ಪ್ರತಿಷ್ಠೆ ಕಣವಾದ ಬೆಂ.ಗ್ರಾ. ಲೋಕಸಭಾ ಕ್ಷೇತ್ರ

KannadaprabhaNewsNetwork | Published : Apr 5, 2024 1:04 AM

ಸಾರಾಂಶ

ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದಲ್ಲಿ ಸಾತನೂರು ಹೋಬಳಿ ವ್ಯಾಪ್ತಿಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಂಜುನಾಥ್ ಗೆಲುವಿಗೆ ಯಾವ ರೀತಿ ಕೆಲಸ ಮಾಡಬೇಕು ಎಂದು ಚರ್ಚಿಸಿದರು.

ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದಲ್ಲಿ ಸಾತನೂರು ಹೋಬಳಿ ವ್ಯಾಪ್ತಿಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಂಜುನಾಥ್ ಗೆಲುವಿಗೆ ಯಾವ ರೀತಿ ಕೆಲಸ ಮಾಡಬೇಕು ಎಂದು ಚರ್ಚಿಸಿದರು.

ಸಭೆಯಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯ ಹೊನಗನಹಳ್ಳಿ ಜಗನ್ನಾಥ್‌ ಮಾತನಾಡಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಜೆಡಿಎಸ್ ಮತ್ತು ಬಿಜೆಪಿ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಎರಡು ಪಕ್ಷದ ಕಾರ್ಯಕರ್ತರು ಮುಖಂಡರು ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಗ್ಗಟ್ಟಿನಿಂದ ಚುನಾವಣೆಯನ್ನು ನಡೆಸಿದರೆ ಮೈತ್ರಿ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಬದಲಾವಣೆಗೆ ಇದು ಸೂಕ್ತ ಸಮಯವಾಗಿದ್ದು, ಕಳೆದ 30 ವರ್ಷಗಳಿಂದ ನಮಗೆ ಇಂತಹ ಅವಕಾಶ ಸಿಕ್ಕಿರಲಿಲ್ಲ. ಇಂತಹ ಅವಕಾಶವನ್ನು ಕಳೆದುಕೊಳ್ಳದೆ, ಪ್ರತಿ ಬೂತ್ ಮಟ್ಟದಲ್ಲೂ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ತಮ್ಮ ವ್ಯಾಪ್ತಿ ಗ್ರಾಮಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮತದಾರರ ಮನವೊಲಿಸಿ ಮೈತ್ರಿ ಅಭ್ಯರ್ಥಿಗೆ ಹೆಚ್ಚಿನ ಮತಗಳು ಬರುವಂತೆ ಮಾಡಿ ಪ್ರಧಾನಿ ಮೋದಿ ಅವರ ಕೈ ಬಲಪಡಿಸಬೇಕು ಎಂದರು.

ಮೈತ್ರಿ ಅಭ್ಯರ್ಥಿ ವೈದ್ಯ ಮಂಜುನಾಥ್ ಹೃದಯವಂತ ವ್ಯಕ್ತಿ ಎಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಅಂತಹ ವ್ಯಕ್ತಿ ನಮ್ಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಿರುವುದು ನಮ್ಮೆಲ್ಲರಿಗೂ ಉತ್ಸಾಹ ತಂದಿದೆ. ಮತ್ತೆ ದೇಶದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ. ಮಂಜುನಾಥ್ ಅವರು ಗೆದ್ದರೆ ಆರೋಗ್ಯ ಸಚಿವರಾಗಲಿದ್ದಾರೆ. ಅವರು ಕೇಂದ್ರದ ಮಂತ್ರಿಗಳಾದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಅಭಿವೃದ್ಧಿ ಕಾಣಲಿದೆ. ಕ್ಷೇತ್ರದ ಜನರು ಬದಲಾವಣೆ ಬಯಸಿದ್ದಾರೆ. ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಇದೆ. ಜನರು ಸ್ವಯಂ ಪ್ರೇರಿತರಾಗಿ ಡಾ. ಮಂಜುನಾಥ್ ಅವರ ಪರ ಕೆಲಸ ಮಾಡಲು ಉತ್ಸುಕರಾಗಿದ್ದು ಈ ಸಂದರ್ಭವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ನಮ್ಮ ಅಭ್ಯರ್ಥಿಯನ್ನು ಎರಡು ಲಕ್ಷ ಲೀಡ್‌ನಲ್ಲಿ ಗೆಲ್ಲಿಸುವ ವಿಶ್ವಾಸ ನಮಗಿದೆ ಎಂದರು.

ಸಭೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ನಾಗರಾಜು, ಮುಖಂಡರಾದ ಚಿನ್ನಸ್ವಾಮಿ, ಪುಟ್ಟರಾಜು, ಗೇರಹಳ್ಳಿ ಸಣ್ಣಪ್ಪ, ತಾಪಂ ಮಾಜಿ ಸದಸ್ಯ ಯೋಗೇಶ್ ಕಬ್ಬಾಳೇಗೌಡ, ಸಾತನೂರು ಚಂದ್ರುರಾಜೇಶ್, ಕುರುಬಳ್ಳಿ ರಾಜೇಶ್ ಜಿಲ್ಲಾ ರೈತ ಮೋರ್ಚಾ ಪ್ರ. ಕಾರ್ಯದರ್ಶಿ ನಾಗನಂದ, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ ಪಿ ಕುಮಾರ್. ಗ್ರಾಪಂ ಸದಸ್ಯ ಕುಮಾರಸ್ವಾಮಿ, ಎಸ್.ಟಿ.ಮೋರ್ಚ ಶಿವಮುತ್ತು, ಯುವ ಮೋರ್ಚಾ ಸುನೀಲ್, ಮರಿಗೌಡ, ಮುನಿಸಿದ್ದೇಗೌಡ ಇತರರಿದ್ದರು.

ಕೆ ಕೆ ಪಿ ಸುದ್ದಿ 01

ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರು ಸಭೆ ಸೇರಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಚುನಾವಣಾ ಪೂರ್ವ ತಯಾರಿ ಕುರಿತು ಚರ್ಚಿಸಿದರು.

Share this article