ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ವಾರ್ಷಿಕ ಸಭೆ
7ನೇ ವೇತನ ಆಯೋಗ ಶಿಫಾರಸು ಮಾಡಿದ್ದ ಸೌಲಭ್ಯಗಳಲ್ಲಿ ಬಾಕಿ ಉಳಿದವುಗಳನ್ನು ಪಡೆಯಲು ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುವಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಕ್ರಿಯಾಶೀಲವಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ತಿಳಿಸಿದರು.
ಅಜ್ಜಂಪುರ ಪಟ್ಟಣದಲ್ಲಿ ನಡೆದ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಈ ಸಂಘ ಕೇಂದ್ರ ಸಂಘದಿಂದ ಮಾನ್ಯತೆ ಪಡೆದ ಅಧಿಕೃತ ಸಂಘವಾಗಿದೆ ಎಂದು ತಾಲೂಕು ಘಟಕದ ಅಧ್ಯಕ್ಷ ಅಣ್ಣಪ್ಪ ಸ್ವಾಮಿ ತಿಳಿಸಿದರು.ರಾಜ್ಯ ಸಂಘದ ಅಧ್ಯಕ್ಷ ಬೈರಪ್ಪನವರು ಡಿಸೆಂಬರ್‌ನಲ್ಲಿ ನಡೆಸಲು ಉದ್ದೇಶಿಸಿರುವ ರಾಜ್ಯಮಟ್ಟದ ಸಮ್ಮೇಳನದಲ್ಲಿ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಸಂಘದ ಕಾರ್ಯದರ್ಶಿ ರಾಜಶೇಖರಯ್ಯ ವಾರ್ಷಿಕ ವರದಿ, ಖಜಾಂಚಿ ಮಹೇಂದ್ರಪ್ಪ ಲೆಕ್ಕಪತ್ರ ಮಂಡಿಸಿದರು.
-
ಅಜ್ಜಂಪುರದಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ವಾರ್ಷಿಕ ಸಭೆ ಏರ್ಪಡಿಸಲಾಗಿತ್ತು. ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ, ತಾಲೂಕು ಘಟಕದ ಅಧ್ಯಕ್ಷ ಅಣ್ಣಪ್ಪ ಸ್ವಾಮಿ ಮತ್ತಿತರರು ಇದ್ದರು.