ಗ್ರಾಮೀಣ ಭಾಗದ ದಲಿತ ಕೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ

KannadaprabhaNewsNetwork |  
Published : Sep 07, 2025, 01:00 AM IST
ಗ್ರಾಮೀಣ ಭಾಗದ ದಲಿತ ಕೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ | Kannada Prabha

ಸಾರಾಂಶ

ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯ ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯ ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿತ್ತು.ತಾಲೂಕಿನ ದಲಿತ ಮುಖಂಡರು ದಲಿತ ಕಾಲೋನಿಗಳಲ್ಲಿ ಅನೈರ್ಮಲ್ಯ, ಸ್ಮಶಾನ, ಜೆಜೆಎಂ ಕಾಮಗಾರಿ ವಿಳಂಬ, ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಯಿತು. ಗ್ರಾಮೀಣ ಭಾಗದ ದಲಿತ ಕೇರಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದಲಿತ ಮುಖಂಡರು ಅಧಿಕಾರಿಗಳ ವಿರುದ್ದ ಗರಂ ಆದ ಘಟನೆ ನಡೆಯಿತ್ತು. ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡುವಂತೆ ಪಪಂ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದಲಿತ ಮುಖಂಡರು ಪ್ರಶ್ನೆ ಮಾಡಿದಾಗ ಪಪಂ ಮುಖ್ಯಾಧಿಕಾರಿಗಳು ವಾಲ್ಮೀಕಿ ಪುತ್ತಳಿ, ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣ, ಸೇರಿದಂತೆ ಹಲವಾರ ಗಣ್ಯ ವ್ಯಕ್ತಿಗಳ ಪುತ್ತಳಿ ಇಡಲು ಮನವಿಗಳು ಬಂದಿದ್ದು, ಸರ್ಕಾರದ ನಿಯಮದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪುತ್ತಳಿ ಇಡಲು ಅವಕಾಶ ಇಲ್ಲ ಎಂದು ಪಪಂ ಸಭೆಯಲ್ಲಿ ತಿರ್ಮಾನ ಮಾಡಲಾಗಿದೆ ಎಂದು ತಿಳಿಸಿದಾಗ ದಲಿತ ಮುಖಂಡರು ಪಪಂ ದಲಿತ ವಿರೋಧಿ ಎಂದು ಘೋಷಣೆ ಕೂಗಿದರು.ಇದೆ ಸಂದರ್ಭದಲ್ಲಿ ಪಪಂ ಸದಸ್ಯರಾದ ನಂದೀಶ್ ಹಾಗೂ ಓಬಳರಾಜು ಮಾತನಾಡಿ, ಪಪಂಯಲ್ಲಿ ಅತಿಹೆಚ್ಚು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರು ಹೊಂದಿದ್ದು, ಕೊರಟಗೆರೆ ಪಟ್ಟಣದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಯಾವ ಸದಸ್ಯರ ವಿರೋಧವಿಲ್ಲ, ಎಷ್ಟು ಅಹವಾಲು ಬಂದಿದ್ದರೂ ಸರ್ವಸದಸ್ಯರ ತೀರ್ಮಾನ ಮಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಗಮನಕ್ಕೆ ತಂದು ಅವರ ಸಮ್ಮುಖದಲ್ಲಿ ಸಂಬಂಧಪಟ್ಟ ಮುಖಂಡರು ಹಾಗೂ ಪಪಂ ಸದಸ್ಯರು ಜೊತೆಗೂಡಿ ಸಭೆ ಮಾಡಿ ಒಂದೊಂದು ಸ್ಥಳದಲ್ಲಿ ಪ್ರತಿಮೆ ನಿರ್ಮಾಣ ಮಾಡಲು ಮನವಿ ಮಾಡಿಕೊಳ್ಳೋಣ ಎಂದು ತಿಳಿಸಿದರು.ತಹಸೀಲ್ದಾರ್ ಮಂಜುನಾಥ್ ಮಾತನಾಡಿ ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರು ಹತ್ತು ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಯಿತು. ಅನೇಕ ಕೆಲಸಗಳ ಮಾಡಲಾಗಿದ್ದು, ಉಳಿದ ಸಮಸ್ಯೆಗಳ ಬಗ್ಗೆ ಸಂಬಂಪಟ್ಟ ಇಲಾಖೆಯ ಅಧಿಕಾರಿಗಳ ಗಮನ ಹರಿಸಿ ಎಂದು ಸೂಚನೆ ನೀಡಲಾಗಿದೆ. ಪಟ್ಟಣದಲ್ಲಿ ಪುತ್ತಳಿ ಇಡುವ ಬಗ್ಗೆ ಈಗಾಗಲೇ ಗೃಹ ಸಚಿವರ ಹತ್ತಿರ ಮಾತನಾಡಲಾಗಿದ್ದು, ಮತ್ತೆ ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ಇಒ ಅಪೂರ್ವ ಅನಂತರಾಮು, ಸಿಪಿಐ ಅನಿಲ್, ಪಿಎಸೈ ತೀಥೇಶ್, ಪಪಂ ಮುಖ್ಯಾಧಿಕಾರಿ ಉಮೇಶ್, ಸಮಾಜ ಕಲ್ಯಾಣ ಇಲಾಖೆಯ ಯಮುನಾ ಪಪಂ ಸದಸ್ಯರಾದ ಓಬಳರಾಜು, ನಟರಾಜ್, ಲಕ್ಮೀನಾರಾಯಣ್, ನಂದೀಶ್, ದಲಿತ ಮುಖಂಡರಾದ ದಾಡಿವೆಂಕಟೇಶ್, ಜಟ್ಟಿನಾಗರಾಜ್, ಶಿವರಾಮ್, ಕಾರ್‌ಮಹೇಶ್, ಗಂಗಣ್ಣ, ನರಸಿಂಹಮೂರ್ತಿ, ಲಕ್ಷ್ಮೀನರಸಯ್ಯ, ಮಂಜುನಾಥ್, ನಾಗರಾಜು, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.

PREV

Recommended Stories

ಭಕ್ತರ ಸಹಕಾರದಿಂದ ದೇವಸ್ಥಾನದಲ್ಲಿ ಹೊಸತನ
ಪತ್ನಿ ಮೇಲೆ ಹಲ್ಲೆಗೈದು ಅರ್ಧ ತಲೆ ಬೋಳಿಸಿದ ಪತಿ