)
ಹುಬ್ಬಳ್ಳಿ:
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ 20-25 ಜನರು ಹೊರಟ್ಟಿ ಅವರ ಕೊಠಡಿಯಲ್ಲಿ ಕುಳಿತು ರಾಜೀನಾಮೆ ಪತ್ರ ಸಿದ್ಧಪಡಿಸಿ ಸಹಿ ಮಾಡಿಸಿಕೊಂಡಿರುವುದು ವಿಷಾದಕರ. ಹಿರಿಯ ಮುತ್ಸದ್ಧಿ ರಾಜಕಾರಣಿಯೊಂದಿಗೆ ಈ ರೀತಿ ನಡೆದುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಹೊರಟ್ಟಿ ಅವರ ಮೇಲೆ ಒತ್ತಡ ಹೇರಿರುವ ಕುರಿತು ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ ಎಂದರು.
ಗ್ಯಾರಂಟಿ ಯೋಜನೆಗಳ ಹಗರಣ ಮುಚ್ಚಿ ಹಾಕಲು ಪರಿಷ್ಕರಣೆ ಮಾಡಲಾಗುತ್ತಿದೆ. ಕಳೆದ ಅವಧಿಯ ಗೃಹಲಕ್ಷ್ಮಿ ಹಗರಣದ ಬಗ್ಗೆ ಸರ್ಕಾರ ಚಕಾರ ಎತ್ತುತ್ತಿಲ್ಲ. ಆ. 13ರಿಂದ ನಡೆಯಲಿರುವ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ₹5,000 ಕೋಟಿ ಲೆಕ್ಕ, ಅನ್ನಭಾಗ್ಯದ ₹627 ಕೋಟಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಪ್ರಶ್ನಿಸಲಾಗುವುದು ಎಂದರು.ಉತ್ತರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಧಾರವಾಡದ ಎಫ್‌ಎಂಸಿಜಿ ಕ್ಲಸ್ಟರ್ ಉಳಿಸಲು 2028ರೊಳಗೆ ಕ್ರಮ ಕೈಗೊಂಡು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.