ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಕಲಬುರ್ಗಿಯಲ್ಲಿ ಬಿಜೆಪಿ ಸಂಭ್ರಮ

KannadaprabhaNewsNetwork |  
Published : Jun 10, 2024, 12:32 AM IST
ಫೋಟೋ- ಬಿಜೆಪಿ 1 ಮತ್ತು ಬಿಜೆಪಿ 2 | Kannada Prabha

ಸಾರಾಂಶ

ಸತತ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಬಿಜೆಪಿಯ ಕಾರ್ಯಕರ್ತರು, ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಸಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಸತತ ಮೂರನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ಬಿಜೆಪಿಯ ಕಾರ್ಯಕರ್ತರು, ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಎಂಎಲ್ಸಿ ಅಮರನಾಥ್ ಪಾಟೀಲ್ ಇದೊಂದು ದೇಶದ ಇತಿಹಾಸದಲ್ಲಿ ಐತಿಹಾಸಿಕ ಕ್ಷಣ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು.

ಎನ್ ಡಿ ಎ ಮೈತ್ರಿ ಕೂಟ ದ ನಾಯಕರಾಗಿ ಭಾರತವನ್ನು ವಿಕಸಿತ ರಾಷ್ಟ್ರವಾಗಿಸಲು ಸಂಕಲ್ಪ ತೊಟ್ಟಿರುವ ಪ್ರಧಾನಿ ಮೋದಿ ದೇಶವನ್ನು ಅಭಿವೃದ್ಧಿಯ ಕಡೆಗೆ ತೆಗೆದುಕೊಂಡು ಹೋಗಲಿದ್ದಾರೆ ಎಂದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಮಾತನಾಡಿ ದೇಶದ ಇತಿಹಾಸದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರ ಗದ್ದುಗೆ ಏರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವವಿ ಮೆಚ್ಚಿದ ನಾಯಕನಾಗಿದ್ದರೆ ಭಾರತವನ್ನು ಬಲಿಷ್ಠ ಮತ್ತು ಸದೃಢ ರಾಷ್ಟ್ರವನ್ನಾಗಿಸಲು ಮೋದಿ ಅವರಿಗೆ ಕೈಜೋಡಿಸಿದ ಎಲ್ಲಾ ಮಿತ್ರ ಪಕ್ಷದ ನಾಯಕರಿಗೆ ಧನ್ಯವಾದಗಳು. ಈ ಐತಿಹಾಸಿಕ ಗೆಲುವಿಗೆ ಕಾರಣರಾದ ದೇಶದಾದ್ಯ ದೇಶದ ಎಲ್ಲಾ ಮತದಾರರಿಗೆ, ನಾಯಕರಿಗೆ, ಕಾರ್ಯಕರ್ತರಿಗೆ ಅನಂತ ಧನ್ಯವಾದಗಳು ಎಂದರು.

ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರಾದ ಶರಣಪ್ಪ ತಳವಾರ್, ಲಿಂಗರಾಜ ಬಿರಾದಾರ್, ಶಿವಯೋಗಿ ನಾಗನಹಳ್ಳಿ, ಅರವಿಂದ್ ಪದ್ದಾರ್, ಭಾಗೀರಥಿ ಗುನ್ನಾಪುರ, ಮಹೇಶ್ ಚವಾನ್ ಪ್ರೀತಂ ಪಾಟೀಲ್, ಗೋಪಾಲ್ ಕೃಷ್ಣ ಕುಲಕರ್ಣಿ, ಶ್ರೀಧರ್ ಚೌಹಾನ್, ರೇಣುಕಾಚಾರ್ಯ ಸಲಗರ್ ರಾಜುಗೌಡ ನಾಗನಹಳ್ಳಿ, ರಾಹುಲ್ ಬಬಲಾದ ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!