ಕನ್ನಡಪ್ರಭ ವಾರ್ತೆ ಆನಂದಪುರ
ಸಮೀಪದ ಯಡೇಹಳ್ಳಿ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಗೋಡು ತಿಮ್ಮಪ್ಪ ಅವರ ಅಧಿಕಾರಾವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿಗೆ ಪ್ರತಿ ಹಂತದಲ್ಲೂ ಸಚಿವ ಸ್ಥಾನ ದೊರೆಯುತ್ತಿತ್ತು. ಆದರೆ ಪ್ರಸ್ತುತ ಸಾಗರ ತಾಲೂಕಿಗೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಪರವಾಗಿ ಯಾಕೆ ಧ್ವನಿ ಎತ್ತುತ್ತಿಲ್ಲ. ಈ ಹಿಂದೆ ಮಧು ಬಂಗಾರಪ್ಪ ಸಚಿವರಾದಾಗ ಎಲ್ಲರೂ ಸ್ವಾಗತಿಸಿದ್ದೇವೆ. ಇದೀಗ ಸಾಗರ ಕ್ಷೇತ್ರದ ಶಾಸಕರಿಗೂ ಸಚಿವ ಸ್ಥಾನ ದೊರೆಯಬೇಕು ಎಂದು ಹಾಕ್ಕೋತ್ತಾಯ ಮಾಡಬೇಕೆಂದರು.ಕಾಗೋಡು ತಿಮ್ಮಪ್ಪ ಅವರ ಅವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಂಡಿದ್ದ ತಾಲೂಕು ಈಗ ಅಭಿವೃದ್ಧಿಯಿಂದ ವಂಚಿತವಾಗುತ್ತಿದೆ. ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ದೊರೆತರೆ ಸಾಗರ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದರು.
ಆಚಾಪುರ ಗ್ರಾಪಂ ಮಾಜಿ ಅಧ್ಯಕ್ಷ ಕಲಿಮುಲ್ಲಾ ಖಾನ್ ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಕಾಂಗ್ರೆಸ್ ಸಮಿತಿಗಳು ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬೀದಿಗಿಳಿದು ಹೋರಾಟ ಮಾಡಬೇಕಾಗಿದೆ. ಜನರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಗೋಪಾಲಕೃಷ್ಣ ಬೇಳೂರು ಅವರು, ಪಕ್ಷ ಸಂಘಟನೆ ಜೊತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರಾಗಿದ್ದಾರೆ. ಇಂತಹ ಜನ ನಾಯಕರಿಗೆ ಸಚಿವ ಸ್ಥಾನ ದೊರೆಯಲೇಬೇಕು ಎಂದರು.
ಪಕ್ಷದ ಪ್ರಮುಖರಾದ ಗಜೇಂದ್ರ ಯಾದವ್, ನಜೀರುಲ್ಲಾ ಖಾನ್, ರಮಾನಂದ್ ಸಾಗರ್, ಅಮೀರ್, ಲೋಕೇಶ್, ಶರತ್ ನಾಗಪ್ಪ, ರೆಹಮತುಲ್ಲಾ, ಮೋಹನ್, ಬಸವರಾಜ್, ಮುಕುಂದ, ಚೌಡಪ್ಪ, ವಿಜಯ್ ಕುಮಾರ್, ಮುಕುಂದ, ಸಿರಾಜ್, ಆಸಿಫ್ ಇತರರು ಹಾಜರಿದ್ದರು.