ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ವಿದ್ಯಾರತ್ನ ರಾಜ್ಯ ಪ್ರಶಸ್ತಿ ಗರಿ

KannadaprabhaNewsNetwork |  
Published : Sep 26, 2026, 01:45 AM IST
ದ.ಕ. ಜಿಲ್ಲಾ ಲೀಡ್‌ ಬ್ಯಾಂಕ್‌ ಸಭೆ ನಡೆಸುತ್ತಿರುವ ಜಿ.ಪಂ.ಸಿಇಒ ವಿನಾಯಕ ನರ್ವಾಡೆ ಕಾರ್ಭಾರಿ | Kannada Prabha

ಸಾರಾಂಶ

ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ವತಿಯಿಂದ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಇಬ್ಬರು ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಷ್ಠಿತ ವಿದ್ಯಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊಡಗಿನ ಯಲಿಯಂಗಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಶ್ವಿನಿ ಎಂ.ಎಸ್. ಹಾಗೂ ಮುಳ್ಳೂರು ಸ.ಕಿ.ಪ್ರಾ. ಶಾಲೆಯ ಶಿಕ್ಷಕ ಜಾನ್ ಪೌಲ್ ಡಿಸೋಜ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿರಾಜಪೇಟೆ: ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ವತಿಯಿಂದ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಇಬ್ಬರು ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಷ್ಠಿತ ವಿದ್ಯಾರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೊಡಗಿನ ಯಲಿಯಂಗಾಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಶ್ವಿನಿ ಎಂ.ಎಸ್. ಹಾಗೂ ಮುಳ್ಳೂರು ಸ.ಕಿ.ಪ್ರಾ. ಶಾಲೆಯ ಶಿಕ್ಷಕ ಜಾನ್ ಪೌಲ್ ಡಿಸೋಜ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಇಬ್ಬರೂ ಶಿಕ್ಷಕರಿಗೆ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ಕಮಲಮ್ಮ ಹಾಗೂ ಪದಾಧಿಕಾರಿಗಳು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಶೈಕ್ಷಣಿಕ ಸೇವೆಗೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಪದ್ಮ ಹೆಚ್.ಎನ್. ,ಜಿಲ್ಲಾ ಸಂಚಲ ಕಾರದ ಲೋಕೇಶ್ , ಜಿಲ್ಲಾ ಕಾರ್ಯಧ್ಯಕ್ಷರಾದ ಜಯಮಾಲಾ ಮತ್ತು ತಾಂತ್ರಿಕ ಸಲಹೆಗಾರರಾದ ಕಮರುನ್ನೀಸ ಡಿ.ಎ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಲಮಟ್ಟಿ-ಯಾದಗಿರಿ ರೈಲು ಮಾರ್ಗ: ಗರಿಗೆದರಿದ ನಿರೀಕ್ಷೆ
ಹೆಣ್ಮಕ್ಕಳು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ: ಪ್ರೊ. ಎಸ್. ಇಂದುಮತಿ