ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಎಲ್ಲರ ಕರ್ತವ್ಯ: ನ್ಯಾಯಾಧೀಶ ಶಿವರಾಜ್

KannadaprabhaNewsNetwork |  
Published : Nov 27, 2026, 02:30 AM IST
ಮುಂಡಗೋಡ: ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಶಿವರಾಜ್ ಹೆಚ್.ಎಸ್ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ಮುಂಡಗೋಡ ಆಬಿಯೋಜನಾ ಇಲಾಖೆ ಮುಂಡಗೋಡ ವಕೀಲರ ಸಂಘ, ಮುಂಡಗೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚರಣೆ – ೨೦೨೬ರ ಅಂಗವಾಗಿ ಮಹಿಳೆಯರ ಹಕ್ಕುಗಳು, ಸುರಕ್ಷತೆ ಹಾಗೂ ದೌರ್ಜನ್ಯ ತಡೆಗೆ ಸಂಬಂಧಿಸಿದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಹಿಳೆಯರು ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾದಲ್ಲಿ ಭಯಪಡದೆ ಕಾನೂನಿನ ನೆರವು ಪಡೆಯಬೇಕು. ಮಹಿಳೆಯರ ತುರ್ತು ನೆರವಿಗಾಗಿ ಲಭ್ಯವಿರುವ ೧೮೧ ಮಹಿಳಾ ಸಹಾಯವಾಣಿಯ ಸದುಪಯೋಗ ಪಡೆದುಕೊಳ್ಳಬೇಕು.

ಮುಂಡಗೋಡ: ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಸಮಾಜದ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ ಎಂದು ಇಲ್ಲಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಶಿವರಾಜ್ ಎಚ್.ಎಸ್. ಹೇಳಿದರು.

ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ, ಆಭಿಯೋಜನಾ ಇಲಾಖೆ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚರಣೆ- ೨೦೨೬ರ ಅಂಗವಾಗಿ ಮಹಿಳೆಯರ ಹಕ್ಕುಗಳು, ಸುರಕ್ಷತೆ ಹಾಗೂ ದೌರ್ಜನ್ಯ ತಡೆಗೆ ಸಂಬಂಧಿಸಿದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾದಲ್ಲಿ ಭಯಪಡದೆ ಕಾನೂನಿನ ನೆರವು ಪಡೆಯಬೇಕು. ಮಹಿಳೆಯರ ತುರ್ತು ನೆರವಿಗಾಗಿ ಲಭ್ಯವಿರುವ ೧೮೧ ಮಹಿಳಾ ಸಹಾಯವಾಣಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ತಾಲೂಕು ಕಾನೂನು ಸೇವಾ ಸಮಿತಿಯ ಪ್ಯಾನಲ್ ವಕೀಲರಾದ ಜ್ಯೋತಿ ಪಾಟೀಲ ಮಾತನಾಡಿ, ಮಕ್ಕಳ ಸುರಕ್ಷತೆಯಲ್ಲಿ ತಾಯಂದಿರು ಹಾಗೂ ಪೋಷಕರ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದ್ದು, ಮಕ್ಕಳೊಂದಿಗೆ ಉತ್ತಮ ಸಂವಹನ ಹೊಂದುವ ಮೂಲಕ ಅವರಲ್ಲಿ ಸುರಕ್ಷತೆಯ ಅರಿವು ಮೂಡಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ರೀದೇವಿ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಎನ್.ಎ. ನಿಂಬಾಯಿ, ಕಾರ್ಯದರ್ಶಿ ಸಂಗಮೇಶ ಕೊಳಾನವರ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸ್ವರೂಪರಾಣಿ ಪಾಟೀಲ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕರಾದ ಉಷಾ ಬಾಗಲಕೋಟೆ ಉಪಸ್ಥಿತರಿದ್ದರು. ಉಮಾ ಪತ್ತಾರ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಗುರಿ
ರೈತರಿಗೆ ಪ್ರತಿ ಟನ್‌ಗೆ ₹3,825 ರಂತೆ ಬಿಲ್ ಪಾವತಿ