ಕಪ್ಪುಚುಕ್ಕೆ ಇಲ್ಲದ ಆಡಳಿತ ಪ್ರಧಾನಿ ಮೋದಿಯವರದ್ದು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

KannadaprabhaNewsNetwork |  
Published : Oct 14, 2026, 01:30 AM IST
ಪೊಟೋ: 13ಎಸ್‌ಎಂಜಿಕೆಪಿ08ಶಿರಾಳಕೊಪ್ಪದಲ್ಲಿ ಮಂಗಳವಾರ ಪ್ರಧಾನಿ ಮೋದಿ ಅವರ 75ನೇ ಜನ್ಮದಿನ ಹಾಗೂ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ  ಬಿಜೆಪಿ ಮತ್ತು ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಬಿ.ವೈ.ವಿಜಯೇಂದ್ರ ಉದ್ಘಾಟಸಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದ್ದಾರೆ. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು 25 ವರ್ಷಗಳ ಸುದೀರ್ಘ ಆಡಳಿತಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ದೇಶವನ್ನು ಮುನ್ನಡೆಸಿರುವುದು ಸಾಹಸದ ಕೆಲಸ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಶ್ಲಾಘಿಸಿದರು.

ಕನ್ನಡಪ್ರಭ ವಾರ್ತೆ ಶಿರಾಳಕೊಪ್ಪ

ಪ್ರಧಾನಿ ನರೇಂದ್ರ ಮೋದಿ ಅವರು 25 ವರ್ಷಗಳ ಸುದೀರ್ಘ ಆಡಳಿತಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ದೇಶವನ್ನು ಮುನ್ನಡೆಸಿರುವುದು ಸಾಹಸದ ಕೆಲಸ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಶ್ಲಾಘಿಸಿದರು.

ಪ್ರಧಾನಿ ಮೋದಿ ಅವರ 75ನೇ ಜನ್ಮದಿನ ಹಾಗೂ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಪಟ್ಟಣದಲ್ಲಿ ಬಿಜೆಪಿ ಮತ್ತು ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಿಷ್ಠವಾಗಿ ಸಂಘಟಿಸುವ ಸಂಕಲ್ಪ ಮಾಡಲಾಗಿದೆ. ಕಾರ್ಯಕರ್ತರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ರಾಜಕೀಯ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಜನರ ವಿಶ್ವಾಸ ಗಳಿಸಬೇಕು. ಸೇವಾ ಮನೋಭಾವವೇ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಮಾರ್ಗ ಎಂದರು.

ಪ್ರಧಾನಿ ಅವರ ಜನ್ಮದಿನವನ್ನು ಸಂಭ್ರಮಾಚರಣೆಗೆ ಸೀಮಿತಗೊಳಿಸದೆ ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಇಂತಹ ಶಿಬಿರಗಳಿಂದ ಗ್ರಾಮೀಣ ಜನರಿಗೆ ಸ್ಥಳದಲ್ಲೇ ಆರೋಗ್ಯ ತಪಾಸಣೆ ಸೌಲಭ್ಯ ದೊರೆಯುವುದರ ಜತೆಗೆ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಹಣಬಲ, ಜಾತಿಬಲ ಹಾಗೂ ತೋಳ್ಬಲದ ಮೇಲೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಬೇಕು. ಕಾರ್ಯಕರ್ತರು ಈಗಿನಿಂದಲೇ ಸಂಘಟಿತರಾಗಿ ಶ್ರಮಿಸಿ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಅಭಿಯಾನದ ಅಂಗವಾಗಿ ಅಂಗನವಾಡಿಗಳಿಗೆ ಆಟಿಕೆಗಳನ್ನು ಉಡುಗೊರೆಯಾಗಿ ವಿತರಿಸಲಾಯಿತು. ಮಕ್ಕಳ ಕಲಿಕೆ, ಸೃಜನಶೀಲತೆ ಹಾಗೂ ಮಾನಸಿಕ ಬೆಳವಣಿಗೆಗೆ ಇವು ಸಹಕಾರಿಯಾಗಲಿವೆ. ಮಹಿಳೆಯರಿಗಾಗಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ ತಮ್ಮ ಕಲಾ ಪ್ರತಿಭೆ ಪ್ರದರ್ಶಿಸಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಅರಣ್ಯ ಅಭಿವೃದ್ಧಿ ಮಂಡಳಿ ಮಾಜಿ ಉಪಾಧ್ಯಕ್ಷ ಕೆ. ರೇವಣಪ್ಪ, ರಾಷ್ಟ್ರೀಯ ಸಹಕಾರಿ ಮಂಡಳಿ ನಿರ್ದೇಶಕ ಅಗಡಿ ಅಶೋಕ, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ನಿಂಬೆಗೊಂದಿ ಸಿದ್ದಲಿಂಗಪ್ಪ, ತಾಲೂಕು ಅಧ್ಯಕ್ಷ ಯೋಗೀಶಪ್ಪ, ಟೌನ್ ಅಧ್ಯಕ್ಷ ಎ.ಸಿ. ಚನ್ನವೀರಪ್ಪ, ಕಾರ್ಯದರ್ಶಿ ರವಿ ಶಾನಭೋಗ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ, ತೊಗರ್ಸಿ ಹನುಮಂತಪ್ಪ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಆಶಾ ಮಂಜುನಾಥ ವಂದೇ ಮಾತರಂ ಗೀತೆ ಹಾಡಿದರು. ಬಿಜೆಪಿ ಮುಖಂಡರು, ಕಾರ್ಯಕರ್ತರು, ಆಸ್ಪತ್ರೆಯ ವೈದ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ದೂರು: ಕಬ್ಬು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಕಲಬೆರಕೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಮನ್ಮುಲ್ ಒಕ್ಕೂಟಕ್ಕೆ ಮುತ್ತಿಗೆ