ಸಭೆ, ಸಮಾರಂಭ, ಚುನಾವಣಾ ಪ್ರಚಾರಕ್ಕೆ ಪೂರ್ವಾನುಮತಿ ಕಡ್ಡಾಯ

KannadaprabhaNewsNetwork |  
Published : Mar 20, 2024, 01:16 AM IST
ರಾಜಕೀಯ ಪಕ್ಷಗಳ ಪ್ರಮುಖರ ಸಭೆಯಲ್ಲಿ ಮಾತನಾಡುತ್ತಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌. | Kannada Prabha

ಸಾರಾಂಶ

ಮಾದರಿ ನೀತಿ ಸಂಹಿತೆಯು ಎಲ್ಲ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು, ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಲೋಕಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರಾಜಕೀಯ ಪಕ್ಷಗಳು ಚುನಾವಣೆ ಸಂಬಂಧ ನಡೆಸುವ ಸಭೆ- ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳು, ವಾಹನ ಬಳಕೆಗಾಗಿ ಅನುಮತಿ ಪಡೆಯಲು ಚುನಾವಣಾಧಿಕಾರಿ ಕಚೇರಿಯಲ್ಲಿ ತೆರೆಯಲಾಗಿರುವ ಏಕ ಗವಾಕ್ಷಿ ಪದ್ಧತಿಯಡಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು ‘ಸುವಿಧಾ ಆಪ್’ ಪರಿಚಯಿಸಿದೆ. ಈ ಆಪ್ ಮೂಲಕವೂ ಅನುಮತಿ ಪಡೆಯಬಹುದು. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಮತ್ತು ವಾಹನ ಪರವಾನಗಿಗಾಗಿಯೂ ಅನುಮತಿ ಪಡೆಯಬೇಕು. ಸ್ಟಾರ್ ಪ್ರಚಾರಕರು ಹಾಗೂ ಪ್ರಚಾರ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಮಾದರಿ ನೀತಿ ಸಂಹಿತೆಯು ಎಲ್ಲ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು, ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕು ಎಂದರು.ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್,‌ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೇಶ್ವರ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಲಲಿತಾ ಕೆರಿಮನಿಗೆ ಅಧಿಕೃತ ಆಹ್ವಾನ
ನಿಸ್ವಾರ್ಥ ಕಾಯಕವೇ ಶರಣತ್ವದ ಮಾರ್ಗ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ