ಬೆಳಗಾವಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಾಟೆ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿರುವುದಕ್ಕೆ ಕಿಡಿಕಾರಿದ ಸಚಿವ ಸತೀಶ ಜಾರಕಿಹೊಳಿ, ಮೋದಿ ಅವರಿಗೆ ಈ ವಿಷಯ ಬಿಟ್ಟು ಬೇರೆ ಏನಾದರೂ ಇದೆಯಾ ಎಂದು ಪ್ರಶ್ನಿಸಿದರು.

ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 60 ಸಾವಿರ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಆಕಸ್ಮಿಕವಾಗಿ ಒಂದು ಕಡೆ ಇಂತಹ ಘಟನೆ ನಡೆದಿರಬಹುದು. ಈ ಕುರಿತು ಕ್ರಮ ಕೈಗೊಳ್ಳಲು ಪೊಲೀಸರು ಇದ್ದಾರೆ. ಅವರು ಕ್ರಮ ಕೈಗೊಳ್ಳುತ್ತಾರೆ. ಈ ವಿಚಾರವನ್ನು ಮೋದಿ ಗಂಭೀರವಾಗಿ ಏಕೆ ತೆಗೆದುಕೊಳ್ಳಬೇಕು ಎಂದು ಪ್ರಶ್ನಿಸಿದರು.
ಶಾಸಕ ಮುನಿರತ್ನ ಬಂಧನದ ಹಿಂದೆ ಯಾವುದೇ ದ್ವೇಷದ ರಾಜಕಾರಣ ಇಲ್ಲ. ಬಾಯಿಗೆ ಬಂದಂತೆ ಮಾತನಾಡಲು ಶಾಸಕ ಮುನಿರತ್ನ ಅವರಿಗೆ ನಾವು ಹೇಳಿದ್ದೇವಾ? ಜೆಡಿಎಸ್, ಬಿಜೆಪಿಯವರು ಹೇಳಿದ್ದರಾ? ಎಂದು ಸತೀಶ ಜಾರಕಿಹೊಳಿ ಪ್ರಶ್ನಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.