ಬೆಲೆ ಏರಿಕೆ ಕೇಂದ್ರ ಸರ್ಕಾರದ ಹಳೇ ಚಾಳಿ

KannadaprabhaNewsNetwork |  
Published : May 18, 2026, 04:00 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಚುನಾವಣೆಗಳು ಮುಗಿದ ತಕ್ಷಣವೇ ಕೇಂದ್ರ ಸರ್ಕಾರ ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದು ಹೊಸದೇನಲ್ಲ, ಇದು ಅವರ ಹಳೆಯ ಚಾಳಿಯೇ. ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರ ಬದುಕು ದುಸ್ತರವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಚುನಾವಣೆಗಳು ಮುಗಿದ ತಕ್ಷಣವೇ ಕೇಂದ್ರ ಸರ್ಕಾರ ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದು ಹೊಸದೇನಲ್ಲ, ಇದು ಅವರ ಹಳೆಯ ಚಾಳಿಯೇ. ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಜನರ ಬದುಕು ದುಸ್ತರವಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಚುನಾವಣೆಗಳು ನಡೆಯುವ ಸಂದರ್ಭದಲ್ಲಿ ಮತದಾರರನ್ನು ಸೆಳೆಯಲು ಬೆಲೆಗಳನ್ನು ಸ್ಥಿರವಾಗಿಟ್ಟು, ಚುನಾವಣೆ ಮುಗಿಯುತ್ತಿದ್ದಂತೆಯೇ ಏಕಾಏಕಿ ದರ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಟೀಕಿಸಿದರು.

ಇನ್ನು ಕೇಂದ್ರ ಸರ್ಕಾರದ ತೈಲ ಮತ್ತು ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಬಿಜೆಪಿಯವರು ಜಾಗತಿಕ ಬಿಕ್ಕಟ್ಟು ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ಸಮರ್ಥಿಸಿಕೊಳ್ಳುತ್ತಿರುವುದು ಸಂಪೂರ್ಣ ತಪ್ಪು. ಇದು ಜನವಿರೋಧಿ ನೀತಿ ಎಂದು ಆಕ್ಷೇಪಿಸಿದ ಸಚಿವರು, ಹಿಂದೆ ಯುಪಿಎ ಆಡಳಿತಾವಧಿಯಲ್ಲಿ ಪೆಟ್ರೋಲ್ ದರ ಕೇವಲ ₹ 1 ಹೆಚ್ಚಾದರೂ ದೇಶಾದ್ಯಂತ ಬೀದಿಗಿಳಿದು ದೊಡ್ಡ ಹಂಗಾಮಾ ಮಾಡುತ್ತಿದ್ದ ಇದೇ ಬಿಜೆಪಿ ನಾಯಕರು, ಇಂದು ತಾವೇ ನಿರಂತರವಾಗಿ ಬೆಲೆ ಏರಿಸುತ್ತಿದ್ದರೂ ಮೌನ ವಹಿಸಿದ್ದಾರೆ. ಇದರ ಹಿಂದೆ ರಾಜಕೀಯ ಸ್ವಾರ್ಥ ಅಡಗಿದೆ. ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಜನಸಾಮಾನ್ಯರ ಆರ್ಥಿಕ ಸಂಕಷ್ಟಗಳಿಗೆ ಸಂಪೂರ್ಣ ಕುರುಡಾಗಿದ್ದಾರೆ. ಬೆಲೆ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದವರ ಬದುಕು ದುಸ್ತರವಾಗಿದ್ದರೂ ಸಮರ್ಥಿಸಿಕೊಳ್ಳುವುದು ಅವರ ಜನವಿರೋಧಿ ಧೋರಣೆ ತೋರಿಸುತ್ತದೆ ಎಂದರು.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಸಂದೀಪ್ ಪಾಟೀಲ್ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಬೆಳಗಾವಿ ಉತ್ತರ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಹುಕೋಟಿ ವಂಚನೆ ಪ್ರಕರಣ: ಕಡತ ವಶಕ್ಕೆ ಪಡೆದ ಸಿಐಡಿ
ಕಾರ್ಯಕರ್ತರ ವ್ಯಕ್ತಿತ್ವ ರೂಪಿಸಲು ಪ್ರಶಿಕ್ಷಣ ವರ್ಗ