಷ್ಟು ಸಮಸ್ಯೆಯಿದೆ. ಆದರೂ ಜನರ ಪ್ರೀತಿ ವಿಶ್ವಾಸವಿದೆ. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಮನವಿ ಮಾಡಿದರು.
ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಾರ್ಥಿಸಿದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ವಿ. ರವಿ ಕುಮಾರ್ ಸ್ವಾಗತಿಸಿ, ಗೌರವ ಸಲಹೆಗಾರರಾದ ಅನಿಲ್ ಹೆಚ್.ಟಿ ನಿರೂಪಿಸಿದರು. ಹಿರಿಯ ಪತ್ರಕರ್ತ ಕೆ. ತಿಮ್ಮಪ್ಪ ವಂದಿಸಿದರು.....................ಪತ್ರಿಕಾ ವಿತರಕರ ಸಂಘಕ್ಕೆ ರು.1.50 ಲಕ್ಷ ಘೋಷಣೆಕೊಡಗಿನಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘಕ್ಕೆ ಶಕ್ತಿ ಬಳಗದಿಂದ ರು.1.50 ಲಕ್ಷ ನೀಡುವುದಾಗಿ ಶಕ್ತಿ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಪತ್ರಿಕಾ ವಿತರಕರ ದಿನಾಚರಣೆಯಲ್ಲಿ ಘೋಷಿಸಿದರು.