ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಬಿ-ಜಿ ರಾಮ್ ಜಿ, ಗ್ರಾಮೀಣ ವಸತಿ ಯೋಜನೆ, ಸ್ವಚ್ಛ ಭಾರತ ಮಿಷನ್ ಹಾಗೂ ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಿದರು.ಗ್ರಾಮೀಣರಿಗೆ ನಿರಂತರ ಉದ್ಯೋಗ ಕಲ್ಪಿಸಲು ಆದ್ಯತೆ: ಜಿಲ್ಲೆಯಲ್ಲಿ ಬರಗಾಲ ಘೋಷಣೆಯಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗದ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ನಿಗದಿಪಡಿಸಿರುವ ಮಾನವ ದಿನಗಳ ಗುರಿಯನ್ನು ಸಾಧಿಸಬೇಕು. ಕೂಲಿಕಾರ್ಮಿಕರ ಭಾಗವಹಿಸುವಿಕೆ ಹಾಗೂ ಅರ್ಹರಿಗೆ ನಿರಂತರ ಉದ್ಯೋಗ ಒದಗಿಸಬೇಕು ಎಂದು ಸೂಚಿಸಿದರು. ಯೋಜನೆಯಡಿ ಕೆಲಸ ನಿರ್ವಹಿಸಿದ ಕೂಲಿಕಾರರಿಗೆ ನಿಗದಿತ ಅವಧಿಯಲ್ಲಿ ಕೂಲಿ ಪಾವತಿಯಾಗುವಂತೆ ಕ್ರಮ ವಹಿಸಬೇಕು. ಕಾಮಗಾರಿ ಸ್ಥಳದಲ್ಲಿ ಹಾಜರಿರುವ ಎಲ್ಲ ಕೂಲಿಕಾರ್ಮಿಕರ ಹಾಜರಾತಿಯನ್ನು ಫೇಸ್ ಅಥೆಂಟಿಕೇಶನ್ ಮೂಲಕ ಎನ್.ಎಂ.ಎ.ಎಸ್.ವ್ಯವಸ್ಥೆಯಲ್ಲಿ ಶೇ.100ರಷ್ಟು ದಾಖಲಿಸಬೇಕು. ಸಮುದಾಯ ಕಾಮಗಾರಿಗಳ ಜೊತೆಗೆ ಅರ್ಹ ಫಲಾನುಭವಿಗಳಿಗೆ ವೈಯಕ್ತಿಕ ಕಾಮಗಾರಿಗಳನ್ನು ಒದಗಿಸಿ, ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯತೆ ಹಾಗೂ ನೀರು ಸರಬರಾಜಿನ ಸ್ಥಿತಿಗತಿಗಳನ್ನು ನಿರಂತರವಾಗಿ ಪರಿಶೀಲಿಸಬೇಕು. ಪೂರೈಕೆಯಲ್ಲಿ ವ್ಯತ್ಯಯ ಕಂಡುಬಂದಲ್ಲಿ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಂಡು, ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು. *ವಸತಿ, ಶೌಚಾಲಯ ನಿರ್ಮಾಣ ಹಾಗೂ ಯುವ ಸಂಘಗಳ ನೋಂದಣಿಗೆ ಒತ್ತು: ಗ್ರಾಮೀಣ ವಸತಿ ಯೋಜನೆಯಡಿ ಬಾಕಿ ಉಳಿದಿರುವ ಮನೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಿ, ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದರು. ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಎಲ್ಲ ಯೋಜನೆಗಳ ಅನುಷ್ಠಾನದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ, ಯೋಜನಾ ನಿರ್ದೇಶಕ ಅಶೋಕ ಕಲಘಟಗಿ, ಜಿಲ್ಲಾ ಮಟ್ಟದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಜಿಲ್ಲಾ ಪಂಚಾಯತಿಯ ಅಧಿಕಾರಿ, ಸಿಬ್ಬಂದಿ ಮತ್ತು ವಿಬಿ-ಜಿ ರಾಮ್ ಜಿ ಯೋಜನೆ ಸಿಬ್ಬಂದಿ ಉಪಸ್ಥಿತರಿದ್ದರು.