ಕನ್ನಡಪ್ರಭ ವಾರ್ತೆ ವಿಜಯಪುರ
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಭಾನುವಾರ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರಕ್ಕೆ ಸರಬರಾಜು ಮಾಡುವ ಕುಡಿಯುವ ನೀರು ಸ್ವಚ್ಛ ಹಾಗೂ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಮುಂಗಾರು ಮಳೆ ಕೊರತೆಯಾದ ಹಿನ್ನೆಲೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜಿಲ್ಲೆಗೆ ಅಗತ್ಯವಿರುವ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಅಗತ್ಯ ಯೋಜನೆ ರೂಪಿಸಬೇಕು. ಕುಡಿಯುವ ನೀರು ಸಮಸ್ಯೆ ಉಲ್ಬಣಿಸದಂತೆ ಅಗತ್ಯ ಪೂರ್ವ ಯೋಜನೆ ಮಾಡಿಕೊಳ್ಳಬೇಕು. ನಿಯಮಿತವಾಗಿ ನೀರು ಸರಬರಾಜು ಮಾಡಬೇಕು. 3ನೇ ಹಂತದಲ್ಲಿ ನಗರದ ಜನತೆಗೆ ನಿತ್ಯ ನೀರು ಪೂರೈಸಲು, ತಕ್ಷಣ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ ಅವರು, ಪ್ರತಿ ಮನೆ-ಮನೆಗೂ ಮೀಟರ್ ಅಳವಡಿಸಲು ತಿಳಿಸಿದರು. ಸ್ವಚ್ಛತೆಗೆ ಸಂಬಂಧಿಸಿದಂತೆ ಹಸಿ ಮತ್ತು ಒಣ ಕಸವನ್ನು ಪ್ರತಿ ಮನೆಯಿಂದಲೇ ಪ್ರತ್ಯೇಕವಾಗಿ ವಿಂಗಡಣೆಯಾಗಬೇಕು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಆ ನಗರದಲ್ಲಿ ಸ್ವಚ್ಛತೆಗೆ ಪ್ರಾಧಾನ್ಯತೆ ನೀಡಬೇಕು, ಪ್ರತ್ಯೇಕವಾಗಿ ಸಂಗ್ರಹಿಸಲಾದ ಕಸವನ್ನು ಸಂಸ್ಕರಣ ಮಾಡಬೇಕು. ಇದಕ್ಕೆ ಅಗತ್ಯವಾದ ಯಂತ್ರೋಪಕರಣ ಖರೀದಿಸಬೇಕು ಎಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಆಸ್ತಿಗೆ ಸಂಬಂಧಿಸಿದಂತೆ ಜೆಐಎಸ್ ಮತ್ತು ಜೆಪಿಎಸ್ ಗೆ ಪ್ರತ್ಯೇಕ ಡಾಟಾ ಸಂಗ್ರಹಿಸಬೇಕು. ಜನ ತೆರಿಗೆ ಕಟ್ಟುವುದನ್ನು ಕ್ರಾಸ್ ಚೆಕ್ ಮಾಡಿಕೊಳ್ಳಬೇಕು. ಮಳೆಗಾಲದಲ್ಲಿ ನಗರದಲ್ಲಿ ಪ್ರವಾಹ ಉಂಟಾದಾಗ ರಸ್ತೆ ಹಾಳಾಗದಂತೆ ಕ್ರಮ ಕೈಗೊಳ್ಳಬೇಕು, ನಗರದಲ್ಲಿನ ರಸ್ತೆ, ಚರಂಡಿ ಹಾಗೂ ಘನ ತ್ಯಾಜ್ಯ ವಿಲೇವಾರಿ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನಹರಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಅಮೃತ್ ಯೋಜನೆ 1.0 ಮತ್ತು 2.0 ಕಾಮಗಾರಿಗಳ ಪ್ರಗತಿ ಕುರಿತು ಸಚಿವರು ಸಭೆಯಲ್ಲಿ ಮಾಹಿತಿ ಪಡೆದರು. ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ಹಾಗೂ ಪ್ರಸ್ತುತ ಸ್ಥಿತಿಗತಿಯ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದು, ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಮೂರನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿಗೆ ಕ್ರಮ:
ಈ ನಿಟ್ವಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಮುಖ್ಯಮಂತ್ರಿ ಅವರ ಗಮನಸೆಳೆಯುವೆ. ಅದಕ್ಕೆ ಸಚಿವರು ಸ್ಪಂದಿಸುವ ಮೂಲಕ ವಿಜಯಪುರ ನಗರಕ್ಕೆ ಮೂರನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು. ಆದಾಗ್ಯೂ ನಾವು ನಗರದ ಜನರಿಗೆ ನಿರಂತರ ಹಾಗೂ ಸಮರ್ಪಕ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಉಪಮೇಯರ್ ಸುಮಿತ್ರಾ ಜಾಧವ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.