ಸಂಕ್ರಾಂತಿ ಹಬ್ಬಕ್ಕೆ ಕನ್ನಡದಲ್ಲೇಶುಭಾಶಯ ಕೋರಿದ ಪ್ರಧಾನಿ

KannadaprabhaNewsNetwork |  
Published : Jan 15, 2026, 02:00 AM IST
ನರೇಂದ್ರ ಮೋದಿ | Kannada Prabha

ಸಾರಾಂಶ

ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಮಕರ ಸಂಕ್ರಾಂತಿ ಹಬ್ಬದ ಶುಭ ಕೋರಿದ್ದಾರೆ. ಹಬ್ಬವು ಆತ್ಮವಿಶ್ವಾಸ ಮತ್ತು ಆಶಾವಾದದೊಂದಿಗೆ ತುಂಬಿರಲಿ ಎಂದು ಹಾರೈಸಿದ್ದಾರೆ.

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಮಕರ ಸಂಕ್ರಾಂತಿ ಹಬ್ಬದ ಶುಭ ಕೋರಿದ್ದಾರೆ. ಹಬ್ಬವು ಆತ್ಮವಿಶ್ವಾಸ ಮತ್ತು ಆಶಾವಾದದೊಂದಿಗೆ ತುಂಬಿರಲಿ ಎಂದು ಹಾರೈಸಿದ್ದಾರೆ.

ಈ ಬಗ್ಗೆ ಇಮೇಲ್‌ ಮೂಲಕ ಜನತೆಗೆ ಸಂದೇಶ ರವಾನಿಸಿರುವ ಮೋದಿ, ‘ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಸೂರ್ಯನ ಪಥ ಬದಲಾವಣೆಯ ಹೊಸ ಆರಂಭವನ್ನು ಸೂಚಿಸುವ ಸಂಕ್ರಾಂತಿಯು ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತ. ದೇಶಾದ್ಯಂತ ವಿವಿಧ ರೂಪಗಳಲ್ಲಿ, ಆದರೆ ಅಷ್ಟೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮನ್ನೆಲ್ಲ ಒಟ್ಟಾಗಿ ಬೆಸೆಯುವ ಒಗ್ಗಟ್ಟಿನ ಭಾವನೆಯನ್ನು ನೆನಪಿಸುತ್ತದೆ. ಈ ಹಬ್ಬವು ನಮ್ಮ ರೈತರು ಮತ್ತು ಅವರ ಕುಟುಂಬಗಳ ಜೀವನದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಇದು ನಮ್ಮ ಅನ್ನದಾತರಿಗೆ ಕೃತಜ್ಞತೆಯನ್ನು ಸಲ್ಲಿಸುವ ಮತ್ತು ಆ ಮೂಲಕ ನಮ್ಮ ಸಮಾಜವನ್ನು ಬಲಪಡಿಸುವ ಸಂದರ್ಭವಾಗಿದೆ’ ಎಂದಿದ್ದಾರೆ.ಮುಂದುವರೆದಂತೆ, ‘ಸಂಕ್ರಾಂತಿಯು ನಮ್ಮನ್ನು ಆತ್ಮವಿಶ್ವಾಸ ಮತ್ತು ಆಶಾವಾದದೊಂದಿಗೆ ಮುನ್ನಡೆಯಲು ಪ್ರೋತ್ಸಾಹಿ ಸುತ್ತದೆ. ನಿಮ್ಮ ಮುಂದಿನ ದಿನಗಳು ಯಾವಾಗಲೂ ಸಮೃದ್ಧಿ, ಸಕಾರಾತ್ಮಕತೆ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ. ನಿಮ್ಮ ಮನೆಯಲ್ಲಿ ಸಂತೋಷ ನೆಲೆಸಲಿ, ನಿಮ್ಮೆಲ್ಲಾ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಮತ್ತು ಸಮಾಜದಲ್ಲಿ ಸಾಮರಸ್ಯ ಮೂಡಲಿ’ ಹರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ