ಸೊಳ್ಳೆಗಳ ಉತ್ಪತ್ತಿ ತಡೆಯಿರಿ

KannadaprabhaNewsNetwork |  
Published : Jul 19, 2024, 01:02 AM IST
ಸಸ | Kannada Prabha

ಸಾರಾಂಶ

ಸಾರ್ವಜನಿಕರು ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲುವ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಸೊಳ್ಳೆಗಳಿಂದ ಹರಡುವ ರೋಗಗಳು ಬಾರದಂತೆ ನೋಡಿಕೊಳ್ಳಬೇಕಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಸಂಗಮೇಶ ಅಂಗಡಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹುನಗುಂದ

ಸಾರ್ವಜನಿಕರು ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲುವ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಸೊಳ್ಳೆಗಳಿಂದ ಹರಡುವ ರೋಗಗಳು ಬಾರದಂತೆ ನೋಡಿಕೊಳ್ಳಬೇಕಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಸಂಗಮೇಶ ಅಂಗಡಿ ತಿಳಿಸಿದರು.

ಪಟ್ಟಣದ ಪುರಸಭಾ ಆವರಣದಲ್ಲಿ ಪುರಸಭೆ, ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆಯಿಂದ ಗುರುವಾರ ಹಮ್ಮಿಕೊಂಡ ಡೆಂಘೀ ಮತ್ತು ಚಿಕೂನ್ ಗುನ್ಯಾ ಜ್ವರ ನಿಯಂತ್ರಣ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರ ನಡೆಸಿ ಮಾತನಾಡಿದ ಅವರು, ಈಡಿಸ್ ಈಜಿಪ್ಟ್ ಸೊಳ್ಳೆಗಳು ಉತ್ಪತ್ತಿಯಾಗುವ ಸ್ಥಳಗಳಾದ ನೀರಿನ ತೊಟ್ಟಿ, ಹೂವಿನ ಕುಂಡಳಿ, ಟೈರ್-ಟ್ಯೂಬ್‌ಗಳು, ತೆಂಗಿನ ಚಿಪ್ಪಗಳು, ಖಾಲಿ ಬಾಟಲಿಗಳಲ್ಲಿ ಸೊಳ್ಳೆ ಉತ್ಪಾದನೆಯಾಗುವುದನ್ನು ಮೂಲದಲ್ಲೇ ತಡೆಯಬೇಕು. ನೀರಿನ ಸಂಗ್ರಹ ಸ್ಥಳದಲ್ಲೇ ಈ ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ನೀರಿನ ಮೂಲಗಳನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು. ನೀರಲ್ಲೇ ಸೊಳ್ಳೆಗಳು ಸಂತಾನೋತ್ಪತ್ತಿ ಆಗದಂತೆ ಎಚ್ಚರ ವಹಿಸಬೇಕು. ರೋಗದ ಲಕ್ಷಣಗಳು ಕಂಡಬಂದರೆ ಕೂಡಲೇ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು ಎಂದರು.

ಪುರಸಭೆಯ ಮ್ಯಾನೇಜರ್‌ ಎಂ.ಎಸ್.ಕಳ್ಳಿಗುಡ್ಡ ಮಾತನಾಡಿ, ಈಗಾಗಲೇ ಪಟ್ಟಣದ ಮನೆಯ ಸುತ್ತಮುತ್ತಲು ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಸೊಳ್ಳೆಗಳಿಂದ ಹರಡುವ ಡೆಂಘೀ, ಚಿಕೂನ್‌ಗುನ್ಯಾ, ಮಲೇರಿಯಾದಂತಹ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಪುರಸಭೆಯಿಂದ ಪಾಗಿಂಗ್ ಮತ್ತು ಮೇಲಾಥಿನ್ ಫೌಂಡರ್ ಸಿಂಪಡಿಸಲಾಗಿದ್ದು, ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಶುಕ್ರವಾರ ಮನೆ ಮನೆಗೂ ತೆರಳಿ ಲಾರ್ವಾ ಸಮೀಕ್ಷೆ ನಡೆಸಿ ಜನರಲ್ಲಿ ಅರಿವು ಮೂಡಿಸುವ ಕೆಲಸಗಳನ್ನು ಮಾಡುತ್ತಿದೆ. ಸಾರ್ವಜನಿಕರು ಜ್ವರ ಕಾಣಿಸಿಕೊಂಡರೇ ಕೂಡಲೇ ಆಸ್ಪತ್ರೆಗೆ ತೆರಳಿ, ಚಿಕಿತ್ಸೆ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಈ ವೇಳೆ ಸಿಡಿಪಿಒ ವೆಂಕಪ್ಪ ಗಿರಿತಿಮ್ಮಣ್ಣನವರ, ಪುರಸಭೆಯ ಸಿಬ್ಬಂದಿಗಳಾದ ಡಿ.ಡಿ.ಹಗೇದಾಳ, ಮುತ್ತಣ್ಣ ಹುಣಶ್ಯಾಳ, ಮಹಾಂತೇಶ ತಾರಿವಾಳ, ಬಾಬು ಲೈನ್, ನೀರುಪಾದಿ ಬದಾಮಿ, ಆರೋಗ್ಯ, ಪುರಸಭೆಯ ಇಲಾಖೆಯ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಇದ್ದರು.--

ಕೋಟ್

ಈಡಿಸ್ ಈಜಿಪ್ಟ್ ಸೊಳ್ಳೆಗಳು ಉತ್ಪತ್ತಿಯಾಗುವ ಸ್ಥಳಗಳಾದ ನೀರಿನ ತೊಟ್ಟಿ, ಹೂವಿನ ಕುಂಡಳಿ, ಟೈರ್-ಟ್ಯೂಬ್‌ಗಳು, ತೆಂಗಿನ ಚಿಪ್ಪಗಳು, ಖಾಲಿ ಬಾಟಲಿಗಳಲ್ಲಿ ಸೊಳ್ಳೆ ಉತ್ಪಾದನೆಯಾಗುವುದನ್ನು ಮೂಲದಲ್ಲೇ ತಡೆಯಬೇಕು.

-ಸಂಗಮೇಶ ಅಂಗಡಿ ತಾಲೂಕು ಆರೋಗ್ಯ ಅಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುಪ್ರಿಮ್‌ ಶಾಲೆಯಲ್ಲಿ ಮಕ್ಕಳು ವಿವಿಧ ಸಾಂಸ್ಕೃತಿಕ ಸಂಭ್ರಮೋತ್ಸವ
ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಸಂತಾಪ