ಮಾನವ ಕಳ್ಳ ಸಾಗಾಣಿಕೆ ತಡೆ ಅಗತ್ಯ

KannadaprabhaNewsNetwork | Published : Aug 1, 2024 12:18 AM
ಯಾದಗಿರಿ ನಗರದ ಜಿಲ್ಲಾ ಸ್ತ್ರೀ ಶಕ್ತಿ ಭವನದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಜರುಗಿತು. | Kannada Prabha

ಯಾದಗಿರಿ ನಗರದ ಜಿಲ್ಲಾ ಸ್ತ್ರೀ ಶಕ್ತಿ ಭವನದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಜರುಗಿತು.

ಕನ್ನಡಪ್ರಭ ವಾರ್ತೆ ಯಾದಗಿರಿ

ಮಾನವ ಕಳ್ಳ ಸಾಗಾಣಿಕೆ ಒಂದು ಸಾಮಾಜಿಕ ಪಿಡುಗು ಆಗಿದ್ದು, ಅತಿ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಇದಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಮಾನವ ಕಳ್ಳ ಸಾಗಾಣಿಕೆ ತಡೆಗೆ ಸಮನ್ವಯ ಇಲಾಖೆಗಳ ಸಹಕಾರ ಅಗತ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಅವರು ಹೇಳಿದರು.

ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಸ್ತ್ರೀ ಶಕ್ತಿ ಭವನದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಎನ್ನುವುದು ಒಂದು ಸಾಮಾಜಕ್ಕೆ ಜೊಂದು ಪಿಡುಗು ಆಗಿದೆ. ಇದಕ್ಕೆ ಅತೀ ಹೆಚ್ಚು ಮಹಿಳೆಯರು ಸೇರಿದಂತೆ ಮಕ್ಕಳು ಒಳಗಾಗುತ್ತಿದ್ದಾರೆ. ಈ ಕುರಿತು ಪ್ರಕರಣಗಳ ಬೆಳಕಿಗೆ ಬಂದಾಗ ಮಾತ್ರ ತಡೆಗಟ್ಟಲು ಸಾಧ್ಯ ಎಂದು ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಭುಲಿಂಗ ಮಾನಕರ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕರು ಹಾಗೂ ಸಂಪನ್ಮೂಲ ವ್ಯಕ್ತಿಗಳು ರಿಯಾಜ್ ಪಾಟೀಲ್ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಪ್ರೇಮಮೂರ್ತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಹರಿ ದೇಶಪಾಂಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಷಯ ಪರಿವೀಕ್ಷಕ ರಾಜೇಂದ್ರಕುಮಾರ, ಯಾದಗಿರಿ ತಹಸೀಲ್ದಾರ್ ಗ್ರೇಡ್-2 ಮಹ್ಮದ್ ಶಕೀಲ್, ಯಾದಗಿರಿ ತಾಪಂ ಅಧಿಕಾರಿ ಬಸವರಾಜ್ ಶರಬೈ, ಯಾದಗಿರಿ ಜಿಲ್ಲಾ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಇದ್ದರು.