ಬಾಕಿ ಅನುದಾನ ಬಿಡುಗಡೆಗಾಗಿ ಕೇಂದ್ರಕ್ಕೆ ಒತ್ತಡ ಹೇರಿ: ಸಿದ್ದರಾಮಯ್ಯ

KannadaprabhaNewsNetwork |  
Published : May 15, 2025, 01:47 AM IST
ಸಿದ್ದರಾಮಯ್ಯ  | Kannada Prabha

ಸಾರಾಂಶ

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಹಣ ಬಿಡುಗಡೆಯಾಗುತ್ತಿಲ್ಲ. 2024-25ನೇ ಸಾಲಿನ ಕೇಂದ್ರದ ಪಾಲು ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದ್ದು, ರಾಜ್ಯದ ಸಂಸದರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನ ತರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಹಣ ಬಿಡುಗಡೆಯಾಗುತ್ತಿಲ್ಲ. 2024-25ನೇ ಸಾಲಿನ ಕೇಂದ್ರದ ಪಾಲು ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದ್ದು, ರಾಜ್ಯದ ಸಂಸದರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನ ತರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ವಿಧಾನಸೌಧದಲ್ಲಿ ದಿಶಾ ಸಭೆ ನಂತರ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾಗಿದ್ದ ದಿಶಾ ಸಮಿತಿ ಸಭೆ ನಡೆಸಲಾಗಿದೆ. 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. 2024-25ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ 46,859 ಕೋಟಿ ರು. ಖರ್ಚು ಮಾಡಲಾಗಿದೆ. ಅದರಲ್ಲಿ 24,960 ಕೋಟಿ ರು. ರಾಜ್ಯದ ಅನುದಾನವಾಗಿದೆ. ಇನ್ನು ಕೇಂದ್ರದ ಪಾಲು 22,758 ಕೋಟಿ ರು.ಗಳಾಗಿದ್ದು, ಅದರಲ್ಲಿ ಕೇಂದ್ರ ಸರ್ಕಾರ 18,561 ಕೋಟಿ ರು. ನೀಡಿದೆ. ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದೆ. ಆ ಹಣವನ್ನು ತರಲು ರಾಜ್ಯದ ಎಲ್ಲ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದರು.

ಶೇ.83ರಷ್ಟು ಅನುದಾನ ಖರ್ಚು:

ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಶೇ. 83ರಷ್ಟು ಅನುದಾನ ಖರ್ಚಾಗಿದೆ. ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆ ಸೇರಿ ಇನ್ನಿತರ ಸಮಸ್ಯೆಗಳಿಂದ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಆದರೂ 2025-26ನೇ ಸಾಲಿನಲ್ಲಿ ಶೇ.100ರಷ್ಟು ಅನುದಾನ ಖರ್ಚು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆಯೂ ಸೂಚಿಸಲಾಗಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಕ್ರಮಣ ಮಾಡಿಕೊಂಡಿದ್ದ ಸರ್ಕಾರಿ ಆಸ್ತಿಗೆ ಬೀಗ
ಸ್ಥಳೀಯ ರೈಲ್ವೆ ಪೊಲೀಸ್ ಸಿಬ್ಬಂದಿಯ ಕಾರ್ಯವೈಖರಿ ಪರಿಶೀಲಿಸಿದ ಡಿಐಜಿ ರಶ್ಮಿ