ಐಟಿಐ ತರಭೇತಿದಾರ ಎಚ್.ಎಸ್.ಪ್ರಸಾದ್‌ ಗೆ ಪ್ರಧಾನಿ ಪ್ರಶಂಶನೀಯ ಪತ್ರ

KannadaprabhaNewsNetwork |  
Published : Oct 13, 2023, 12:15 AM IST
ಬೇಗೂರು ಐಟಿಐ ತರಭೇತಿದಾರ ಎಚ್.ಎಸ್.ಪ್ರಸಾದ್‌ ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಶನೀಯ ಪತ್ರ | Kannada Prabha

ಸಾರಾಂಶ

ತಾಲೂಕಿನ ಬೇಗೂರು ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ತರಭೇತುದಾರ ಎಸ್‌.ಎಸ್.ಪ್ರಸಾದ್‌ ಪರೀಕ್ಷಾ ಪೇ ಚರ್ಚಾ ದಲ್ಲಿ ಭಾಗವಹಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿ ಪ್ರಶಂಸನೀಯ ಪತ್ರ ಬರೆದಿದ್ದಾರೆ.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ತರಭೇತುದಾರ ಎಸ್‌.ಎಸ್.ಪ್ರಸಾದ್‌ ಪರೀಕ್ಷಾ ಪೇ ಚರ್ಚಾ ದಲ್ಲಿ ಭಾಗವಹಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿ ಪ್ರಶಂಸನೀಯ ಪತ್ರ ಬರೆದಿದ್ದಾರೆ. ಪ್ರಧಾನಿ ಮೋದಿ ತರಭೇತಿದಾರ ಎಚ್.ಎಸ್.ಪ್ರಸಾದ್ ಗೆ ಬರೆದ ಪತ್ರದಲ್ಲಿ ‘ಪರೀಕ್ಷಾ ಪೇ ಚರ್ಚಾ’ ದಲ್ಲಿ ಪೋಷಕರಾಗಿ ನಿಮ್ಮ ಉತ್ಸಾಹಭರಿತ ಪಾಲ್ಗೊಳ್ಳುವಿಕೆ ನಿಜವಾಗಿಯೂ ಹೃದಯಸ್ಪರ್ಶಿಯಾಗಿದೆ. ನಿಮ್ಮ ಪಾಲ್ಗೊಳ್ಳುವಿಕೆಯು ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಮಾತ್ರವಲ್ಲದೇ ನಮ್ಮ ಯುವ ಪೀಳಿಗೆ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವಲ್ಲಿ ಹೊಂದಿರುವ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ. ಮಾರ್ಗದರ್ಶಿಗಳು ಮತ್ತು ಪೋಷಕರಾಗಿ, ಪ್ರತಿಯೊಂದು ಹಂತದಲ್ಲೂ ಮಕ್ಕಳಿಗೆ ನೀವು ಅತ್ಯಂತ ಸ್ಫೂರ್ತಿ ನೀಡುತ್ತೀರಿ ಮತ್ತು ಅವರ ಆತ್ಮವಿಶ್ವಾಸವನ್ನು ಬಲಗೊಳಿಸಲು ನೆರವಾಗುತ್ತೀರಿ ಎಂಬುದು ನನ್ನ ದೃಢವಾದ ನಂಬಿಕೆ. 21ನೇ ಶತಮಾನವು ಅವಕಾಶಗಳ ಯುಗ, ಬಾಹ್ಯಾಕಾಶದಿಂದ ಕ್ರೀಡೆಯವರೆಗೆ, ನವೋದ್ಯಮಗಳಿಂದ ತಂತ್ರಜ್ಞಾನದವರೆಗೆ,ತಾಂತ್ರಿಕತೆಯಿಂದ ಕಲೆಯವರೆಗೆ,ಯುವ ಸಮೂಹಕ್ಕೆ ಪ್ರಜ್ವಲಿಸಲು ಹಲವಾರು ಮಾರ್ಗಗಳಿವೆ.ಅಸಾಧಾರಣ ಕೌಶಲ್ಯ ಮತ್ತು ಅಪಾರ ಶಕ್ತಿಯುಳ್ಳ ಈಗಿನ ಯುವ ಸಮೂಹಕ್ಕೆ ಯಾವುದೇ ಕನಸನ್ನು ನನಸಾಗಿಸುವುದು ಅಸಾಧ್ಯವಲ್ಲ. ಭವ್ಯ, ಸ್ವಾವಲಂಬಿ ಭಾರತ ನಿರ್ಮಿಸಲು ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಸಮರ್ಪಣಾ ಭಾವದ ಪ್ರಯತ್ನಗಳಿಗೆ ಇದೊಂದು ಅವಕಾಶ. ಇದು ನಮ್ಮ ಯುವ ಸಮೂಹಕ್ಕೆ ಮಾತ್ರವಲ್ಲದೇ ದೇಶದ ಭವಿಷ್ಯವನ್ನು ರೂಪಿಸುವ ನಿರ್ಣಾಯಕ ಅವಧಿಯಾಗಿದೆ. ಸಾಮೂಹಿಕ ಸಂಕಲ್ಪ ಮತ್ತು ಪ್ರಯತ್ನಗಳಿಗಾಗಿ ನಾವೆಲ್ಲರೂ ಒಟ್ಟಿಗೆ ಮುನ್ನಡೆಯೋಣ.ರಾಷ್ಟ್ರದ ಅಭ್ಯುದಯದಲ್ಲಿ ಎಲ್ಲರೂ ಸಕ್ರಿಯ ಪಾಲುದಾರರಾಗುತ್ತೇವೆ ಎಂಬ ಬಗ್ಗೆ ನನಗೆ ವಿಶ್ವಾಸವಿದೆ.ಸದಾಶಯಗಳು ಮತ್ತು ಶುಭ ಹಾರೈಕೆಗಳೊಂದಿಗೆ ನಿಮ್ಮ ನರೇಂದ್ರ ಮೋದಿ - 12ಜಿಪಿಟಿ5 ಎಚ್.ಎಸ್.ಪ್ರಸಾದ್‌ 12ಜಿಪಿಟಿ6 ಬೇಗೂರು ಐಟಿಐ ತರಭೇತಿದಾರ ಎಚ್.ಎಸ್.ಪ್ರಸಾದ್‌ ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಶನೀಯ ಪತ್ರ ಬರೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌