ಲೈಂಗಿಕ ದೌರ್ಜನ್ಯ ತಡೆ ಅಗತ್ಯ: ನ್ಯಾಯಾಧೀಶ ಭರತ್

KannadaprabhaNewsNetwork |  
Published : Oct 28, 2026, 02:00 AM IST
ಪೊಟೋ-ಲಕ್ಷ್ಮೇಶ್ವರ ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಹೈಸ್ಕೂಲ್ ಆವರಣದಲ್ಲಿ ಕಾನೂನು ಸೇವಾ ಸಮಿತಿ ವತಿಯಿಂದ  ಹಮ್ಮಿಕೊಂಡ ಸುರಕ್ಷಿತ ಬಾಲ್ಯ ಅಭಿಯಾನ ಕಾರ್ಯಕ್ರಮವನ್ನು ಹಿರಿಯ ದಿವಾಣಿ ನ್ಯಾಯಾಧೀಶ ಭರತ್ ಯೋಗಿಶ ಕರಗುದರಿ ಉದ್ಘಾಟಿಸಿದರು | Kannada Prabha

ಸಾರಾಂಶ

ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ, ಶಾಲಾ ಶಿಕ್ಷಣ ಇಲಾಖೆ, ಮತ್ತು ಪೋಲಿಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸುರಕ್ಷಿತ ಬಾಲ್ಯ ಅಭಿಯಾನ ಏರ್ಪಡಿಸಲಾಗಿತ್ತು.

ಸುರಕ್ಷಿತ ಬಾಲ್ಯ ಅಭಿಯಾನ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರ

ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ, ಶಾಲಾ ಶಿಕ್ಷಣ ಇಲಾಖೆ, ಮತ್ತು ಪೋಲಿಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸುರಕ್ಷಿತ ಬಾಲ್ಯ ಅಭಿಯಾನ ಏರ್ಪಡಿಸಲಾಗಿತ್ತು.

ಲಕ್ಷ್ಮೇಶ್ವರ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶ ಭರತ್ ಯೋಗಿಶ ಕರಗುದರಿ ಉದ್ಘಾಟಿಸಿ ಮಾತನಾಡಿ, ಬಾಲ್ಯದಲ್ಲಿ ಅನೇಕ ರೀತಿಯ ಸಮಸ್ಯೆಗಳು ಬಂದೆರುಗುತ್ತವೆ, ಅದರಲ್ಲೂ ಬಾಲಕಿಯರಿಗೆ ಲೈಂಗಿಕ ಕಿರುಕುಳದಂತಹ ಘಟನೆಗಳು ನಡೆಯುತ್ತವೆ, ಅದಕ್ಕಾಗಿ ಪೋಸ್ಕೋ ಕಾಯ್ದೆ ಇದ್ದು, ಮಹಿಳೆಯರ ಮೇಲೆ ಯಾವುದೇ ರೀತಿಯ ಕಿರುಕುಗಳ ನಡೆದರೂ ಸಹ ಅದರ ಬಗ್ಗೆ ಇದೇ ಕಾಯ್ದೆಯಡಿಯಲ್ಲಿ ಶಿಕ್ಷೆ ನೀಡಬಹುದು. ಮನೆಯ ಸುತ್ತಮುತ್ತ ಹಾಗೂ ಯಾರಿಂದಲೂ ಲೈಂಗಿಕ ದೌರ್ಜನ್ಯವಾದರೆ ತಾಯಿಗೆ, ಶಾಲೆಯಲ್ಲಿ ಏನಾದರು ಕಿರುಕುಳ ಕಂಡು ಬಂದಲ್ಲಿ ಮಹಿಳಾ ಶಿಕ್ಷಕಿಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಘಟನೆಗಳು ನಡೆದರೆ ಯಾವುದೇ ಕಾರಣಕ್ಕೂ ವಿಷಯವನ್ನು ಮುಚ್ಚಿಟ್ಟುಕೊಳ್ಳದೇ ಕಾನೂನಿಗೆ ತಿಳಿಸುವದು ಅವಶ್ಯ, ಇಲ್ಲವಾದರೆ ನಿಮ್ಮ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ನಮ್ಮ ಸಮಾಜದಲ್ಲಿ ಮರ್ಯಾದೆಗೆ ಹೆಚ್ಚು ಮಹತ್ವ ನೀಡುತ್ತವೆ, ಮರ್ಯಾದೆಯ ಹೆಸರಿನಲ್ಲಿ ಹೆದರಿ ಸುಮ್ಮನೆ ಕುಳಿತುಕೊಳ್ಳದೆ ಧೈರ್ಯದಿಂದ ನಿಮಗೆ ಆದ ದೌರ್ಜನ್ಯ ತಿಳಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಬಿಇಓ ಶಿವರಾಜ ಸಿಮಿಕೇರಿ ಮಾತನಾಡಿದರು. ವಕೀಲ ಬಿ.ಎಸ್. ಬಾಳೇಶ್ವರಮಠ ಉಪನ್ಯಾಸ ನೀಡಿದರು. ಮುಖ್ಯೋಪಾಧ್ಯಾಯ ಎಮ್.ಸಿ. ಹಿರೇಮಠ ಅಧ್ಯಕ್ಷತೆ ವಹಿಸಿದರು. ಪ್ಯಾನಲ್ ವಕೀಲ ಪಿ.ಎಮ್. ವಾಲಿ, ಶಾಲಾ ಶಿಕ್ಷಣ ಇಲಾಖೆಯ ರಾಘವೇಂದ್ರ ಜೋಶಿ, ಉತ್ತರ ಸಿ.ಆರ್.ಪಿ. ಉಮೇಶ ನೇಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫೋನ್‌ಇನ್‌ನಲ್ಲಿ ಕಸದ ಸಮ್ಯಸ್ಯೆಗಳದ್ದೇ ಸದ್ದು!
ಎಸ್‌ಐಆರ್‌ನಿಂದಾಗಿ ಬೆಂಗಳೂರಿನಲ್ಲಿ 46.88 ಲಕ್ಷ ಮತದಾರರ ಹೆಸರುಗಳು ಡಿಲೀಟ್ । ರಾಜಧಾನಿಯಲ್ಲಿ ಬರೀ 59 ಲಕ್ಷ ಮತದಾರರು