ಪ್ರಬಲ ರಾಷ್ಟ್ರ ನಿರ್ಮಾಣ ಪ್ರಧಾನಿ ಮೋದಿ ಗುರಿ: ಅರುಣಕುಮಾರ ಪೂಜಾರ

KannadaprabhaNewsNetwork |  
Published : Feb 11, 2024, 01:47 AM ISTUpdated : Feb 11, 2024, 05:19 PM IST
News

ಸಾರಾಂಶ

ಕಳೆದ ಎರಡು ಅವಧಿಯ ತಮ್ಮ ಆಳ್ವಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಹ ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು

ಕಳೆದ ಎರಡು ಅವಧಿಯ ತಮ್ಮ ಆಳ್ವಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಹ ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ಮೂರು ದಿನಗಳ ಕಾಲ ನಡೆಯಲಿರುವ ಗ್ರಾಮ ಚಲೋ ಅಭಿಯಾನಕ್ಕೆ ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. 

ಗ್ರಾಮೀಣ ಭಾಗಗಳ ಅಭ್ಯುದಯದಿಂದ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ 2047ರ ಹೊತ್ತಿಗೆ ಭಾರತ ವಿಶ್ವದಲ್ಲಿ ಪ್ರಬಲ ರಾಷ್ಟ್ರವಾಗಿ ಹೊರ ಹೊಮ್ಮಬೇಕು ಎಂಬುದು ಪ್ರಧಾನಿ ಮೋದಿ ಅವರ ಚಿಂತನೆಯಾಗಿದೆ. 

ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳು, ಸಾಧನೆಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳನ್ನು ಮನೆ ಮನೆಗಳಿಗೆ ತಲುಪಿಸಿ, ಮಗದೊಮ್ಮೆ ಮೋದಿ ಅವರನ್ನು ಪ್ರಧಾನಿ ಪಟ್ಟಕ್ಕೇರಿಸುವ ಸಲುವಾಗಿ ಅವಿರತವಾಗಿ ಶ್ರಮಿಸಬೇಕು ಎಂದರು.

ಕಾರ್ಯಕ್ರಮದ ಅಂಗವಾಗಿ ಗ್ರಾಮದ ವಿವಿಧ ವಾರ್ಡ್‌ಗಳ ಗೋಡೆಗಳ ಮೇಲೆ ಮೋದಿ ಮತ್ತೊಮ್ಮೆ ಗೋಡೆ ಬರಹ ಬರೆಯಲಾಯಿತು. ಬೂತ್ ಸಮಿತಿಗಳನ್ನು ರಚಿಸಿ ಸಭೆ ನಡೆಸಲಾಯಿತು ಹಾಗೂ ಫಲಾನುಭವಿಗಳ ಮನೆಗೆ ಭೇಟಿ ನೀಡಲಾಯಿತು.

ಬಸವರಾಜ ಹುಲ್ಲತ್ತಿ, ರಮೇಶ ನಾಯಕ, ಗಣೇಶ ಬಡಿಗೇರ, ನಾಗರಾಜ ಹೊನ್ನತ್ತಿ, ಮಲ್ಲಿಕಾರ್ಜುನ ಮಸಿಯಪ್ಪನವರ, ಅಶೋಕ್ ಪಾಸಿಗರ, ಕುಮಾರ್ ಗೌಡ್ರು, ಮಂಜು ಬಾರ್ಕಿ, ಸುಭಾಷ್ ಬಾರ್ಕಿ, ರಾಜು ಕರಿಗೌಡರ, ಲಕ್ಷ್ಮಣ ಸಿಂಧೂರ, ಹೊನ್ನಪ್ಪ ಗಡ್ಡೆರ, ನಾಗರಾಜ್ ಮಂಗ್ಲಿ, ಬಸವರಾಜ್ ನಾಯ್ಕರ ಸೇರಿದಂತೆ ಸ್ಥಳೀಯ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಹಾಗೂ ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.

ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ: ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡೇಶ ಕಳ್ಳೇರ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದರು.

ಸುಮಾರು ೧೫೦ ಮನೆಗಳ ಸಂಪರ್ಕ ಮಾಡಿ, ಹಿರಿಯ ಮತದಾರರಿಗೆ ಸನ್ಮಾನ ಮಾಡಲಾಯಿತು. ಅಭಿಯಾನದ ಜಿಲ್ಲಾ ಸಂಚಾಲಕ ನಿರಂಜನ ಹೇರೂರು, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಯೋಜನೆ ಬಗ್ಗೆ ತಿಳಿಸಿ ಅದನ್ನು ಸದುಪಯೋಗಪಡಿಸಿಕೊಳ್ಳಲು ಕರೆ ನೀಡಿದರು. ಈ ವೇಳೆ ಬಸವರಾಜ ಕಳಸೂರ, ಗಿರೀಶ ತುಪ್ಪದ, ಪ್ರಕಾಶ ಪತ್ತಾರ, ವೀರಣ್ಣ ಅಂಗಡಿ ಇತರರು ಇದ್ದರು.

PREV

Latest Stories

ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ
ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ
ರಾಷ್ಟ್ರೀಯ ಲೋಕ ಅದಾಲತ್: 58.67 ಲಕ್ಷ ಕೇಸ್ ಇತ್ಯರ್ಥ