ಕಾಂಗ್ರೆಸ್ ಗ್ಯಾರಂಟಿ ಕಾಪಿ ಮಾಡಿದ ಪ್ರಧಾನಿ ಮೋದಿ: ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್

KannadaprabhaNewsNetwork |  
Published : Feb 26, 2024, 01:32 AM ISTUpdated : Feb 26, 2024, 01:33 AM IST
25ಕೆಪಿಎಲ್2:ಕೊಪ್ಪಳದಲ್ಲಿ ಶಾಸಕರ ನಿವಾಸದ ಕಾರ್ಯಾಲಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಅನುಷ್ಠಾನದ ಸಮಿತಿಯ ಪೂರ್ವಭಾವಿ ಸಭೆ ಜರುಗಿತು. ಶಾಸಕ ಕೆ ರಾಘವೇಂದ್ರ ಹಿಟ್ನಾಳ ಮಾತನಾಡಿದರು. ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್, ರಾಜಶೇಖರ ಹಿಟ್ನಾಳ ಇತರರಿದ್ದರು.  | Kannada Prabha

ಸಾರಾಂಶ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಗತ್ತು ಮೆಚ್ಚಿದೆ. ಇತಿಹಾಸದಲ್ಲಿ ಮೆಚ್ಚುವಂತಹ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಕೊಪ್ಪಳ: ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿ ಆಗುತ್ತದೆ ಎಂದ ಪ್ರಧಾನಿ ನರೇಂದ್ರ ಮೋದಿಯವರೇ ಲೋಕಸಭೆ ಚುನಾವಣೆ ಪ್ರಯುಕ್ತ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ವಿಪ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಹೇಳಿದರು.ನಗರದ ಶಾಸಕರ ನಿವಾಸದ ಕಾರ್ಯಾಲಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಅನುಷ್ಠಾನದ ಸಮಿತಿಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಗತ್ತು ಮೆಚ್ಚಿದೆ. ಇತಿಹಾಸದಲ್ಲಿ ಮೆಚ್ಚುವಂತಹ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಈಗ ನಮ್ಮ ಸರ್ಕಾರದ ಸಾಧನೆಯನ್ನು ನೋಡಿಕೊಂಡು ಮೋದಿ ಕಾಪಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳನ್ನು ಮೋದಿ ದಿವಾಳಿ ಯೋಜನೆ ಅನ್ನುತ್ತಿದ್ದರು. ಆದರೆ ಈಗ ನಮ್ಮದು ಕಾಪಿ ಮಾಡಿಕೊಂಡು ಮೋದಿ ಗ್ಯಾರಂಟಿ ಬರುತ್ತಿವೆ. ಕಾಂಗ್ರೆಸ್ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಜ್ಯದಲ್ಲಿ ಐದು ವರ್ಷ, ಕೇಂದ್ರದಲ್ಲಿ ಹತ್ತು ವರ್ಷ ಇದ್ದ ಬಿಜೆಪಿಯಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದರು.ಮಾಜಿ ಸದಸ್ಯ ವಿಪ ಶರಣಪ್ಪಮಟ್ಟೂರು ಮಾತನಾಡಿದರು.ಶಾಸಕ ರಾಘವೇಂದ್ರ ಹಿಟ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ ಮಾತನಾಡಿದರು.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ಗಾಳೆಪ್ಪ ಪೂಜಾರ್, ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಬಾಲಚಂದ್ರನ್, ಅಮಜಾದ್ ಪಟೇಲ್, ಅಕ್ಬರ್ ಪಾಷಾ, ಜ್ಯೋತಿ ಗೊಂಡಬಾಳ, ರೇಷ್ಮಾ ಕಾಜಾವಳಿ, ಯಮನೂರಪ್ಪ ನಾಯಕ, ವಿರುಪಣ್ಣ ನವೋದಯ, ಮುತ್ತುರಾಜ ಕುಷ್ಟಗಿ, ಸಿದ್ದು ಮ್ಯಾಗೇರಿ, ಬಾಷುಸಾಬ್ ಕಟೀಬ್, ಗವಿಸಿದ್ದಪ್ಪಚಿನ್ನೂರು, ಶಿವರೆಡ್ಡಿ ಭೂಮಕ್ಕನವರ್ ಇತರರಿದ್ದರು. ರಾಜಶೇಖರ ಹಿಟ್ನಾಳ ಗೆಲ್ಲಿಸಿ: ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್ ತಮ್ಮ ಭಾಷಣದಲ್ಲಿ ರಾಜಶೇಖರ ಹಿಟ್ನಾಳ ಕೊಪ್ಪಳ ಲೋಕಸಭೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಆಶೀರ್ವದಿಸಿ ಗೆಲ್ಲಿಸಬೇಕು. ಅವರ ಸೇವೆ ಇನ್ನೂ ಹೆಚ್ಚಿನ ರೀತಿಯಲ್ಲಿ ಜನರಿಗೆ ಸಿಗಬೇಕು ಎಂದರು. ಕಾಂಗ್ರೆಸ್ ಇನ್ನು ಲೋಕಸಭೆ ಚುನಾವಣೆಯ ಅಭ್ಯರ್ಥಿಯ ಹೆಸರು ಬಹಿರಂಗಪಡಿಸಿಲ್ಲ. ಜಿಲ್ಲೆಯಲ್ಲಿ ಪ್ರಮುಖರು ಸಹ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್ ರಾಜಶೇಖರ ಹಿಟ್ನಾಳ ಅವರನ್ನು ಗೆಲ್ಲಿಸಬೇಕು ಎಂದಿರುವುದು ಕಾಂಗ್ರೆಸ್ ಪಾಳೆಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ