ಕನ್ನಡಪ್ರಭ ವಾರ್ತೆ ಸಿಂಧನೂರು
ನಗರದ ತಾಲೂಕಾಡಳಿತ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ನಾಯಕ ಸಮಾಜದ ಸಂಯುಕ್ತಾಶ್ರಯದಲ್ಲಿ ಮಿನಿವಿಧಾನಸೌಧ ಕಚೇರಿ ಹಾಗೂ ವಾಲ್ಮೀಕಿ ವೃತ್ತದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಶ್ರಮವಿದ್ದಲ್ಲಿ ಸಾಧನೆ ಮಾಡಬಹುದೆಂದು ತೋರಿಸಿಕೊಟ್ಟಿದ್ದಾರೆ. ಈ ಕಾವ್ಯದಲ್ಲಿ ಅಂಶಗಳು ಸಕಲ ಜನರ ಬದುಕಿಗೆ ಪ್ರೇರಣೆ ಮತ್ತು ಮಾರ್ಗದರ್ಶನವಾಗಿವೆ ಎಂದರು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ರಾಮಾಯಣವನ್ನು ಮೀರಿಸುವ ಮಹಾಕಾವ್ಯಗಳು ಭಾರತದಲ್ಲಿ ರಚನೆಯಾಗಿಲ್ಲ. ಇದು ಕೇವಲ ರಾಮನ ಜೀವನ ಮಾತ್ರವಲ್ಲ. ಪ್ರತಿಯೊಬ್ಬ ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಹೇಗೆ ಬದುಕುಬೇಕು ಎಂದು ಆದರ್ಶಮಯ ತತ್ವವನ್ನು ಒಳಗೊಂಡಿದೆ. ಹೀಗಾಗಿ ವಾಲ್ಮೀಕಿ ಅವರನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿದರು. ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಭೀಮಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಚಾಗಪ್ಪ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಯಂಕಪ್ಪ, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಾದರ್ಲಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ, ಮುಖಂಡರಾದ ಆರ್.ತಿಮ್ಮಯ್ಯ ನಾಯಕ, ಹನುಮಂತಪ್ಪ ಪನ್ನೂರು, ಕುಪೇಂದ್ರ ನಾಯಕ, ಯಂಕೋಬ ನಾಯಕ ರಾಮತ್ನಾಳ, ನಿರುಪಾದೆಪ್ಪ ಗುಡಿಹಾಳ ವಕೀಲ, ಅಮರಯ್ಯಸ್ವಾಮಿ ಅಲಬನೂರು, ಚಂದ್ರೇಗೌಡ ಹರೇಟನೂರು, ಕೆ.ಮರಿಯಪ್ಪ, ವೆಂಕಟೇಶ ನಾಯಕ ರಾಗಲಪರ್ವಿ ಭಾಗವಹಿಸಿದ್ದರು.