ದೇಶದ ಮುಂದಿನ ಪೀಳಿಗೆಗೆ ಕೊಡುಗೆ ನೀಡಿ ಎಂದ ಪ್ರಧಾನಿ ಮೋದಿ: ಸಚಿವ ವಿ.ಸೋಮಣ್ಣ

KannadaprabhaNewsNetwork |  
Published : Jul 21, 2024, 01:20 AM IST
ಸಿದ್ಧಲಿಂಗ ಸ್ವಾಮೀಜಿ ಅವರು ಕೇಂದ್ರ ಸಚಿವ ಸೋಮಣ್ಣ ದಂಪತಿಗೆ ಆಶೀರ್ವಾದ ಮಾಡಿದರು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ನನಗೆ ಟ್ವೀಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಆ ಟ್ವೀಟ್ ಓದಿದರೆ ನಿಜಕ್ಕೂ ಖುಷಿಯಾಗುತ್ತದೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶನಿವಾರ ಭೇಟಿ ನೀಡಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಪ್ರಧಾನಿ ನರೇಂದ್ರ ಮೋದಿ ನನಗೆ ಟ್ವೀಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಆ ಟ್ವೀಟ್ ಓದಿದರೆ ನಿಜಕ್ಕೂ ಖುಷಿಯಾಗುತ್ತದೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.ನಗರದ ಸಿದ್ದಗಂಗಾ ಮಠಕ್ಕೆ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶನಿವಾರ ಭೇಟಿ ನೀಡಿ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದು ಮಾತನಾಡಿದರು. ಎಲ್ಲದಕ್ಕಿಂತ ದೊಡ್ಡದ್ದು ದೇಶ ಎನ್ನುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನಿಜಕ್ಕೂ ಹೆಮ್ಮೆ ಎನಿಸುತ್ತದೆ. ನನ್ನ ಸಂಪುಟದಲ್ಲಿ ನೀವು ಇದ್ದೀರಾ, ನಿಮಗೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯ ಕೆಲಸವನ್ನು ದೇಶಕ್ಕಾಗಿ ಮಾಡಿ, ಈ ದೇಶದ ಮುಂದಿನ ಪೀಳಿಗೆಗೆ ಏನಾದರೂ ಕೊಡುಗೆ ಕೊಡಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ ಎಂದು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಪೋನ್ ಮಾಡಿ ಶುಭಾಶಯ ಕೋರಿದರು. ಪೋನ್ ಮಾಡಿದಾಗ ನಿಮಗೆ 73 ವರ್ಷನಾ ಅಂತ ಕೇಳಿದರು. ನನಗೆ 73 ವರ್ಷ ಆಗಿರೋದು ಅವರಿಗೆ ಆಶ್ವರ್ಯ, ನಾನು ಒಳ್ಳೆಯ ಕೆಲಸ ಮಾಡುತ್ತೀನಿ ಎನ್ನುವ ನಂಬಿಕೆ ಅವರಿಗಿದೆ. ಅವರ ನಂಬಿಕೆಗೆ ಪೂರಕವಾಗಿ ನಾನು ಕೆಲಸ ಮಾಡಿ ತೋರಿಸುತ್ತೇನೆ ಎಂದರು.ಹುಟ್ಟುಹಬ್ಬದ ದಿನದಂದ ಶ್ರೀ ಮಠಕ್ಕೆ ಬಂದು ಆಶಿರ್ವಾದ ಪಡೆದಿದ್ದೇನೆ. ಪಕ್ಷ ನನಗೆ ಕೊಟ್ಟಿರುವ ಜವಾಬ್ದಾರಿ ಖುಷಿ ತಂದಿದೆ. ವರಿಷ್ಠರು ಕೊಡುತ್ತಿರುವ ಸಹಕಾರ ಇನ್ನಷ್ಟು ಕೆಲಸ ಮಾಡಲು ಪ್ರೇರಣೆ ನೀಡಿದೆ ಎಂದರು.

ರೈಲುಗಳ ಓಡಾಟದಲ್ಲಿ ವಿಳಂಬವಾಗುತ್ತಿರುವ ವಿಚಾರ‌:

ಈಗ ಮಳೆಗಾಲ ಆಗಿರುವುದರಿಂದ ರೈಲುಗಳ ಸಂಚಾರದಲ್ಲಿ ಸ್ವಲ್ಪ ವಿಳಂಬ ಆಗುತ್ತಿದೆ. ಎಲ್ಲಾ ರೈಲುಗಳ ಪ್ರಯಾಣದಲ್ಲಿ ವಿಳಂಬ ಆಗಿಲ್ಲ. ಒಂದು ಟ್ರಾಕ್ ಮೇಲೆ ಒಂದೇ ಟ್ರೈನ್ ಹೋಗೋಕೆ ಮಾತ್ರ ಆಗೋದು. ಹಾಗಾಗಿ ರೈಲ್ವೆ ಸಂಚಾರದ ವೇಳಾಪಟ್ಟಿಯಲ್ಲಿ ವ್ಯತ್ಯಾಸ ಆಗಿದೆ. ಮಳೆಗಾಲ ಆಗಿರುವುದರಿಂದ ತಾಂತ್ರಿಕ ಸಮಸ್ಯೆ ಆಗಿದೆ ಅಷ್ಟೆ. ಯಾವುದೇ ರೀತಿಯ ಸಮಸ್ಯೆ ಆಗಬಾರದು ಎಂದು ಅಧಿಕಾರಿಗಳು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

ನ್ಯಾಫೇಡ್ ಕೇಂದ್ರದಲ್ಲಿ ಕೊಬ್ಬರಿ ಖರೀದಿ ಹೆಚ್ಚಳ ವಿಚಾರ:

ರಾಜ್ಯ ಸರ್ಕಾರ ಕೊಬ್ಬರಿ ಖರೀದಿಯನ್ನು ಮೂರು ಜಿಲ್ಲೆಗೆ ಸೀಮಿತಗೊಳಿಸಿತ್ತು. ನಾನು ಸ್ವತಃ ಕೃಷಿ ಇಲಾಖೆ ಸಚಿವರು, ಸಹಕಾರ ಸಚಿವರು ಹಾಗೂ ಕಾರ್ಯದರ್ಶಿ ಅಜಯ್ ನಾಗಭೂಷಣ್‌ಗೆ ದೂರವಾಣಿ ಕರೆ ಮಾಡಿ ಮಾತನಾಡಿ ಮತ್ತೆ 7 ಜಿಲ್ಲೆಗಳನ್ನು ಸೇರಿಸಿ ಹೆಚ್ಚುವರಿ ಕೊಬ್ಬರಿ ಖರೀದಿಗೆ ಆದೇಶ ಮಾಡಿಸಲಾಗಿದೆ ಎಂದು ಹೇಳಿದರು.ಶಾಸಕರಾದ ಬಿ. ಸುರೇಶ್‌ಗೌಡ, ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಭೈರಣ್ಣ ದಿಲೀಪ್ ಗ್ಯಾಸ್ ಬಾಬು ಉಪಸ್ಥಿತರಿದ್ದರು.

ಐದು ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ₹350 ಕೋಟಿರಾಜ್ಯದಲ್ಲಿ 5 ರೈಲ್ವೆ ಮೇಲ್ಸೇತುವೆ ನಿರ್ಮಾಣ ಯೋಜನೆಗೆ ಕೇಂದ್ರ ಸರ್ಕಾರ ಸಮ್ಮತಿಸಿದ್ದು, ₹ 350 ಕೋಟಿ ಈ ಯೋಜನೆಗೆ ಭರಿಸಲಿದೆ. ಈ ಹಿಂದಿನ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಶೇ. 50 ರಷ್ಟು ಹಣ ಕೊಡಬೇಕಾಗುತ್ತದೆ. ಆದರೆ ಈಗ ಕೊಡುತ್ತದೋ, ಬಿಡುತ್ತದೋ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಸೋಮಣ್ಣ ಮಾರ್ಮಿಕವಾಗಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!