ಇದೊಂದು ಐತಿಹಾಸಿಕ ಪಯಣ. ಜನರು ಪ್ರಧಾನಿ ನರೇಂದ್ರ ಮೋದಿ ಆಡಳಿತ ಒಪ್ಪಿಕೊಂಡು ಶುಭ ಹಾರೈಸುತ್ತಿದ್ದಾರೆ
ಕೊಪ್ಪಳ: ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಯ ಫಲ ತಲುಪಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣವರ ಹೇಳಿದರು.
ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ 12 ವರ್ಷಗಳ ಅಭಿವೃದ್ಧಿ ಕಾರ್ಯಗಳ ಸ್ಕ್ರೀನ್ ಪ್ರದರ್ಶನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 12 ವರ್ಷಗಳಲ್ಲಿ ಭಾರತವು ಅಭಿವೃದ್ಧಿ, ಸುಶಾಸನ ಹಾಗೂ ಜಾಗತಿಕ ನಾಯಕತ್ವದತ್ತ ಸಾಗಿದೆ. ಇದೊಂದು ಐತಿಹಾಸಿಕ ಪಯಣ. ಜನರು ಪ್ರಧಾನಿ ನರೇಂದ್ರ ಮೋದಿ ಆಡಳಿತ ಒಪ್ಪಿಕೊಂಡು ಶುಭ ಹಾರೈಸುತ್ತಿದ್ದಾರೆ. ಭಾರತ ಪ್ರಧಾನಿ ಮೋದಿ ಅವರಿಂದ ಸದೃಢ ಆಗುತ್ತಿದೆ. ಕೇಂದ್ರ ಸರ್ಕಾರದ ಪ್ರಮುಖ ಜನಕಲ್ಯಾಣ ಯೋಜನೆ, ಮೂಲಸೌಕರ್ಯ ಕ್ಷೇತ್ರದಲ್ಲಿನ ಕ್ರಾಂತಿಕಾರಿ ಅಭಿವೃದ್ಧಿ, ಡಿಜಿಟಲ್ ಇಂಡಿಯಾ, ಸ್ವಚ್ಛ ಭಾರತ ಅಭಿಯಾನ, ಆತ್ಮನಿರ್ಭರ ಭಾರತ, ರೈತರು, ಮಹಿಳೆಯರು ಹಾಗೂ ಯುವಜನರ ಸಬಲೀಕರಣಕ್ಕಾಗಿ ಹಲವಾರು ಯೋಜನೆ ರೂಪಿಸಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಅಭಿವೃದ್ಧಿ, ಭದ್ರತೆ, ಸ್ವಾವಲಂಬನೆ ಹಾಗೂ ಜಾಗತಿಕ ಗೌರವದ ಹೊಸ ಅಧ್ಯಾಯ ಬರೆದಿದೆ. ಕೇಂದ್ರ ಸರ್ಕಾರದ ಯೋಜನೆ ಸಮಾಜದ ಕೊನೆಯ ವ್ಯಕ್ತಿಗೂ ತಲುಪುವಂತಾಗಿದ್ದು, ಅಭಿವೃದ್ಧಿಯ ಫಲ ಪ್ರತಿಯೊಬ್ಬ ನಾಗರಿಕನಿಗೂ ದೊರೆಯುವಂತೆ ಮಾಡಲಾಗಿದೆ. ಈ ಸಾಧನೆ ಜನರಿಗೆ ತಲುಪಿಸುವ ಉದ್ದೇಶದಿಂದ ಈ ಸ್ಕ್ರೀನ್ ಪ್ರದರ್ಶನ ಆಯೋಜಿಸಲಾಗಿದೆ ಎಂದರು.
ವಿಪ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ಸಾರ್ವಜನಿಕರು ಪ್ರಧಾನಿ ನರೇಂದ್ರ ಮೋದಿ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ವಿಶ್ವ ಮಟ್ಟದಲ್ಲಿ ತನ್ನದೇ ಆದ ವಿಶಿಷ್ಟ ಗುರುತನ್ನು ನಿರ್ಮಿಸಿಕೊಂಡಿದೆ. ದೇಶದ ಆರ್ಥಿಕ ಪ್ರಗತಿ, ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆ, ಸಾಮಾಜಿಕ ನ್ಯಾಯ ಹಾಗೂ ಬಡವರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಕ್ರಮ ತೆಗೆದುಕೊಂಡಿದೆ ಎಂದರು.
ಬಿಜೆಪಿ ಮುಖಂಡ ಡಾ. ಕೆ.ಬಸವರಾಜ ಕ್ಯಾವಟರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತ ಅಭಿವೃದ್ಧಿಯ ದಾಫುಗಾಲು ಇಡುತ್ತಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.