ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್ ಹಾಗೂ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜು ನೇತೃತ್ವದಲ್ಲಿ ತಾಲೂಕಿನ ಮದ್ದೂರು ಕಸಬಾ, ಕೊಪ್ಪ, ಸಿ.ಎ.ಕೆರೆ ಆತಗೂರು ಹೋಬಳಿಯ ನೂರಾರು ಮಂದಿ ಪ್ರಾಥಮಿಕ ಶಾಲಾ ಶಿಕ್ಷಕರು ನೌಕರರ ಸಂಘದ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿದ ನಂತರ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಬೃಹತ್ ಹೋರಾಟದಲ್ಲಿ ಪಾಲ್ಗೊಳ್ಳಲು ತೆರಳಿದರು.
ಬೆಂಗಳೂರು ಚಲೋಗೆ ಚಾಲನೆ ನೀಡಿದ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದೇವರಾಜು ಶಿಕ್ಷಕರ ಬೇಡಿಕೆ ಕುರಿತಂತೆ ಈ ಹಿಂದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರು ಶಾಲೆಗಳ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವುದಾಗಿ ಸ್ಪಷ್ಟಪಡಿಸಿದ್ದರು. ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ನಿಂಗರಾಜು ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.