ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098, ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಂಗಳವಾರ ನಗರದ ಡಿಎಸಿಜಿ ಸರ್ಕಾರಿ ಪಾಲಿಟ್ನೆಕಿಕ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಎಲ್ಲಾ ಕಾಯ್ದೆ ಕಾನೂನುಗಳ ಮಾತೃ ಸ್ಥಾ ನ ಸಂವಿಧಾನವಾಗಿದೆ. ಭಾರತದ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರೀಕರಿಗೆ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಉಲ್ಲೇಖವಿದೆ. ಸಮಾಜದಲ್ಲಿ ಮಹಿಳೆಯರನ್ನು ಭಿನ್ನವಾಗಿ ಕಾಣುವ ವಿಪರ್ಯಾಸ ಇಂದಿಗೂ ಕಾಣಬಹುದು. ಹೆಣ್ಣು ಗಂಡು ಎಂಬ ಭೇದಭಾವವಿಲ್ಲದೆ ಎಲ್ಲರನ್ನು ಸಮಾನವಾಗಿ ಕಾಣಬೇಕು ಎಂದರು.ಮಹಿಳೆಯರು ಪುರುಷರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲದಂತೆ ಧೈರ್ಯದಿಂದ ಸ್ಪರ್ಧಿಸುತ್ತಿದ್ದಾರೆ. ಆದಾಗ್ಯೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೆ ಇವೆ. ಇವುಗಳನ್ನು ತಡೆಗಟ್ಟಲು ಕಟ್ಟು ನಿಟ್ಟಾದ ಕಾನೂನುಗಳ ಜಾರಿಗೆ ತರುವುದು ಅವಶ್ಯಕ. ಮಹಿಳೆಯ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ, ವರದಕ್ಷಿಣೆ, ಭ್ರೂಣ ಹತ್ಯೆ, ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳನ್ನು ಸಮಾಜದಿಂದ ಕಿತ್ತೊಗೆದು ಹೆಣ್ಣಿನ ರಕ್ಷಣೆಗೆ ಮುಂದಾಗಿ ಎಂದು ತಿಳಿಸಿದರು.
ಶಿಶು ಅಭಿವೃದ್ಧಿ ಅಧಿಕಾರಿ ಸಿ.ರಂಗನಾಥ್ ಅವರು ಪೋಕ್ಸೋ ಹಾಗೂ ಇನ್ನಿತರೆ ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು. ಪಾಲಿಟೆಕ್ನಿಕ್ ಕಾಲೇಜಿನ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿಭಾಗಾಧಿಕಾರಿ ಎಚ್.ಆರ್. ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು.